ಮಳೆಯಿಂದಾದ ಹಾನಿಗೆ ಕೂಡಲೇ ಪರಿಹಾರ ನೀಡಿ

KannadaprabhaNewsNetwork |  
Published : Jun 11, 2024, 01:36 AM IST
ಶುಭಾ ಕಲ್ಯಾಣ್ | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಅನೇಕ ಭಾಗಗಳಲ್ಲಿ ಮಳೆಯಿಂದಾಗಿ ಸಂಭವಿಸುತ್ತಿರುವಂತಹ ಹಾನಿಗಳಿಗೆ ಶೀಘ್ರ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ತುಮಕೂರುಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಅನೇಕ ಭಾಗಗಳಲ್ಲಿ ಮಳೆಯಿಂದಾಗಿ ಸಂಭವಿಸುತ್ತಿರುವಂತಹ ಹಾನಿಗಳಿಗೆ ಶೀಘ್ರ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ವೀಡಿಯೋ ಕಾನ್ಪೆರೆನ್ಸ್ ಸಭಾಂಗಣದಲ್ಲಿ ನಡೆದ ಮುಂಗಾರು ಹಾಗೂ ಬರ ನಿರ್ವಹಣೆಗೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಶಿರಾ ತಾಲೂಕಿನಲ್ಲಿ ಸಿಡಿಲಿನ ಹೊಡೆತಕ್ಕೆ ಇಬ್ಬರು ವ್ಯಕ್ತಿಗಳು ಬಲಿಯಾಗಿದ್ದು, ಅವರ ಕುಟುಂಬಕ್ಕೆ ತಕ್ಷಣವೇ ಪರಿಹಾರ ಹಣವನ್ನು ನೀಡಬೇಕು. ಪ್ರಸಕ್ತ ವರ್ಷದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇರುವುದರಿಂದ ಮಳೆ ಬಂದ ಸಂದರ್ಭದಲ್ಲಿ ಹಾನಿಗೊಳಗಾಗುವ ಪ್ರದೇಶಗಳನ್ನು ಗುರುತಿಸಿ ಅವುಗಳ ನಿರ್ವಹಣೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.ಮಳೆಯಿಂದಾಗುವ ಹಾನಿ ಮತ್ತು ಪ್ರವಾಹದ ಸ್ಥಿತಿ ಎದುರಾದ ಸಂದರ್ಭದಲ್ಲಿ ಅವುಗಳ ನಿರ್ವಹಣೆಗೆ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಎಲ್ಲಾ ತಹಶೀಲ್ದಾರ್‌ಗಳಿಗೂ ಸಮಗ್ರ ಯೋಜನಾ ವರದಿಯನ್ನು ಸಲ್ಲಿಸುವಂತೆ ಸೂಚಿಸಿದರು. ಬರ ನಿರ್ವಹಣೆಗಾಗಿ ಜಿಲ್ಲೆಯಲ್ಲಿ ತೆರೆಯಲಾಗಿದ್ದ 21 ಮೇವು ಬ್ಯಾಂಕುಗಳಲ್ಲಿ ಸಂಪೂರ್ಣವಾಗಿ ಮೇವಿನ ಬೇಡಿಕೆ ಕಡಿಮೆಯಾಗಿರುವುದರಿಂದ ಮೇವು ಬ್ಯಾಂಕುಗಳಿಗೆ ಸಂಬಂಧಿಸಿದ ಹಣ ಪಾವತಿಗಾಗಿ ಎರಡು ಮೂರು ದಿನದೊಳಗಾಗಿ ಬಿಲ್ಲುಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಸಲ್ಲಿಸುವಂತೆ ತಿಳಿಸಿದರು. ಈಗಾಗಲೇ ಜಿಲ್ಲೆಯ ಕುಡಿಯುವ ನೀರಿನ ಮೂಲಗಳ ಪರೀಕ್ಷೆ ನಡೆಸಲಾಗಿದ್ದು, ಕುಡಿಯುವ ನೀರಿನ ಪರೀಕ್ಷೆಯಲ್ಲಿ ನೀರಿನ ಅಶುದ್ಧತೆ ಬಗ್ಗೆ ವರದಿ ಬಂದಿರುವ ಬೋರ್‌ವೆಲ್‌ಗಳಿಂದ ಪೂರೈಕೆ ಮಾಡಲಾಗುತ್ತಿರುವ ನೀರನ್ನು ತಕ್ಷಣವೇ ಸಾರ್ವಜನಿಕರಿಗೆ ನೀಡದಂತೆ ಸ್ಥಗಿತಗೊಳಿಸುವಂತೆ ಸೂಚಿಸಿದರುಪರ್ಯಾಯವಾಗಿ ಶುದ್ಧ ಕುಡಿಯುವ ನೀರಿನ ಘಟಕಗಳಿಂದ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ತಿಪಟೂರು ತಾಲೂಕಿನ ಈಚನೂರು ಕೆರೆಗೆ ಸೇರುತ್ತಿದ್ದಂತಹ ಮಲೀನಯುಕ್ತ ನೀರನ್ನು ಬೇರೆ ಕಡೆ ಹರಿಯುವಂತೆ ಮಾಡಿರುವ ಬಗ್ಗೆ ಮಾಹಿತಿ ಪಡೆದು ಯಾವುದೇ ಕೆರೆಗಳಿಗೆ ಕಲುಷಿತ ನೀರು ಸೇರಿದಂತೆ ಎಚ್ಚರಿಕೆ ವಹಿಸಬೇಕು ಎಂದರು.ಜಿಲ್ಲೆಯಾದ್ಯಂತ 94 ಖಾಸಗಿ ಕೊಳವೆ ಬಾವಿಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ಮಳೆಯಿಂದ ಕೊಳವೆಬಾವಿಗಳಿಗೆ ಜಲ ಮರುಪೂರಣವಾಗಿ ಅಂತರ್ಜಲ ಮಟ್ಟ ಹೆಚ್ಚುತ್ತಿದೆ. ಈ ಬಗ್ಗೆ ಮರುಪರಿಶೀಲನೆ ನಡೆಸಿ ಖಾಸಗಿ ಕೊಳವೆಬಾವಿಗಳ ಸಂಖ್ಯೆಯನ್ನು ಕಡಿಮೆ ಮಾಡಿ, ಅವುಗಳ ಹಣ ಪಾವತಿಯನ್ನು ಜೂನ್ ೧೫ ರೊಳಗಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ನಗರದ ಬಿ.ಎಚ್.ರಸ್ತೆಯಲ್ಲಿರುವ ಸರ್ಕಾರಿ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಸಂಭವಿಸಿದ ಬೆಂಕಿ ಅವಘಡ ಮರುಕಳಿಸದಂತೆ ಎಲ್ಲಾ ವಿದ್ಯಾರ್ಥಿ ನಿಲಯಗಳಿಗೆ ಬೆಸ್ಕಾಂ ಸಿಬ್ಬಂದಿಗಳೊಂದಿಗೆ ಭೇಟಿ ನೀಡಿ ವಿದ್ಯುತ್ ಸ್ಥಿತಿ-ಗತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ತಿಳಿಸಿದರು.ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್ ಮಾತನಾಡಿ, ಜಿಲ್ಲೆಯಲ್ಲಿ ೭೭೩೦ ಕ್ವಿಂಟಲ್ ಬಿತ್ತನೆ ಬೀಜ ದಾಸ್ತಾನಿದ್ದು, ಶೇಂಗಾ ಬಿತ್ತನೆ ಬೀಜ ತ್ವರಿತಗತಿಯಲ್ಲಿ ವಿತರಣೆಯಾಗುತ್ತಿದ್ದು, ಬೇಡಿಕೆಗೆ ತಕ್ಕಂತೆ ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.ಈಗಾಗಲೇ ಜಿಲ್ಲೆಯಾದ್ಯಂತ ರಸಗೊಬ್ಬರ ಹಾಗೂ ಬಿತ್ತನೆ ಬೀಜ ವಿತರಣ ಕೇಂದ್ರಗಳಿಗೆ ಅಗತ್ಯ ಮಾಹಿತಿ ನೀಡಿ ಪ್ರತಿದಿನ ವಿತರಣೆ ಮಾಡಲಾದ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಮಾಹಿತಿಯನ್ನು ತಂತ್ರಾಂಶದಲ್ಲಿ ಅಪ್‌ಡೇಟ್ ಮಾಡುವಂತೆ ಹಾಗೂ ಬಿತ್ತನೆ ಬೀಜ, ರಸಗೊಬ್ಬರ ಬೇಡಿಕೆಯನ್ನು ತ್ವರಿತವಾಗಿ ಸಲ್ಲಿಸುವಂತೆ ತಿಳಿಸಲಾಗಿದೆ. ಜಿಲ್ಲೆಯಾದ್ಯಂತ ರೈತರಿಗೆ ಬೆಳೆ ವಿಮೆ ಸೇರಿದಂತೆ ಸರ್ಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಕೃಷಿ ಸಂಜೀವಿನಿ ವಾಹನಗಳು, ಕರಪತ್ರ, ಬಿತ್ತಿಪತ್ರಗಳ ಮೂಲಕ ಪ್ರಚಾರ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಶಾರದಮ್ಮ, ಜಿಲ್ಲೆಯ ಎಲ್ಲಾ ಉಪವಿಭಾಗಾಧಿಕಾರಿಗಳು, ತಹಸೀಲ್ದಾರ್‌ರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವಕರು ಮೊಬೈಲ್‌ ಬಿಟ್ಟು ಕುಸ್ತಿ, ಕಬ್ಬಡ್ಡಿ ಆಟವಾಡಿ
ಕೆಜಿಐಎಸ್ 2.0 ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯ ಅವಶ್ಯಕ: ರಾಜೇಶ ಎನ್.ಎಲ್.