ಮಕ್ಕಳು, ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕಾಂಶ ಆಹಾರ ನೀಡಿ: ದರ್ಶನ್ ಪುಟ್ಟಣ್ಣಯ್ಯ

KannadaprabhaNewsNetwork |  
Published : Sep 13, 2025, 02:04 AM IST
12ಕೆಎಂಎನ್ ಡಿ16 | Kannada Prabha

ಸಾರಾಂಶ

ಪ್ರತಿಯೊಬ್ಬರಿಗೂ ಪೌಷ್ಟಿಕಾಂಶ ಆಹಾರ ನೀಡಿ ಸೇವನೆ ಬಗ್ಗೆ ಅರಿವು ಮೂಡಿಸಬೇಕು. ನಮ್ಮಲ್ಲಿ ಶೇ.40 ರಿಂದ 45 ರಷ್ಟು ಮಂದಿಗೆ ಪೌಷ್ಟಿಕಾಂಶದ ಕೊರತೆ ಇದೆ. ಇದು ಮುಂದಿನ ಮಕ್ಕಳ ಆರೋಗ್ಯಕರ ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರು ಪ್ರತಿ ಮನೆಗೂ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಬೇಕು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಮಕ್ಕಳು, ಗರ್ಭಿಣಿ, ಬಾಣಂತಿರಿಗೆ ಪೌಷ್ಟಿಕಾಂಶ ಆಹಾರ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಹೇಳಿದರು.

ಪಟ್ಟಣದ ಕಸಾಪ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ದಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹಾಗೂ ಬನ್ನಂಗಾಡಿ, ಅರಳಕುಪ್ಪೆ, ಕೆರೆತೊಣ್ಣೂರು, ಚಿಕ್ಕಬ್ಯಾಡರಹಳ್ಳಿ ವೃತ್ತದ ಅಂಗನವಾಡಿ ಕಾರ್ಯಕರ್ತಯರು ಹಮ್ಮಿಕೊಂಡಿದ್ದ ಪೋಷಣ್ ಅಭಿಯಾನ ಮಾಸಾಚರಣೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಹೆಣ್ಣು ಭ್ರೂಣಹತ್ಯೆ ತಡೆ, ಭ್ರೂಣ ಲಿಂಗಪತ್ತೆ ನಿಷೇಧ ಜಾಗೃತಿ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬರಿಗೂ ಪೌಷ್ಟಿಕಾಂಶ ಆಹಾರ ನೀಡಿ ಸೇವನೆ ಬಗ್ಗೆ ಅರಿವು ಮೂಡಿಸಬೇಕು. ನಮ್ಮಲ್ಲಿ ಶೇ.40 ರಿಂದ 45 ರಷ್ಟು ಮಂದಿಗೆ ಪೌಷ್ಟಿಕಾಂಶದ ಕೊರತೆ ಇದೆ. ಇದು ಮುಂದಿನ ಮಕ್ಕಳ ಆರೋಗ್ಯಕರ ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರು ಪ್ರತಿ ಮನೆಗೂ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಬೇಕು. ಅಂಗನವಾಡಿಯಲ್ಲಿ ಮಕ್ಕಳಿಗೆ ಪೋಷಿಕ ಆಹಾರ ವಿತರಣೆ ಮಾಡಬೇಕು ಎಂದರು.

ಅಂಗನವಾಡಿ ಕಾರ್ಯಕರ್ತೆಯರು ಹೆಣ್ಣೂ ಭ್ರೂಣ ಹತ್ಯೆ, ಪತ್ತೆ ಹಾಗೂ ಬಾಲ್ಯವಿವಾಹ ತಡೆ ಬಗ್ಗೆ ಅರಿವು ಮೂಡಿಸಬೇಕು. ಒಂದು ವೇಳೆ ನಡೆದರೆ ತಕ್ಷಣ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಕಾಯ್ದೆಯ ಬಗ್ಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ಸಿಡಿಪಿಒ ಕೆ.ಆರ್.ಪೂರ್ಣಿಮಾ ಮಾತನಾಡಿ, ಬಾಲ್ಯ ವಿವಾಹ ಮಾಡಿಕೊಳ್ಳುವ ಹೆಣ್ಣುಮಕ್ಕಳು ಮುಂದೆ ಸಾಕಷ್ಟು ಆರೋಗ್ಯ ಸಮಸ್ಯೆಗಳನ್ನು ಎದುರಿಸಲಿದ್ದಾರೆ. ಈ ಬಗ್ಗೆ ಎಚ್ಚರ ವಹಿಸಬೇಕು. ಜನಸಂಖ್ಯೆ ಬೆಳೆದಂತೆ ಆರೋಗ್ಯ ಸಮಸ್ಯೆಯೂ ಸಹ ಹೆಚ್ಚಾಗುತ್ತಿದೆ. ಇದಕ್ಕೆ ಪೌಷ್ಟಿಕ ಆಹಾರ ಸೇವೆ ಮಾಡುವುದು ಕಡಿಮೆಯಾಗಿರುವುದೇ ಪ್ರಮುಖ ಕಾರಣ ಎಂದರು.

ಹೊರಗಡೆ ಮಕ್ಕಳಿಗೆ ಜಂಕ್‌ಫುಡ್ ತಿನ್ನಿಸುವುದರಿಂದ ಚಿಕ್ಕಚಿಕ್ಕ ಮಕ್ಕಳು ಬಿಪಿ, ಶುಗರ್ ನಂತಹ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ. ಹಾಗಾಗಿ ವ್ಯಾಯಾಮ, ಯೋಗ, ವಾಕಿಂಗ್, ಮಿತವಾದ ಆಹಾರ ಬಳಿಕೆ ಮಾಡುವುದನ್ನು ರೂಡಿಸಿಕೊಳ್ಳಬೇಕು ಎಂದರು.

ಇದೇ ವೇಳೆ ಪೌಷ್ಟಿಕಾಂಶದ ಆಹಾರಗಳ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು. ಐದು ಮಂದಿ ಗರ್ಭಿಣಿಯರಿಗೆ ಫಲತಾಂಬೂಲ ನೀಡಿ ಸೀಮಂತ ಶಾಸ್ತ್ರ ಮಾಡಲಾಯಿತು, ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಬಸವರೆಡ್ಡಪ್ಪ ರೋಣದ, ಪುರಸಭೆ ಅಧ್ಯಕ್ಷೆ ಜ್ಯೋತಿಲಕ್ಷ್ಮಿ, ಉಪಾಧ್ಯಕ್ಷ ಅಶೋಕ್, ಸದಸ್ಯ ಎಂ.ಗಿರೀಶ್, ಸಾಹಿತಿ ಚಂದ್ರಶೇಖರಯ್ಯ, ಸ್ಮಿತಾ ಪುಟ್ಟಣ್ಣಯ್ಯ, ಆರೋಗ್ಯ ಇಲಾಕೆ ಶಿವಮ್ಮ, ಮೇಲ್ವಿಚಾರಿಕಿಯರಾದ ಲಕ್ಷ್ಮಿ, ಜಕೀಯಬಾನು, ಪೋಷಣ್ ಸಂಯೋಜಕರಾದ ಅನುಷ, ಮೇರಿ, ಶೋಭಾ, ಅಂಬುಜ, ಶೀಲ, ರುಕ್ಮಣಿ, ಅಜೀಂಪ್ರೇಮ್‌ಜೀ ಫೌಂಡೇಷನ ಸಂಯೋಜಕರಾದ ಮಾರುತಿ, ತಿಪ್ಪೇಸ್, ರಾಧ ಸೇರಿದಂತೆ ಹಲವರು ಇದ್ದರು.

PREV

Recommended Stories

ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಪೇದೆ ನೇಮಕಕ್ಕೆ ವಯೋಮಿತಿ ಸಡಿಲಕ್ಕೆ ಶೀಘ್ರ ಪ್ರಸ್ತಾವ : ಪರಂ