ಕನ್ನಡಪ್ರಭ ವಾರ್ತೆ ತುಮಕೂರು
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ವಿವಿಧ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳುವಾಗ ಕುಡಿಯುವ ನೀರಿಗೆ ಕಲುಷಿತ ನೀರು ಸೇರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ಮನೆಗಳ ಸುತ್ತಮುತ್ತ ನೀರು ನಿಲುಗಡೆಯಾಗದಂತೆ ಸ್ವಚ್ಛಗೊಳಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ನಗರ ಪ್ರದೇಶ ಸೇರಿದಂತೆ ಎಲ್ಲ ಗ್ರಾಮಗಳಲ್ಲಿ ಪ್ರತಿದಿನ ಧೂಮೀಕರಣ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಸಕಾಲದಲ್ಲಿ ಮಳೆಯಾಗದ ಕಾರಣ ರೈತರು ಶೇಂಗಾ ಬದಲಿಗೆ ರಾಗಿ ಬಿತ್ತನೆಗೆ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಯೂರಿಯಾ ಬೇಡಿಕೆ ಹೆಚ್ಚಾಗುತ್ತಿರುವುದರಿಂದ ರೈತರಿಗೆ ಯಾವುದೇ ತೊಂದರೆ ಉಂಟಾಗದಂತೆ ಯೂರಿಯಾ ವಿತರಣೆ ಮಾಡಬೇಕೆಂದು ಕೃಷಿ ಜಂಟಿ ನಿರ್ದೇಶಕ ರಮೇಶ್ ಅವರಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಂಜೀವಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಾರದಮ್ಮ ಸೇರಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.