ಜಿಲ್ಲಾಧಿಕಾರಿ ಸೂಚನೆ । ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ
ಕನ್ನಡಪ್ರಭ ವಾರ್ತೆ ಕೊಪ್ಪಳ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಜೈನ, ಸಿಕ್, ಪಾರ್ಸಿ, ಬೌದ್ಧ ಮುಂತಾದ ಸಮುದಾಯಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರಡಿ ವಿವಿಧ ಇಲಾಖೆಗಳ ಯೋಜನೆಗಳಲ್ಲಿ ಶೇ. 15ರಷ್ಟು ಮಿಸಲಾತಿಯನ್ನು ಅಲ್ಪಸಂಖ್ಯಾತರಿಗೆ ನೀಡಬೇಕು. ಈ ಕಾರ್ಯಕ್ರಮದಡಿ ಬರುವ ಎಲ್ಲ ಇಲಾಖೆಗಳು ಅರ್ಹ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕು. ಸಾಮಾಜಿಕ ಮತ್ತು ಅರ್ಥಿಕವಾಗಿ ಸಬಲೀಕರಣಗೊಳಿಸಲು ಸಾಲ ಸೌಲಭ್ಯ ಹಾಗೂ ಇತರ ಸೌಲಭ್ಯಗಳನ್ನು ಒದಗಿಸುವ ಜತೆಗೆ ವೃತ್ತಿಪರ ಕೌಶಲ್ಯ ತರಬೇತಿ ನೀಡಲು ಕ್ರಮ ವಹಿಸಬೇಕು ಎಂದರು.
ಪೋಸ್ಟರ್ ಬಿಡುಗಡೆ:
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಕೊಪ್ಪಳ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸದಸ್ಯ ಮಹಮ್ಮದ್ ನಜೀರುದ್ದೀನ್, ಮೆಹಬೂಬ್ ಪಾಷಾ, ಪ್ರಶಾಂತ ಎಸ್. ದೇಸಾಯಿ, ಸಮೀನಾ ಬೇಗಂ, ಎಂ. ಮದಾರವಲಿ ಸಾಬ್ ಹಾಗೂ ಎಂ.ಡಿ. ಸಿರಾಜ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅಜ್ಮೀರ ಅಲಿ ಹಾಗೂ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಉಪಸ್ಥಿತರಿದ್ದರು.