ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಗಳ ಒಂದನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮುದಾಯ ಕೇಂದ್ರ, ಭೂ ಒಡೆತನ, ಅಂಗನವಾಡಿ ಕೇಂದ್ರ, ಗಂಗಾ ಕಲ್ಯಾಣ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಬೊರವೆಲ್ ಕೊರೆಯಿಸುವ ಬಗ್ಗೆ ಸದಸ್ಯರು ವಿಷಯ ಪ್ರಸ್ತಾಪಿಸಿದರು. ಕುಡಿಯುವ ನೀರು, ವಿದ್ಯುತ್ ಸಮಸ್ಯೆ, ಮೂಲಭೂತ ಸೌಲಭ್ಯ ಒದಗಿಸಿ, ಈ ಸಮುದಾಯದ ಕಾಲೋನಿಗಳ ಮಕ್ಕಳಿಗಾಗಿ ಅಂಗನವಾಡಿ ಕೇಂದ್ರ ಸೌಲಭ್ಯ ಒದಗಿಸಿದ್ದು, ಸಮರ್ಪವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈ ಜನಾಂಗದವರ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ಅವರಿಗೆ ದೊರಕಿಸಬೇಕಾದ ಸೌಲಭ್ಯಗಳನ್ನು ತಲುಪಿಸಿ,ಜನಾಂಗದ ಆರ್ಥಿಕ ಅಭಿವೃದ್ಧಿಗಾಗಿ ಮೂಲಭೂತ ಸೌಲಭ್ಯ ಕಲ್ಪಿಸುವುದು ಸೇರಿದಂತೆ ಹಲವಾರು ಯೋಜನೆಗಳನ್ನು ಅರ್ಹರಿಗೆ ತಲುಪಿಸಿ ಜನಾಂಗದವರ ಆರ್ಥಿಕ ಸ್ವಾವಲಂಬನೆ ಹೊಂದಲು ಈ ಸಮುದಾಯಗಳಿಗೆ ಸರ್ಕಾರ ನೀಡುವ ಆರ್ಥಿಕ ಬೆಂಬಲದ ಯೋಜನೆಗಳ ಬಗ್ಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅರಿವು ಜಾಗೃತಿ ಮೂಡಿಸಿ ನಿಗಮದಿಂದ ಅನುಷ್ಟಾನಗೊಳ್ಳುವ ಸರ್ಕಾರದ ವಿವಿಧ ಸೌಲಭ್ಯ- ಸವಲತ್ತುಗಳನ್ನು ಅರ್ಹರು ಪಡೆದುಕೊಳ್ಳಲು ತಿಳಿವಳಿಕೆ ನೀಡುವಂತೆ ಸೂಚಿಸಿದರು.2022 ರಿಂದ 2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಯಡಿ ನಿಗದಿಪಡಿಸಿರುವ ಭೌತಿಕ ಮತ್ತು ಆರ್ಥಿಕ ಗುರಿಗಳ ಮಾಹಿತಿ ವಿವರ ಸಭೆಗೆ ಮಂಡಿಸಲಾಯಿತು. ಈಗಾಗಲೇ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ, ಸ್ವಾವಲಂಬಿ ಸಾರಥಿ ಯೋಜನೆ ಯೋಜನೆಯಡಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ವಿಳಂಬವಾಗದಂತೆ ಕ್ರಮ ವಹಿಸಿ ಯೋಜನೆ ಲಾಭ ಪಡೆದುಕೊಳ್ಳಲು ಅನುಕೂಲ ಮಾಡಿಕೊಡುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು. ಈ ಸಮುದಾಯದ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಕಾರ್ಡ್ ವಿತರಿಸಿ ಅವರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯ ಒದಗಿಸಲು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಮಕ್ಕಳ ಶಿಕ್ಷಣಕ್ಕಾಗಿ ಗ್ರಂಥಾಲಯ ಸ್ಥಾಪನೆ, ನಗರದ ವಾರ್ಡ್ ನಂ.6ರಲ್ಲಿ ಸಮುದಾಯ ಭವನದ ಮುಂಭಾಗದಲ್ಲಿರುವ ಚರಂಡಿ ಸಮರ್ಪಕ ಕಾಮಗಾರಿ, ಅತಿ ಹೆಚ್ಚು ಜನ ವಾಸಿಸುವ ಸ್ಥಳದಲ್ಲಿ ನ್ಯಾಯಬೆಲೆ ಅಂಗಡಿ ಸ್ಥಾಪನೆ, ಬೀದಿ ದೀಪ, ಈ ಸಮುದಾಯ ವಾಸಿಸುವ ಕಾಲೊನಿಯಲ್ಲಿ ಮೂಲಭೂತ ಸೌಕರ್ಯ ಒದಗಿಸಿ ಅಭಿವೃದ್ಧಿ ಪಡಿಸುವಂತೆ ಸಮಿತಿ ಸದಸ್ಯರು ಕೋರಿದರು.