ಮತಗಟ್ಟೆಗೆ ಅಗತ್ಯ ಸೌಕರ್ಯ ಕಲ್ಪಿಸಿ

KannadaprabhaNewsNetwork | Published : Apr 7, 2024 1:45 AM

ಸಾರಾಂಶ

ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಬಿ.ಆನಂದ ಚಿತ್ರದುರ್ಗ ತಾಲೂಕು ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತುರುವನೂರು ಹೋಬಳಿ ವ್ಯಾಪ್ತಿಯ ಇಒ, ಪಿಡಿಒ, ಗ್ರಾಮ ಲೆಕ್ಕಾಧಿಕಾರಿ ಹಾಗೂ ಸೆಕ್ಟರ್ ಅಧಿಕಾರಿಗಳ ಸಭೆಯಲ್ಲಿ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಕುರಿತು ಕೂಲಂಕುಷವಾಗಿ ಚರ್ಚೆ ನಡೆಸಿದರು.

ಕನ್ನಡಪ್ರಭವಾರ್ತೆ ಚಳ್ಳಕೆರೆ

ಏ.೨೬ರ ಶುಕ್ರವಾರ ಮತದಾನ ನಡೆಯಲಿದ್ದು, ತುರುವನೂರು ಹೋಬಳಿ ವ್ಯಾಪ್ತಿಯ ಎಲ್ಲಾ ಮತಗಟ್ಟೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಒದಗಿಸಬೇಕು. ವಿಶೇಷವಾಗಿ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ, ಬೆಳಕು, ಕುಡಿಯುವ ನೀರು ಮುಂತಾದ ಸೌಲಭ್ಯಗಳನ್ನು ಸಮರ್ಪಕವಾಗಿ ಸಂಬಂಧಪಟ್ಟ ಅಧಿಕಾರಿಗಳು ನಿರ್ವಹಿಸಬೇಕು. ಯಾವುದೇ ಲೋಪವಾಗದಂತೆ ಈಗಿನಿಂದಲೇ ಎಚ್ಚರಿಕೆ ವಹಿಸಬೇಕು. ಯಾವುದೇ ಸಮಸ್ಯೆ ನಿಮ್ಮಿಂದ ಇತ್ಯರ್ಥವಾಗದೇ ಇದ್ದಲ್ಲಿ ನಮ್ಮ ಗಮನಕ್ಕೆ ತನ್ನಿ. ಒಟ್ಟಿನಲ್ಲಿ ಮತದಾನ ಪ್ರಕ್ರಿಯೆ ಸಂದರ್ಭದಲ್ಲಿ ಅನಗತ್ಯ ವಿವಾದ ಉಂಟಾಗದಂತೆ ಜಾಗ್ರತೆ ವಹಿಸಿ, ಈಗಾಗಲೇ ಸಾಕಷ್ಟು ಚುನಾವಣೆಗಳಲ್ಲಿ ಕಾರ್ಯನಿರ್ವಹಿಸಿದ ನಿಮಗೆ ಹೆಚ್ಚು ಅನುಭವವಿದೆ. ನಿಮ್ಮ ಪಾಲಿನ ಕರ್ತವ್ಯವನ್ನು ಸರಿಯಾದ ರೀತಿಯಲ್ಲೇ ಮಾಡಿದಲ್ಲಿ ಯಾವುದೇ ಸಮಸ್ಯೆ ಉಂಟಾಗದು ಎಂದರು.

ಚಿತ್ರದುರ್ಗ ತಾಪಂ ಕಾರ್ಯನಿರ್ವಹಣಾಧಿಕಾರಿ ಅನಂತರಾಜ್ ಮಾತನಾಡಿ, ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ತುರುವನೂರು ಹೋಬಳಿಯಲ್ಲಿ ಒಟ್ಟು ೫ ಗ್ರಾಪಂ ಈ ವ್ಯಾಪ್ತಿಗೆ ಸೇರಿವೆ. ಈಗಾಗಲೇ ನಿಯೋಜನೆಗೊಂಡ ಅಧಿಕಾರಿಗಳು, ಸಿಬ್ಬಂದಿ ವರ್ಗ ಮತದಾನಕ್ಕೆ ಬೇಕಾಗುವ ಎಲ್ಲಾ ಸಿದ್ದತೆಗಳನ್ನು ಸಮರೋಪಾಧಿಯಲ್ಲಿ ಕೈಗೊಂಡು ಪೂರೈಸಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಯಾವುದೇ ದೊಡ್ಡ ಪ್ರಮಾಣದ ಲೋಪವಿಲ್ಲ. ಆದರೂ ಅಧಿಕಾರಿಗಳು ಎಚ್ಚರಿಕೆಯಿಂದ ಇರಲು ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ರೇಹಾನ್‌ಪಾಷ, ಚುನಾವಣೆ ಶಿರಸ್ಥೇದಾರ್ ಹಸೀನ ಬೇಗಂ, ಶ್ರೀಧರ, ಓಬಳೇಶ್ ಮುಂತಾದವರು ಉಪಸ್ಥಿತರಿದ್ದರು.

Share this article