ದಾಬಸ್‍ಪೇಟೆ: ನೆಲಮಂಗಲ ತಾಲೂಕಿನಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯೂ ಭೂಸ್ವಾಧೀನ ಪಡಿಸಿಕೊಂಡಿರುವ ಜಮೀನುಗಳ ರೈತರಿಗೆ ಶೀಘ್ರ ಪರಿಹಾರ ನೀಡುವಂತೆ ಹಾಗೂ ಇನ್ನು ಮುಂದೆ ರೈತರ ಜಮೀನುಗಳನ್ನು ಭೂಸ್ವಾಧೀನ ಪಡಿಸಿಕೊಳ್ಳದಂತೆ ಶಾಸಕ ಶ್ರೀನಿವಾಸ್ ಅವರು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.
ಪರಿಹಾರ ಪಾವತಿ:
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಕೈಗಾರಿಕಾ ಪ್ರದೇಶಗಳನ್ನು ಸ್ಥಾಪಿಸುವ ಉದ್ದೇಶದಿಂದ ಭೂಸ್ವಾಧೀನ ಪಡಿಸಿದಾಗ ರೈತರನ್ನು ಜಮೀನುಗಳಿಂದ ಒಕ್ಕಲೆಬ್ಬಿಸಿ ಅನ್ಯಾಯ ಮಾಡಲು ಬಿಡುವುದಿಲ್ಲ. ಭೂ ಮಂಜೂರಾತಿ ಪಡೆದು ಅನುಭವದಲ್ಲಿರುವ ರೈತರಿಗೆ ಪರಿಹಾರ ಪಾವತಿಯಾಗಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ ಎಂದರು.ಮಾಹಿತಿ ನೀಡಿ:
ಅಧಿಕಾರಿಗಳಿಂದ ಮಾಹಿತಿ:
ಒಂದು ವೇಳೆ ಭೂ ಸಕ್ರಮೀಕರಣ ಸಮಿತಿಯು ಭೂ ಮಂಜೂರಾತಿ ಮಾಡಿ ಸಾಗುವಳಿ ಚೀಟಿ ಮತ್ತು ಇತರೆ ದಾಖಲೆಗಳನ್ನು ನೀಡಿದಲ್ಲಿ ಮಂಜೂರಾತಿಗಳ ನೈಜತೆಯನ್ನು ಸಂಬಂಧಪಟ್ಟ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಪಡೆದು ಭೂಮಾಲೀಕರಿಗೆ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳುವಂತೆ ವಿನಂತಿಸಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.ಭೂಮಿ ಕಳೆದುಕೊಂಡವರಿಗೆ ಕೆಲಸ ಕೊಡಿ:
ಕೆಐಡಿಬಿಗೆ ತಮ್ಮ ಜಮೀನುಗಳನ್ನು ನೀಡಿ, ಕಡಿಮೆ ಪರಿಹಾರ ಪಡೆದುಕೊಂಡ ಕುಟುಂಬದಲ್ಲಿನ ಯಾರಾದಾರೂ ಒಬ್ಬರಿಗೆ ಅವರ ವಿದ್ಯಾಭ್ಯಾಸದ ಅರ್ಹತೆಗೆ ತಕ್ಕಂತೆ ಕೈಗಾರಿಕೆಗಳನ್ನು ಉದ್ಯೋಗ ನೀಡುವಂತೆ ಕ್ಷೇತ್ರಕ್ಕೆ ಹೋದಾಗ ರೈತರು, ಯುವಕರು ಮನವಿ ಮಾಡುತ್ತಿದ್ದು, ಈ ಬಗ್ಗೆ ಸಚಿವರ ಗಮನಕ್ಕೆ ತಂದಿದ್ದೇನೆ ಎಂದು ಹೇಳಿದರು.ಪೋಟೋ 4 :
ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಅವರು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರನ್ನು ಭೇಟಿ ಮಾಡಿ ಭೂಸ್ವಾಧೀನ ಪಡಿಸಿಕೊಂಡಿರುವ ಜಮೀನುಗಳ ರೈತರಿಗೆ ಶೀಘ್ರ ಪರಿಹಾರ ನೀಡುವಂತೆ ಮನವಿ ಮಾಡಿದರು.