ಕನ್ನಡಪ್ರಭ ವಾರ್ತೆ ಚಾಮರಾಜನಗರ
ಪೌರಕಾರ್ಮಿಕರು ಪ್ರತಿನಿತ್ಯ ನಗರ ಸ್ವಚ್ಛತಾ ಕಾಯಕದಲ್ಲಿ ನಿರತರಾಗುವವರು, ಅವಶ್ಯ ಸೌಲಭ್ಯ ನೀಡಿಕೆಯಲ್ಲಿ ಅವರನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು. ಪೌರಕಾರ್ಮಿಕರಿಗೆ ಇಎಸ್ಐ ಕಾರ್ಡ್ ಒದಗಿಸಬೇಕು. ವೈದ್ಯಕೀಯ ವೆಚ್ಚ ಮರುಪಾವತಿ ಹಾಗೂ ವಿದ್ಯಾರ್ಥಿವೇತನ ಸೌಲಭ್ಯ ನೀಡಬೇಕು. ಪ್ರತಿ ತಿಂಗಳ ವೇತನದ ಜೊತೆಗೆ ಸಂಕಷ್ಟ ಭತ್ಯೆ ನೀಡಬೇಕು. ನಿಗದಿತ ಕಾಲಮಿತಿಯಲ್ಲಿ ವೇತನ ಪಾವತಿಸದ ಏಜೆನ್ಸಿಯನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸಮಾನ ಕೆಲಸಕ್ಕೆ ಸಮಾನ ವೇತನದಡಿ ಹೊರಗುತ್ತಿಗೆ ನೇರ ಪಾವತಿ ಕಾರ್ಮಿಕರನ್ನು ಪರಿಗಣಿಸಲು ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಲು ಬೇಡಿಕೆ ಇದೆ. ಅಲ್ಲದೆ ಗೃಹಭಾಗ್ಯ ಯೋಜನೆಯಡಿ ಸರ್ವೆ ನಂ.65ರಲ್ಲಿ ಪೌರಕಾರ್ಮಿಕರು ಹಾಗೂ ಸಫಾಯಿ ಕರ್ಮಚಾರಿಗಳಿಗೆ ಮನೆ ನಿರ್ಮಾಣಕ್ಕಾಗಿ 2 ಎಕರೆ ಭೂಮಿ ಮಂಜೂರಾಗಿದೆ. ಹಕ್ಕುಪತ್ರಗಳನ್ನು ನೀಡಲಾಗಿದ್ದು, ಮನೆ ನಿರ್ಮಾಣಕ್ಕೆ ಅನುದಾನದ ಅಗತ್ಯವಿದೆ ಎಂದು ತಿಳಿಸಿದರು.ಜಿಲ್ಲೆಯ ಎಲ್ಲ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪೌರಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಿ ಮಾದರಿ ಕಾಲೋನಿ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಆಗಬೇಕಾಗಿರುವ ಕೆಲಸಗಳನ್ನು ಮೇಲಾಧಿಕಾರಿಗಳ ಜೊತೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಮಾಹಿತಿಗಳನ್ನು ಕ್ರೋಢೀಕರಿಸಿ ಪ್ರಸ್ತಾವನೆ ಸಲ್ಲಿಸಬೇಕು. ಪ್ರತಿ ಬಾರಿ ಇದೇ ಸಮಸ್ಯೆಗಳು ಮರುಕಳಿಸಬಾರದು. ಕೌನ್ಸಿಲ್ ಸಭೆ ನಡೆಯುವ ಮೊದಲೇ ಪೌರಕಾರ್ಮಿಕರ ಕುಂದುಕೊರತೆ ಪರಿಹಾರಕ್ಕೆ ಕ್ರಿಯಾಯೋಜನೆ ತಯಾರಿಸಿ ಮಂಡಿಸಬೇಕೆಂದು ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ನಗರಸಭೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯು ಪ್ರತಿ ಮೂರು ತಿಂಗಳಿಗೊಮ್ಮೆ ಪರಿಶಿಷ್ಟ ಜಾತಿ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆ ನಡೆಸಲಿದ್ದು, ಪೌರಕಾರ್ಮಿಕರ ಸಮಸ್ಯೆಗಳನ್ನು ನಿವಾರಿಸಲು ಚಾಮರಾಜನಗರ ಹಾಗೂ ಕೊಳ್ಳೆಗಾಲ ನಗರಸಭೆ, ಯಳಂದೂರು ಹಾಗೂ ಹನೂರು ಪಟ್ಟಣ ಪಂಚಾಯಿತಿ ಹಾಗೂ ಗುಂಡ್ಲುಪೇಟೆ ಪುರಸಭೆ ಸೇರಿದಂತೆ ಒಟ್ಟು 5 ಮಂದಿ ಪೌರಕಾರ್ಮಿಕ ಪ್ರತಿನಿಧಿಗಳನ್ನು ಸಭೆಗೆ ಆಹ್ವಾನಿಸುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ವೇಳೆ ನಗರಸಭೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರನ್ನು ಸನ್ಮಾನಿಸಲಾಯಿತು. ಜಿಲ್ಲಾ ನಗರಾಭಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಎಂ.ವಿ.ಸುಧಾ, ನಗರಸಭೆ ಪೌರಾಯುಕ್ತ ಎಸ್.ವಿ.ರಾಮದಾಸ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮುನಿರಾಜು, ನಗರಸಭೆ ಯೋಜನಾಧಿಕಾರಿ ವೆಂಕಟನಾಯಕ್, ಕಂದಾಯ ಅಧಿಕಾರಿ ಶರವಣ, ಹಿರಿಯ ಆರೋಗ್ಯ ನಿರೀಕ್ಷಕರಾದ ಮಂಜುನಾಥ್, ನಾರಾಯಣ್, ಸುಷ್ಮಾ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.