ಕನ್ನಡಪ್ರಭ ವಾರ್ತೆ ಮಡಿಕೇರಿ
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಔಟಲಾ ಇಂಡಿಯಾ ಸಂಸ್ಥೆ ಹಾಗೂ ಮಡಿಕೇರಿ ವಕೀಲರ ಸಂಘ ಆಶ್ರಯದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ನಾಲ್ಕು ದಿನಗಳ ಕಾಲ ಏರ್ಪಡಿಸಲಾಗಿರುವ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾನೂನು ಸೇವಾ ಪ್ರಾಧಿಕಾರದ ಜೊತೆ ಸೇರಿ ನೊಂದವರಿಗೆ ಕಾನೂನಿನ ಮಾಹಿತಿ ನೀಡುವುದು ಅರೆಕಾಲಿಕ ಕಾನೂನು ಸ್ವಯಂ ಸೇವಕರ ಜವಾಬ್ದಾರಿಯಾಗಿದ್ದು, ಆ ನಿಟ್ಟಿನಲ್ಲಿ ತಮ್ಮ ಕರ್ತವ್ಯ ನಿರ್ವಹಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವಂತೆ ಸಲಹೆ ಮಾಡಿದರು.ನಿಸರ್ಗದತ್ತ ಹಾಗೂ ಮನುಷ್ಯ ಮಾಡಿದ ಈ ಎರಡು ರೀತಿಯ ಕಾನೂನನ್ನು ಕಾಣಬಹುದಾಗಿದ್ದು, ನೈಸರ್ಗಿಕವಾಗಿ ದೊರೆಯುವ ಗಾಳಿ, ನೀರು, ಹಾಗೆಯೇ ಮನುಷ್ಯ ಮಾಡಿದ ಕಾನೂನು ಸಂವಿಧಾನಾತ್ಮಕವಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬ ಮನುಷ್ಯನಿಗೆ ಗಾಳಿ, ನೀರು ಪ್ರಕೃತಿದತ್ತವಾಗಿ ದೊರೆಯಲಿದೆ. ಜೊತೆಗೆ ಮನುಷ್ಯನಿಗೆ ಹಸಿವು ನೀಗಿಸುವುದು ಅತ್ಯಗತ್ಯ ಎಂದು ಅವರು ವಿವರಿಸಿದರು.
ನಿಯಮಗಳನ್ನು ಪಾಲಿಸದಿದ್ದರೆ ಸಂಕಷ್ಟಕ್ಕೆ ಒಳಗಾಗಬೇಕಾಗುತ್ತದೆ. ಆದ್ದರಿಂದ ಕಾನೂನಿನ ಅರಿವು ಇಲ್ಲದವರಿಗೆ ಮತ್ತು ನೊಂದವರಿಗೆ ಕಾನೂನಿನ ಮಾಹಿತಿ ನೀಡುವುದೇ ಅರೆಕಾಲಿಕ ಕಾನೂನು ಸ್ವಯಂ ಸೇವಕರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಕಾನೂನು ಸೇವೆಗಳ ಬಗ್ಗೆ ಮಾಹಿತಿ ನೀಡುವಂತಾಗಬೇಕು ಎಂದು ಹೊಸಮನಿ ಪುಂಡಲೀಕ ಹೇಳಿದರು.
ಹಿರಿಯ ವಕೀಲರಾದ ಕೆ.ಪಿ.ಬಾಲಸುಬ್ರಹ್ಮಣ್ಣಂ ಅವರು ಮಾತನಾಡಿ ಕಾನೂನು ಒಂದು ದೊಡ್ಡ ವಿಸ್ತಾರವಿದ್ದಂತೆ, ಅರಿವೇ ಗುರುವೇ ಎಂಬಂತೆ ಎಲ್ಲರೂ ಉತ್ತಮ ಬದುಕು ನಡೆಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಮಾತನಾಡಿ ಗ್ರಾಮೀಣ ಜನರಿಗೆ ನ್ಯಾಯದಾನ ದೊರೆಯಬೇಕು ಎಂಬ ಉದ್ದೇಶದಿಂದ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ವಕೀಲರಾದ ಎಂ,ಎ.ನಿರಂಜನ್ ಅವರು ಕೌಟುಂಬಿಕ ಕಾನೂನುಗಳ ಕುರಿತು ಮಾತನಾಡಿದರು. 1 ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಜಿ.ಸುರೇಂದ್ರ ಅವರು ಪರಿಶಿಷ್ಟ ಜಾತಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲೆ ದೌರ್ಜನ್ಯ ಕಾಯ್ದೆ ಕುರಿತು ಮಾತನಾಡಿದರು. ಔಟಲಾ ಇಂಡಿಯಾ ಸಂಸ್ಥೆಯುವರು ಕಾನೂನು ಅರಿವು ಕುರಿತು ಮಾತನಾಡಿದರು.