ಕನ್ನಡಪ್ರಭ ವಾರ್ತೆ ತುಮಕೂರು
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದ ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕಲ್ಪಿಸುವುದಕ್ಕಾಗಿ ಗುರುವಾರ ನಡೆದ ಫಲಾನುಭವಿ ಆಯ್ಕೆ ಸಮಿತಿ ಸಭೆಯಲ್ಲಿ ಮಾತನಾಡಿದರು.
2023-24ನೇ ಆರ್ಥಿಕ ಸಾಲಿನಿಂದ ಬಾಕಿಯಿದ್ದ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ದು ನಡೆಸಲಾಗಿದ್ದು, ಸರ್ಕಾರ ನಿಗದಿಪಡಿಸಿರುವ ಭೌತಿಕ ಗುರಿಯ ಆಧಾರದ ಮೇಲೆ ಪಾರದರ್ಶಕವಾಗಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಕಡಿಮೆ ಜನಸಂಖ್ಯೆ ಇರುವ ಸಮುದಾಯದವರಿಗೆ ಆದ್ಯತೆ ನೀಡಲಾಗಿದೆ. ಸರ್ಕಾರ ನಿಗಧಿಪಡಿಸಿರುವ ಭೌತಿಕ ಗುರಿಯಲ್ಲಿ ಕನಿಷ್ಠ ಶೇ.33 ರಷ್ಟು ಮಹಿಳಾ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, ಮಹಿಳಾ ಫಲಾನುಭವಿಗಳು ಲಭ್ಯವಿಲ್ಲದಿದ್ದಾಗ ಪುರುಷ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ವಿಕಲಚೇತನ ಫಲಾಪೇಕ್ಷಿಗಳಿಗೆ ಶೇ. 5 ರಷ್ಟು ಆದ್ಯತೆ ನೀಡಲಾಗಿದೆ. ಸಾಲ-ಸೌಲಭ್ಯಗಳಿಗೆ ಹೆಚ್ಚಿನ ವಯೋಮಾನದವರನ್ನು, ಈ ಹಿಂದೆ ಸುಮಾರು ಬಾರಿ ಅರ್ಜಿ ಸಲ್ಲಿಸಿ ಆಯ್ಕೆಯಾಗದಿರುವವರನ್ನು ಈ ಬಾರಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯದಲ್ಲಿ ನೇರಸಾಲ ಯೋಜನೆಯಡಿ-52, ಸ್ವಾವಲಂಭಿ ಸಾರಥಿ ಯೋಜನೆಯಡಿ-9, ಉದ್ಯಮಶೀಲತಾ ಯೋಜನೆಯಡಿ-7, ಭೂ-ಒಡೆತನ ಯೋಜನೆಯಡಿ-3; ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದಲ್ಲಿ ನೇರಸಾಲ ಯೋಜನೆಯಡಿ-7, ಸ್ವಾವಲಂಭಿ ಸಾರಥಿ ಯೋಜನೆಯಡಿ -6, ಉದ್ಯಮಶೀಲತಾ ಯೋಜನೆಯಡಿ-3, ಭೂ-ಒಡೆತನ ಯೋಜನೆಯಡಿ-2, ಪ್ರೇರಣಾ ಯೋಜನೆಯಡಿ-4, ಗಂಗಾ ಕಲ್ಯಾಣ ಯೋಜನೆಯಡಿ-1; ಮೇದಾರ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದಲ್ಲಿ ನೇರಸಾಲ ಯೋಜನೆಯಡಿ-15, ಸ್ವಾವಲಂಬಿ ಸಾರಥಿ ಯೋಜನೆಯಡಿ-2, ಪ್ರೇರಣಾ ಯೋಜನೆಯಡಿ-1 ಫಲಾನುಭವಿಯನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಣ್ಣ ಮಸಿಯಪ್ಪ, ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಮಂಜುನಾಥ್ ಸೇರಿದಂತೆ ಆಯ್ಕೆ ಸಮಿತಿ ಸದಸ್ಯರು ಹಾಜರಿದ್ದರು.