ಜನರಿಗೆ ಕಾಲಕಾಲಕ್ಕೆ ಅಗತ್ಯ ಸವಲತ್ತು ಕಲ್ಪಿಸಿಕೊಡಿ

KannadaprabhaNewsNetwork |  
Published : Jul 14, 2026, 01:30 AM IST
13ಕೆಪಿಆರ್‌ಸಿಆರ್‌ 01:  | Kannada Prabha

ಸಾರಾಂಶ

ಜಿಲ್ಲೆಯ ಜನರಿಗೆ ಕಾಲಕಾಲಕ್ಕೆ ಅಗತ್ಯ ಸವಲತ್ತುಗಳನ್ನು ಕಲ್ಪಿಸಿಕೊಡುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಆ ಮುಖಾಂತರ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ಜಿಲ್ಲೆಯ ಜನರಿಗೆ ಕಾಲಕಾಲಕ್ಕೆ ಅಗತ್ಯ ಸವಲತ್ತುಗಳನ್ನು ಕಲ್ಪಿಸಿಕೊಡುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಆ ಮುಖಾಂತರ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ಸೂಚನೆ ನೀಡಿದರು.

ಸ್ಥಳೀಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೋಮವಾರ ಮಾತನಾಡಿದ ಅವರು, ಕುಡಿಯುವ ನೀರು, ಘನತ್ಯಾಜ ನಿರ್ವಹಣೆ, ಕೆರೆಗಳ ಸಂರಕ್ಷಣೆ ಸೇರಿ ವಿವಿಧ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು,ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಾಲಕಾಲಕ್ಕೆ ಒದಗಿಸಲು ಸ್ವಂತ ಸುಪ್ರೀಂ ಕೋರ್ಟ್ನ ನಿರ್ದೇಶನವಿದ್ದು, ಸಂಬಂಧಿಸಿದ ಅಧಿಕಾರಿಗಳು ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳು ಒದಗಿಸುವ ಮೂಲಕ ಜನರಿಗೆ ವಿವಿಧ ಸೌಲಭ್ಯಗಳನ್ನು ನೀಡುವ ವಾತಾವರಣವನ್ನು ನಿರ್ಮಾಣ ಮಾಡಲು ಅಧಿಕಾರಿಗಳು ಶ್ರಮಿಸಬೇಕು. ಜನರಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಕಾಲಕಾಲಕ್ಕೆ ಒದಗಿಸಬೇಕೆಂದರು.

ಜಿಲ್ಲೆಯಲ್ಲಿ ಮರಳುಗಾರಿಕೆ, ಅರಣ್ಯ ಸಂರಕ್ಷಣೆ ಹಾಗೂ ಗ್ರಾಮೀಣ ಭಾಗದ ಅಂಗಡಿ ಹಾಗೂ ಪಾನ್ ಬೀಡಾ ಅಂಗಡಿಗಳಲ್ಲಿ ಮದ್ಯ ಮಾರಾಟದ ಕುರಿತು ನಿಗಾ ನಿರ್ವಹಿಸಬೇಕು. ಆಕ್ರಮ ಮದ್ಯ ಮಾರಾಟದ ಮೇಲೆ ಸಂಬAಧಿಸಿದ ಅಧಿಕಾರಿಗಳು ಕೂಡಲೇ ಕ್ರಮ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಕರ್ನಾಟಕ ಲೋಕಾಯುಕ್ತರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಈ ಹಿಂದೆ ಸರ್ಕಾರದಿಂದ ಮಹತ್ವ ಯೋಜನೆ ಕೈಗೊಳ್ಳಲಾಗಿದೆ. ಮಳೆ ಬರದೆ ಇರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಆರ್.ಓ ಪಾಂಟ್ಲ್ ಸಲುವಾಗಿ ಕೋಟ್ಯಾಂತರ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಪ್ರಸ್ತುತ ಶೇ.50ರಷ್ಟು ಆರ್.ಓ ಪ್ಲಾಂಟ್‌ಗಳು ಸರಿಯಾಗಿ ನಿರ್ವಹಣೆ ಇಲ್ಲದೆ ಹಾಳಾಗಿವೆ. ಅವುಗಳನ್ನು ಸರಿಪಡಿಸಬೇಕು. ರಾಯಚೂರು ಜಿಲ್ಲೆಯ 811 ಹಳ್ಳಿಗಳ ಪೈಕಿ ಸುಮಾರು 700 ಹಳ್ಳಿಗಳಲ್ಲಿ ಆರ್.ಓ ಪ್ಲಾಂಟ್ ನೀಡಲಾಗಿದೆ. ದೇವದುರ್ಗ ಹಾಗೂ ಮಾನ್ವಿ ತಾಲ್ಲೂಕಿನ ಹಳ್ಳಿಗಳಲ್ಲಿ ಜನರಿಗೆ ಶುದ್ಧ ನೀರು ಸಿಗದ ಕಾರಣ ಆರೋಗ್ಯದ ಸಮಸ್ಯೆ ಎದುರಾದ ಕುರಿತು ಲೋಕಾಯುಕ್ತರಿಂದ ಸ್ವಯಂ ಪ್ರಕರಣಗಳು ದಾಖಲಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 319 ಕೆರೆಗಳಿದ್ದು, ಎಲ್ಲಾ ಕೆರೆಗಳ ಮೇಲೆ ಸಾರ್ವಜನಿಕ ಹಿತಶಕ್ತಿ ಪ್ರಕರಣದಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಎರಡು ಕೆರೆಗಳನ್ನು ಹೊರತು ಪಡಿಸಿ ಎಲ್ಲ ಕೆರೆಗಳು ಸರ್ವೆ ಮಾಡಲಾಗಿದೆ. ಕೆರೆಯ ಅಭಿವೃದ್ಧಿ ಕುರಿತು ಯೋಜನೆಗಳನ್ನು ರೂಪಿಸಬೇಕು. ಕೆರೆಗಳನ್ನು ಅಭಿವೃದ್ಧಿ ಪಡಿಸಿ ಸಾರ್ವಜನಿಕರ ಉಪಯೋಗಕ್ಕೆ ನೀಡಬೇಕೆಂದರು.

ನಗರದ ಸ್ವಚ್ಛತೆ ಕುರಿತು ಪ್ರತಿಯೊಬ್ಬ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಬೇಕು. ಮನೆಯ ಸ್ವಚ್ಛತೆ ಯಂತೆಯೇ, ನಗರ ಸ್ವಚ್ಛತೆಗೂ ಆದ್ಯತೆಯ ಮೇಲೆ ಪ್ರಾಮುಖ್ಯತೆ ನೀಡಲು ಅಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬ ನಾಗರಿಕರು ಈ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದರು.

ಸಭೆಯಲ್ಲಿ ಜಿಪಂ ಸಿಇಒ ಈಶ್ವರ್ ಕಾಂದೂ, ಎಸ್ಪಿ ಅರುಣಾಂಗ್ಷು ಗಿರಿ, ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹಾಪಾತ್ರ, ಲೋಕಾಯುಕ್ತ ಪೊಲೀಸ್ ರಾಯಚೂರು ಜಿಲ್ಲಾ ಅಧೀಕ್ಷಕ ಸಿದ್ದರಾಜು ಸೇರಿ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ, ಸಿಬ್ಬಂದಿ ವರ್ಗದವರು ಸಭೆಯಲ್ಲಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾಜಿ ಸಿಎಂ ಸಿದ್ದರಾಮಯ್ಯ ಪಲಾಯನವಾದಿ: ಕೌಟಿಲ್ಯ ಕಿಡಿ
ಜನಪದ ರಂಗಭೂಮಿಗೆ ಮರುಜೀವ ನೀಡಬೇಕು; ವೆಂಕಟೇಶ್