ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಮೂರು ಬಾಲಕಿಯರ ವಸತಿ ನಿಲಯಗಳು ಹಾಗೂ ಎರಡು ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಗಳಿಗೆ ಭೇಟಿ ನೀಡಿ, ಅಲ್ಲಿನ ಮೂಲಸೌಕರ್ಯಗಳ ಕುರಿತು ಪರಿಶೀಲಿಸಿ, ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿದ್ಯಾರ್ಥಿಗಳಿಗೆ ಸಮಯಾನುಸಾರ ಉಪಾಹಾರ, ಊಟ, ಶುದ್ಧ ಕುಡಿಯುವ ನೀರು ಮತ್ತು ಮೂಲಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡಬೇಕು ಎಂದರು.ವಸತಿ ನಿಲಯದ ಗ್ರಂಥಾಲಯಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಪುಸ್ತಕಗಳು, ದಿನಪತ್ರಿಕೆಗಳು, ಮಾಸ ಪತ್ರಿಕೆಗಳನ್ನು ಪೂರೈಸಬೇಕು. ಗಣಕಯಂತ್ರ ಕೊಠಡಿಗಳಲ್ಲಿ ಕಡ್ಡಾಯವಾಗಿ ಇಂಟರ್ನೆಟ್ ವ್ಯವಸ್ಥೆ ಒದಗಿಸಬೇಕು. ಪ್ರತಿ ಮಾಹೆ ತಪ್ಪದೇ ವೈದ್ಯಕೀಯ ತಪಾಸಣೆ ನಡೆಸಿ, ಅವರ ಆರೋಗ್ಯದ ಕುರಿತು ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಗ್ರಿಗಳನ್ನು ಪೂರೈಸಿ ಕ್ರೀಡೆಯಲ್ಲಿ ತೊಡಗುವಂತೆ ಪ್ರೇರೇಪಿಸಬೇಕು. ವಸತಿ ನಿಲಯದಲ್ಲಿ ಸಣ್ಣಪುಟ್ಟ ದುರಸ್ತಿ ಕಾರ್ಯಗಳು ಬಾಕಿ ಇದ್ದಲ್ಲಿ ತುರ್ತಾಗಿ ದುರಸ್ತಿಪಡಿಸಬೇಕು ಎಂದು ಸೂಚನೆ ನೀಡಿದರು.ಇದೆ ವೇಳೆ ಅವರು ಅಡುಗೆ ಕೊಠಡಿ, ಭೋಜನಾಲಯ, ಸೋಲಾರ್ ವ್ಯವಸ್ಥೆ, ವಿದ್ಯಾರ್ಥಿ ತಂಗುವ ಕೊಠಡಿಗಳು, ಆಹಾರ ಪದಾರ್ಥಗಳ ಪರಿಶೀಲಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪುಂಡಲೀಕ ಮಾನವರ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಈರಣ್ಣ ಆಶಾಪುರ, ಸಹಾಯಕ ನಿರ್ದೇಶಕ ಎಸ್.ಎಂ.ಪಾಟೀಲ ಹಾಗೂ ವಸತಿ ನಿಲಯಗಳ ನಿಲಯ ಪಾಲಕ ಟಿ.ವಿ.ಹಂಚನಾಳ, ಪಾರ್ವತಿ ಆಲಮೇಲ, ರೂಪಾ ಮೇತ್ರಿ, ಪೂಜಾ ನಿಕ್ಕಂ, ಶೀರಿನಾ ಅಗಸಿಮುಂದಿನ ಮುಂತಾದವರು ಇದ್ದರು.