ಕನ್ನಡಪ್ರಭ ವಾರ್ತೆ ಯಾದಗಿರಿ
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳ ಕುರಿತ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ಮತಗಟ್ಟೆಗಳು ಹೆಚ್ಚಾಗಿ ಶಾಲೆಗಳು ಹಾಗೂ ಅಂಗನವಾಡಿಗಳಲ್ಲಿ ಇರುತ್ತವೆ. ಈ ಸಂಬಂಧ ಮತಗಟ್ಟೆಗಳಲ್ಲಿ ಟೇಬಲ್, ಚೇರ್ , ಮತಗಟ್ಟೆಗಳಲ್ಲಿ ಅಂಗವಿಕಲರು ಪ್ರವೇಶಿಸಲು ಅನುಕೂಲವಾಗುವಂತೆ ಕಡ್ಡಾಯವಾಗಿ ರ್‍ಯಾಂಪ್ ಮತ್ತು ಇನ್ನಿತರ ಮೂಲ ಸೌಕರ್ಯಗಳ ವ್ಯವಸ್ಥೆಗಳನ್ನು ಪರಿಶೀಲಿಸಿ ಸಣ್ಣ ಪುಟ್ಟ ರಿಪೇರಿಗಳಿದ್ದಲ್ಲಿ ಗಮನಕ್ಕೆ ತಂದು ಸರಿಪಡಿಸಿಕೊಳ್ಳಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ಸರ್ಕಾರಿ ನೌಕಕರಾದ ನಾವೆಲ್ಲ ತೊಡಗಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಚುನಾವಣಾ ಮಾರ್ಗಸೂಚಿ ಪ್ರಕಾರ ಕೆಲಸ ನಿರ್ವಹಿಸಬೇಕು.ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮತಗಟ್ಟೆಗಳ ಬಗ್ಗೆ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಪರಿಶೀಲಿಸಿ ವರದಿ ಮಾಡಬೇಕು. ಗ್ರಾಮೀಣ ಪ್ರದೇಶದ ವ್ಯಾಪ್ತಿ ಬರುವ ಮತಗಟ್ಟೆ ಕೇಂದ್ರದ ಸುಸ್ಥಿತಿ ಕುರಿತು ಸಂಬಂಧಿಸಿದ ಅಧಿಕಾರಿಗಳು ವರದಿ ನೀಡಬೇಕು ಎಂದು ಹೇಳಿದರು.