ಸ್ಥಳೀಯರಿಗೆ ಉದ್ಯೋಗ ನೀಡಿ: ಖಾಸಗಿ ಕಂಪನಿಗಳಿಗೆ ಭೂಮರಡ್ಡಿ ಆಗ್ರಹ

KannadaprabhaNewsNetwork |  
Published : Nov 02, 2026, 03:15 AM IST
ಕೊಪ್ಪಳ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಭಾನುವಾರ 71ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. | Kannada Prabha

ಸಾರಾಂಶ

ಕೊಪ್ಪಳ ನಗರದ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ ಭೂಮರಡ್ಡಿ ಕನ್ನಡ ಧ್ವಜಾರೋಹಣ ನೆರವೇರಿಸಿದರು.

ಕೊಪ್ಪಳ: ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮತ್ತು ಎಲ್ಲ ಕ್ಷೇತ್ರಗಳಲ್ಲಿಯೂ ಆದ್ಯತೆ ಸಿಕ್ಕಾಗ ಮಾತ್ರ ಕನ್ನಡ ಭಾಷೆ, ನಾಡು ಹಾಗೂ ಸಂಸ್ಕೃತಿಯ ಬೆಳವಣಿಗೆ ಸಾಧ್ಯ. ಜಿಲ್ಲೆಯಲ್ಲಿರುವ ಖಾಸಗಿ ಕೈಗಾರಿಕಾ ಘಟಕಗಳು ಸ್ಥಳೀಯರಿಗೆ ಉದ್ಯೋಗ ನೀಡುವಲ್ಲಿ ಆದ್ಯತೆ ನೀಡಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ ಭೂಮರಡ್ಡಿ ಆಗ್ರಹಿಸಿದರು.

ನಗರದ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಕನ್ನಡಿಗರಿಗೆ ಇನ್ನೂ ಸಮರ್ಪಕ ಪ್ರಾತಿನಿಧ್ಯ ಸಿಕ್ಕಿಲ್ಲ. ಜಿಲ್ಲೆಯಲ್ಲಿರುವ ಖಾಸಗಿ ಕೈಗಾರಿಕಾ ಘಟಕಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡುತ್ತಿಲ್ಲ. ಸರೋಜಿನಿ ಮಹಿಷಿ ವರದಿಯ ಶಿಫಾರಸಿನಂತೆ ಕೈಗಾರಿಕೆಗಳಲ್ಲಿ ಲಭ್ಯವಿರುವ ಉದ್ಯೋಗಗಳಲ್ಲಿ ಸ್ಥಳೀಯರಿಗೆ ಪ್ರಾತಿನಿಧ್ಯ ಹಾಗೂ ಮೀಸಲಾತಿ ಕಲ್ಪಿಸಬೇಕು. ಆದರೆ, ಕಂಪನಿಗಳು ಇದನ್ನು ಪದೇ ಪದೇ ಉಲ್ಲಂಘಿಸುತ್ತಿವೆ. ಇದೇ ಪರಿಸ್ಥಿತಿ ಮುಂದುವರಿದರೆ ಜೆಡಿಎಸ್ ವತಿಯಿಂದ ವ್ಯಾಪಕ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಶಿಕ್ಷಣ ಪ್ರೇಮಿ ಅಮರೇಶ ಹಿರೇಮಠ ಮಾತನಾಡಿ, ಕನ್ನಡ ಅತ್ಯಂತ ಶ್ರೀಮಂತ ಹಾಗೂ ಪ್ರಾಚೀನ ಭಾಷೆಯಾಗಿದೆ. ಕನ್ನಡಕ್ಕೆ ಜಾಗತಿಕ ಮಟ್ಟದಲ್ಲಿ ವಿಶೇಷ ಗೌರವವಿದೆ. ಜಾಗತೀಕರಣದ ಇಂದಿನ ಸಂದರ್ಭದಲ್ಲಿ ಪ್ರತಿಯೊಂದು ಹಂತದಲ್ಲಿಯೂ ಕನ್ನಡಕ್ಕೆ ಆದ್ಯತೆ ನೀಡುವುದು ಅಗತ್ಯ ಎಂದರು.

ಜಿಲ್ಲಾ ಸಂಸ್ಕೃತಿ ಘಟಕದ ಅಧ್ಯಕ್ಷ ಮಂಜುನಾಥ ಸೊರಟೂರ ಮಾತನಾಡಿ, ಕನ್ನಡ ಅಂಕಿಗಳನ್ನು ದೈನಂದಿನ ಬದುಕಿನಲ್ಲಿ ಬಳಸುವ ಮೂಲಕ ಅವುಗಳ ಉಳಿವಿಗೆ ಕೈಜೋಡಿಸಬೇಕು ಎಂದರು.

ಕೊಪ್ಪಳ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಏಣಿಗಿ ಉಪನ್ಯಾಸ ನೀಡಿದರು. ನಗರ ಘಟಕದ ಅಧ್ಯಕ್ಷ ಸೋಮನಗೌಡ ಹೊಗರನಾಳ ವಂದಿಸಿದರು.

ಜಿಲ್ಲಾ ಕೈಗಾರಿಕಾ ಘಟಕದ ಅಧ್ಯಕ್ಷ ಮಾರುತಿಗೌಡ ಪೊಲೀಸ್ ಪಾಟೀಲ, ನಗರ ಘಟಕದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಿರಾಜ್ ಕೋಲ್ಕಾರ್, ನಗರ ಘಟಕದ ಮಹಿಳಾ ಅಧ್ಯಕ್ಷೆ ನಿರ್ಮಲಾ ಎನ್. ಮೇದಾರ, ಜಿಲ್ಲಾ ಒಬಿಸಿ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯಲಕ್ಷ್ಮಿ ಐಹೊಳೆ, ಮುಖಂಡರಾದ ಮಾರುತಿ ಪೇರಮೀ, ದಾಮಣ್ಣ ಕಲಿಕೇರಿ, ಗಂಗಾಧರ ವಸ್ತ್ರದ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಗರ ಮಕ್ಕಳಿಗೆ ಹಳ್ಳಿ ಜೀವನ ಪರಿಚಯಿಸುವ ‘ಗ್ರಾಮಾನುಭವ’ಕ್ಕೆ ಚಾಲನೆ
ಕಡಲ ಜೈವಿಕ ತಂತ್ರಜ್ಞಾನ ನೀತಿಗೆ ಅನುಮೋದನೆ: ರಿಝ್ವಾನ್ ಅರ್ಷದ್