ನಾರಾಯಣಗುರು ನಿಗಮಕ್ಕೆ ಅನುದಾನ ನೀಡಿ: ಕಾಮತ್‌ ಆಗ್ರಹ

KannadaprabhaNewsNetwork |  
Published : Sep 09, 2025, 01:01 AM IST
ನಾರಾಯಣಗುರು ಪ್ರತಿಮೆಗೆ ನಮನ ಸಲ್ಲಿಸಿದ ಶಾಸಕ ವೇದವ್ಯಾಸ್‌ ಕಾಮತ್‌  | Kannada Prabha

ಸಾರಾಂಶ

ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ ಅಂಗವಾಗಿ ನಗರದ ನಾರಾಯಣಗುರು ವೃತ್ತದಲ್ಲಿರುವ ನಾರಾಯಣಗುರುಗಳ ಭಾನುವಾರ ಪ್ರತಿಮೆಗೆ ಶಾಸಕ ವೇದವ್ಯಾಸ ಕಾಮತ್ ರವರು ಪುಷ್ಪ ನಮನ ಸಲ್ಲಿಸಿದರು.

ಮಂಗಳೂರು: ಕಳೆದ ಎರಡೂವರೆ ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ಒಂದು ಪೈಸೆಯನ್ನೂ ನೀಡದೇ, ಅಧ್ಯಕ್ಷರನ್ನೂ ಘೋಷಿಸದಿರುವುದು ಬೇಸರದ ಸಂಗತಿ. ತಕ್ಷಣ ಸರ್ಕಾರ ಆ ಬಗ್ಗೆ ಎಚ್ಚೆತ್ತುಕೊಂಡು ನಿಗಮಕ್ಕೆ ವಾರ್ಷಿಕವಾಗಿ ಕನಿಷ್ಠ 500 ಕೋಟಿ ರು. ನಿಗದಿಗೊಳಿಸಿ ಆ ಸಮುದಾಯಕ್ಕೆ ಆರ್ಥಿಕ ಶಕ್ತಿ ನೀಡಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ಒತ್ತಾಯಿಸಿದ್ದಾರೆ.

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ ಅಂಗವಾಗಿ ನಗರದ ನಾರಾಯಣಗುರು ವೃತ್ತದಲ್ಲಿರುವ ನಾರಾಯಣಗುರುಗಳ ಭಾನುವಾರ ಪ್ರತಿಮೆಗೆ ಶಾಸಕ ವೇದವ್ಯಾಸ ಕಾಮತ್ ರವರು ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ಪೂಜ್ಯರ ಗೌರವಾರ್ಥ ಮಂಗಳೂರಿನ ಹೃದಯ ಭಾಗದಲ್ಲಿ ನಾರಾಯಣಗುರು ವೃತ್ತವನ್ನು ನಿರ್ಮಿಸಲಾಗಿತ್ತು. ಕುದ್ರೋಳಿಗೆ ಸಾಗುವ ರಸ್ತೆಗೆ ಗೋಕರ್ಣನಾಥ ರಸ್ತೆ ಎಂದು ನಾಮಕರಣ ಮಾಡಲಾಗಿತ್ತು. ನಂತರ ಉರ್ವದಲ್ಲಿ ಗುರುಗಳ ಸುಂದರವಾದ ಮಂದಿರ ಕಟ್ಟಲಾಗಿತ್ತು. ಅಲ್ಲದೇ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನೂ ಸಹ ಅಸ್ತಿತ್ವಕ್ಕೆ ತರಲಾಗಿತ್ತು ಎಂದರು.ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಬೊಟ್ಯಾಡಿ, ಪ್ರೇಮಾನಂದ ಶೆಟ್ಟಿ, ಪೂರ್ಣಿಮಾ, ದಿವಾಕರ್ ಪಾಂಡೇಶ್ವರ, ರವಿಶಂಕರ್ ಮಿಜಾರ್, ರಮೇಶ್ ಕಂಡೆಟ್ಟು, ಲಲ್ಲೇಶ್ ಕುಮಾರ್, ರಮೇಶ್ ಹೆಗ್ಡೆ, ಅಶ್ವಿತ್ ಕೊಟ್ಟಾರಿ, ಮಹೇಶ್ ಜೋಗಿ, ನಂದನ್ ಮಲ್ಯ, ಮೋಹನ್ ಪೂಜಾರಿ, ನಿತಿನ್ ಕುಮಾರ್, ಜಯಾನಂದ ಅಂಚನ್, ರಾಘವೇಂದ್ರ ರಾವ್, ಅಮಿತ್ ರಾಜ್ ಕೋಡಿಕಲ್ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿ: ಶಾಸಕ ಯೋಗೇಶ್ವರ್‌
ಕೋಗಿಲು ಕ್ರಾಸ್‌ ಸಂತ್ರಸ್ತರಲ್ಲಿ 26 ಮಂದಿ ಬಳಿಯಷ್ಟೇ ಸೂಕ್ತ ದಾಖಲೆ