ಶರಾವತಿ ಜಲವಿದ್ಯುತ್ ಸಂತ್ರಸ್ತರಿಗೆ ನ್ಯಾಯ ಒದಗಿಸಿ

KannadaprabhaNewsNetwork |  
Published : Dec 12, 2024, 12:31 AM IST
ಪೋಟೋ: 10ಎಸ್‌ಎಂಜಿಕೆಪಿ10ಕೇಂದ್ರದ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಬುಧವಾರ ಅವರ ಕಚೇರಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಭೇಟಿ ಮಾಡಿದರು. ಈ ಸಂದರ್ಭ ಶಾಸಕ ಆರಗ ಜ್ಞಾನೇಂದ್ರ , ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ಶಾಸಕ ಅಶೋಕ್ ನಾಯ್ಕ್‌ಇದ್ದರು | Kannada Prabha

ಸಾರಾಂಶ

Provide justice to Sharavati hydropower victims

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಶರಾವತಿ ಜಲವಿದ್ಯುತ್ ಯೋಜನೆಯ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಆಗ್ರಹಿಸಿದರು. ಕೇಂದ್ರದ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಭೂಪೇಂದ್ರ ಯಾದವ್ ರನ್ನು ಬುಧವಾರ ಅವರ ಕಚೇರಿಯಲ್ಲಿ ಭೇಟಿ ಮಾಡಿ ಶರಾವತಿ ಮುಳುಗಡೆ ಸಂತ್ರಸ್ತರ ಕುರಿತು ಚರ್ಚಿಸಿದರು.

ಸಾವಿರಾರು ಎಕರೆ ಭೂಮಿ ಕಳೆದುಕೊಂಡ ಸಂತ್ರಸ್ತ ಕುಟುಂಬಗಳು ತ್ಯಾಗ ಮಾಡಿದರೂ ಇಲ್ಲಿಯವರೆಗೂ ಸೂಕ್ತ ಪರಿಹಾರ ಕಾಣದೇ ಪರಿತಪಿಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದ ರೈತಾಪಿ ಯೋಜನೆ ಪಡೆದುಕೊಳ್ಳಲಾಗದೆ ನಿರಾಶೆಗೊಳಗಾಗಿದ್ದಾರೆ. ಇತ್ತ ಭೂಮಿ ಕಳೆದುಕೊಂಡು ಅದಕ್ಕೆ ಪರಿವಾರವು ಸಿಗದೆ ಸಂಕಟ ಅನುಭವಿಸುತ್ತಿದ್ದಾರೆ. ದೈವ ಬಲ ಎಂಬಂತೆ, ಈ ಆರು ಶತಮಾನಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ವೋಚ್ಚ ನ್ಯಾಯಾಲಯ ಸಂಪೂರ್ಣ ತನಿಖೆ ಕೈಗೆತ್ತಿ ಕೊಂಡಿದೆ. ಈ ಫಲಪ್ರದ ಬೆಳವಣಿಗೆಯನ್ನು ಸಂಪೂರ್ಣ ಬಳಸಿಕೊಂಡು ನ್ಯಾಯಾಲಯದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಬಲವಾಗಿ ವಾದ ಮಂಡನೆ ನಡೆಸಿ ಕೊನೆಯ ಹಂತಕ್ಕೆ ಕೊಂಡೊಯ್ಯುವ ಸಕಲ ಸಿದ್ಧತೆ ನಡೆಸುವಂತೆ ಮನವಿ ಮಾಡಲಾಯಿತು. ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಇದನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಮಲೆನಾಡಿನ ದಶಕಗಳ ಬವಣೆಗೆ ಇತಿಶ್ರೀ ಹಾಡುವ ಭರವಸೆ ನೀಡಿದ್ದಾರೆಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಆರಗ ಜ್ಞಾನೇಂದ್ರ , ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ಶಾಸಕ ಅಶೋಕ್ ನಾಯ್ಕ್‌ಇದ್ದರು.

----------------------

ಪೋಟೋ: 10ಎಸ್‌ಎಂಜಿಕೆಪಿ10

ಕೇಂದ್ರದ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಬುಧವಾರ ಅವರ ಕಚೇರಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಭೇಟಿ ಮಾಡಿದರು. ಈ ಸಂದರ್ಭ ಶಾಸಕ ಆರಗ ಜ್ಞಾನೇಂದ್ರ , ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ಶಾಸಕ ಅಶೋಕ್ ನಾಯ್ಕ್‌ಇದ್ದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!