ತುಂಗಭದ್ರಾ ಪ್ರವಾಹ ಪೀಡಿತರಿಗೆ ಶಾಶ್ವತ ಪರಿಹಾರ ಕಲ್ಪಿಸಿ

KannadaprabhaNewsNetwork | Published : Aug 3, 2024 12:40 AM

ಸಾರಾಂಶ

ಹೆಚ್ಚು ಮಳೆಯಾದಾಗಲೆಲ್ಲ ಹೊನ್ನಾಳಿ ಬಾಲರಾಜ್ ಘಾಟ್ ಮತ್ತು ಬಂಬೂ ಬಜಾರ್ ಪ್ರದೇಶಗಳಲ್ಲಿ ನದಿ ನೀರು ಜನವಸತಿ ಪ್ರದೇಶಗಳಿಗ ನುಗ್ಗುತ್ತಿದೆ. ಇದರಿಂದಾಗಿ ನಿವಾಸಿಗಳು ಕಾಳಜಿ ಕೇಂದ್ರದಗಳಲ್ಲಿಯೇ ಆಶ್ರಯ ಪಡೆಯಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಜಿಲ್ಲಾ ಮತ್ತು ತಾಲೂಕು ಆಡಳಿತಗಳು ಸಂತ್ರಸ್ತರಿಗೆ ಬೇರೆಡೆ ಸೂರು ಕಲ್ಪಿಸಿ, ಶಾಶ್ವತ ಪರಿಹಾರ ಒದಗಿಸಬೇಕು ಎಂದು ಹೊನ್ನಾಳಿ ಜೆಎಂಎಫ್‌ಸಿ ನ್ಯಾಯಾಲಯ ಹೆಚ್ಚುವರಿ ನ್ಯಾಯಾಧೀಶ ಎಸ್.ಎನ್. ಪುಣ್ಯಕೋಟಿ ಹೊನ್ನಾಳಿಯಲ್ಲಿ ಹೇಳಿದ್ದಾರೆ.

- ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿ ನ್ಯಾ. ಪುಣ್ಯಕೋಟಿ ಸೂಚನೆ - - - ಕನ್ನಡಪ್ರಭ ವಾರ್ತೆ ಹೊನ್ನಾಳಿ

ಹೆಚ್ಚು ಮಳೆಯಾದಾಗಲೆಲ್ಲ ಹೊನ್ನಾಳಿ ಬಾಲರಾಜ್ ಘಾಟ್ ಮತ್ತು ಬಂಬೂ ಬಜಾರ್ ಪ್ರದೇಶಗಳಲ್ಲಿ ನದಿ ನೀರು ಜನವಸತಿ ಪ್ರದೇಶಗಳಿಗ ನುಗ್ಗುತ್ತಿದೆ. ಇದರಿಂದಾಗಿ ನಿವಾಸಿಗಳು ಕಾಳಜಿ ಕೇಂದ್ರದಗಳಲ್ಲಿಯೇ ಆಶ್ರಯ ಪಡೆಯಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಜಿಲ್ಲಾ ಮತ್ತು ತಾಲೂಕು ಆಡಳಿತಗಳು ಸಂತ್ರಸ್ತರಿಗೆ ಬೇರೆಡೆ ಸೂರು ಕಲ್ಪಿಸಿ, ಶಾಶ್ವತ ಪರಿಹಾರ ಒದಗಿಸಬೇಕು ಎಂದು ಹೊನ್ನಾಳಿ ಜೆಎಂಎಫ್‌ಸಿ ನ್ಯಾಯಾಲಯ ಹೆಚ್ಚುವರಿ ನ್ಯಾಯಾಧೀಶ ಎಸ್.ಎನ್. ಪುಣ್ಯಕೋಟಿ ಹೇಳಿದರು.

ಗುರುವಾರ ಸಂತ್ರಸ್ತರು ಆಶ್ರಯ ಪಡೆದಿರುವ ಅಂಬೇಡ್ಕರ್ ಭವನದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ, ಊಟ, ವಸತಿ, ಕುಡಿಯುವ ನೀರು, ಆರೋಗ್ಯ ತಪಾಸಣೆ ವ್ಯವಸ್ಥೆಗಳ ಕುರಿತು ಅವರು ಮಾಹಿತಿ ಪಡೆದರು.

ಈ ವೇಳೆ ಸಂತ್ರಸ್ತರು ನ್ಯಾಯಾಧೀಶರೊಂದಿಗೆ ತಮ್ಮ ಅಳಲು ತೋಡಿಕೊಂಡರು. ಅತಿವೃಷ್ಟಿ ಆದಾಗಲೆಲ್ಲಾ ತಮಗೆ ಇದೇ ಗೋಳು ಆಗಿದೆ. ನದಿ ನೀರಿನಿಂದಾಗಿ ಮನೆಗಳು ಶಿಥಿಲಗೊಂಡಿವೆ. ಎಲ್ಲರೂ ಕೂಲಿ ಮಾಡಿಕೊಂಡು ಜೀವನ ಸಾಗಿಸುವವರೇ ಆಗಿದ್ದಾರೆ. ತಮಗೆ ಸುರಕ್ಷಿತ ಸ್ಥಳದಲ್ಲಿ ಸೂರು ನಿರ್ಮಿಸಿಕೊಟ್ಟರೆ ಪ್ರವಾಹದಿಂದ ಕುಟುಂಬಗಳ ಸ್ಥಳಾಂತರದ ಸಮಸ್ಯೆಗೆ ಶಾಶ್ವತ ಪರಿಹಾರ ಲಭಿಸಿದಂತಾಗುತ್ತದೆ ಎಂದರು.

ತಹಸೀಲ್ದಾರ್ ಪಟ್ಟರಾಜ ಗೌಡ ಈ ಸಂದರ್ಭ ಮಾತನಾಡಿ, ಪ್ರವಾಹಪೀಡಿತ ಸ್ಥಳಗಳಿಗೆ ಸ್ಥಳೀಯ ಶಾಸಕರು, ಸೇರಿ ಜಿಲ್ಲಾಧಿಕಾರಿ, ಜಿಪಂ ಸಿಇಒ ಜಿಲ್ಲಾಮಟ್ಟದ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿ ಅವಲೋಕನ ಮಾಡಿದ್ದಾರೆ. ಈ ಸಮಸ್ಯೆಗಳಿಗೆ ಮುಂದಿನ ದಿನಗಳಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳುವ ಬಗ್ಗೆ ಭರವಸೆ ನೀಡಿದ್ದಾರೆ ಎಂದರು.

ಪುರಸಭೆ ಮುಖ್ಯಾಧಿಕಾರಿ ಟಿ.ಲೀಲಾವತಿ ಅವರು ಕೂಡ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸಿಕೊಡುವ ಬಗ್ಗೆ ಸ್ಥಳೀಯ ಆಡಳಿತ ವ್ಯವಸ್ಥೆ ಸ್ಥಳೀಯ ಶಾಸಕರ ಸಹಕಾರದೊಂದಿಗೆ ಪರಿಹಾರ ಕಂಡುಕೊಳ್ಳಲು ಮುಂದಾಗಿದೆ ಎಂದು ವಿವರಿಸಿದರು.

ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ರಮೇಶ್, ಪುರಸಭೆ ಸಿಬ್ಬಂದಿ ಇದ್ದರು.

- - -

ಕೋಟ್‌ ಕಾಳಜಿ ಕೇಂದ್ರದಲ್ಲಿನ ಸಂತ್ರಸ್ತರಿಗೆ ಆಹಾರ, ಆರೋಗ್ಯ ಸೇವೆ ಕಟ್ಟುನಿಟ್ಟಾಗಿ ಒದಗಿಸಿಕೊಡುವ ಜೊತೆಗೆ, ಇದಕ್ಕಾಗಿ ನೋಡೆಲ್ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ ತಹಸೀಲ್ದಾರ್, ಪುರಸಭೆ ಮುಖ್ಯಾಧಿಕಾರಿ, ಸಿಬ್ಬಂದಿ ಕೂಡ ಆಹೋರಾತ್ರಿ ಗಮನ ಹರಿಸುತ್ತಿದ್ದೇವೆ

- ಪಟ್ಟರಾಜ ಗೌಡ, ತಹಸೀಲ್ದಾರ್

- - - -ಫೋಟೋ:

ಹೊನ್ನಾಳಿ ತುಂಗಭದ್ರಾ ನದಿ ಪ್ರವಾಹದಿಂದಾಗಿ ಸಂತ್ರಸ್ತರು ಆಶ್ರಯ ಪಡೆದಿರುವ ಅಂಬೇಡ್ಕರ್ ಭವನದ ಕಾಳಜಿ ಕೇಂದ್ರಕ್ಕೆ ಗುರುವಾರ ಹೊನ್ನಾಳಿ ಜೆಎಂಎಫ್‌ಸಿ ನ್ಯಾಯಾಲಯ ಹೆಚ್ಚುವರಿ ನ್ಯಾಯಾಧೀಶ ಎಸ್.ಎನ್. ಪುಣ್ಯಕೋಟಿ ಅವರು ಭೇಟಿ ನೀಡಿ, ಸಂತ್ರಸ್ತರ ಅಹವಾಲು ಆಲಿಸಿದರು. ಇಲಾಖೆಗಳ ಅಧಿಕಾರಿಗಳು ಇದ್ದರು.

Share this article