ಕನ್ನಡಪ್ರಭ ವಾರ್ತೆ ಬಾಗೂರುರಾಜ್ಯ ಕಾಂಗ್ರೆಸ್ ಸರ್ಕಾರದ ವತಿಯಿಂದ ಪ್ರಸ್ತುತ 2026 -27ನೇ ಸಾಲಿನಲ್ಲಿ ಹೊಸದಾಗಿ ಪ್ರಾರಂಭಗೊಂಡಿರುವ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಅನುದಾನದ ಜೊತೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಶಾಸಕ ಸಿ ಎನ್ ಬಾಲಕೃಷ್ಣ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.ಹೋಬಳಿಯ ಗೋವಿನಕೆರೆ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಹೋಬಳಿ ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ತಾಲೂಕಿನಲ್ಲಿ ಬಾಗೂರು ಹಿರೀಸಾವೆ ಶ್ರವಣಬೆಳಗೊಳ ಹೋಬಳಿ ಕೇಂದ್ರ ಸೇರಿದಂತೆ ಚನ್ನರಾಯಪಟ್ಟಣ ತಾಲೂಕು ಕೇಂದ್ರದಲ್ಲಿ ಹೊಸದಾಗಿ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭಗೊಂಡಿ. ಈ ಹಿಂದೆ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಗಳಾಗಿದ್ದ ಎಚ್ ಡಿ ಕುಮಾರಸ್ವಾಮಿ ಅವರು ತಾಲೂಕಿನ ನುಗ್ಗೇಹಳ್ಳಿ ಹೋಬಳಿ ಕೇಂದ್ರಕ್ಕೆ ಕರ್ನಾಟಕ ಪಬ್ಲಿಕ್ ಶಾಲೆ ಮಂಜೂರು ಮಾಡಿದ್ದರು ಎಂದರು. ಮಕ್ಕಳಲ್ಲಿರುವ ಪ್ರತಿಭೆಯನ್ನು ಪ್ರತಿಭಾ ಕಾರಂಜಿ ವೇದಿಕೆ ಮೂಲಕ ಅವರಲ್ಲಿರುವ ಕಲೆ ಸಾಹಿತ್ಯ ಅಭಿನಯ ಕರಕುಶಲತೆ ಸೇರಿದಂತೆ ವಿವಿಧ ಪ್ರತಿಭೆಗಳು ಅನಾವರಣಗೊಳ್ಳಲಿದೆ ಕೇವಲ ಗೆಲುವು ಒಂದೇ ಮಾನದಂಡದಿಂದ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಾರದು ಸತತ ಪ್ರಯತ್ನದಿಂದ ಮಾತ್ರ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದರು.ಬಿಆರ್‌ಸಿ ಅನಿಲ್ ಕುಮಾರ್ ಮಾತನಾಡಿ, ಈ ಕಾರ್ಯಕ್ರಮದಲ್ಲಿ ಒಟ್ಟು 13 ಪ್ರೌಢಶಾಲೆಗಳ ಮಕ್ಕಳು ಸುಮಾರು 20ಕ್ಕೂ ಹೆಚ್ಚು ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮಲ್ಲಿರುವ ಪ್ರತಿಭೆಯನ್ನು ತೋರ್ಪಡಿಸಲು ಉತ್ತಮ ವೇದಿಕೆಯಾಗಿದೆ ಎಂದರು.ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮರಿ ದೇವೇಗೌಡ, ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವರಾಜೇಗೌಡ, ಬಿ ಆರ್ ಪಿ , ರಘು,ತಾಲೂಕು ದೈಹಿಕ ಪರಿವೀಕ್ಷಕ ಕೆ ಟಿ ಆನಂದ್, ಮುಖ್ಯ ಶಿಕ್ಷಕಿ ಪುಷ್ಪಲತಾ, ಶಿಕ್ಷಣ ಸಂಯೋಜಕ ಜಯಪ್ರಕಾಶ್, ಮುಖಂಡರಾದ , ರಾಮಚಂದ್ರ, ಕೃಷಿ ಪತ್ತಿನ ನಿರ್ದೇಶಕ ರಮೇಶ್, ಎಂ ಶಿವರ ರಾಜು, ಹುಲಿಕೆರೆ ಸಂಪತ್ ಕುಮಾರ್, ನಂಜುಂಡೇಗೌಡ, ವೈರಮುಡಿ ಗೌಡ, ಭೂದೇಶ್, ಡೈರಿ ಮಾಲಿಂಗೇಗೌಡ, ರಮೇಶ್, ಮಧು, ಶಿಕ್ಷಕರಾದ ಶಿವಲಿಂಗಪ್ಪ, ಕಿರಣ್, ಶೋಭಾ, ಚಂದ್ರಶೇಖರ್, ಹೇಮಾ, ಸಿದ್ದೇಗೌಡ, ಸೇರಿದಂತೆ ಇತರರು ಹಾಜರಿದ್ದರು.