ಕೃಷಿ ಕಾಮಧೇನು ಮಾಹಿತಿ ಕೇಂದ್ರಕ್ಕೆ ಭೇಟಿ ನೀಡಿದ ಕುಲಪತಿ ಡಾ. ಆರ್.ಸಿ. ಜಗದೀಶ್ ಭೇಟಿ ವಿದ್ಯಾರ್ಥಿಗಳಿಗೆ ಸಲಹೆ
ರೈತರಿಗೆ ಮುಖ್ಯವಾಗಿ ಕೊಯ್ಲೋತ್ತರ ತಂತ್ರಜ್ಞಾನ ಮತ್ತು ಮೌಲ್ಯವರ್ಧನೆ ಕುರಿತು ಮಾಹಿತಿ ನೀಡಬೇಕೆಂದು ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಕುಲಪತಿ ಡಾ.ಆರ್.ಸಿ.ಜಗದೀಶ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಮಂಗಳವಾರ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ಬಿಎಸ್ಸಿ (ಕೃಷಿ) ವಿದ್ಯಾರ್ಥಿಗಳಿಂದ ತಯಾರಿಸಲ್ಪಟ್ಟ ಕೃಷಿ ಕಾಮಧೇನು ಮಾಹಿತಿ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸುಧಾರಿತ ಬೆಳೆ ಪದ್ಧತಿಗಳ ಬಗ್ಗೆ ರೈತರಿಗೆ ಮಾಹಿತಿ ತಲುಪಿಸಬೇಕು ಎಂದು ತಿಳಿಸಿದರು.ಶಿವಮೊಗ್ಗ ಕೃಷಿ ಮಹಾವಿದ್ಯಾಲಯದಲ್ಲಿ ಹೊಸದಾಗಿ ಸ್ಥಾಪನೆಗೊಂಡಿರುವ ಆಹಾರ ಮತ್ತು ಪೌಷ್ಟಿಕತೆ ಲ್ಯಾಬ್ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿ, ವಿದ್ಯಾರ್ಥಿಗಳು ಮುಖ್ಯವಾಗಿ ಮೊಳಕೆ ಬರಿಸಿದ ಕಾಳುಗಳಿಂದ ಮೌಲ್ಯವರ್ಧನೆ ಉತ್ಪನ್ನಗಳು ಹಾಗೂ ದೈನಂದಿನ ಆಹಾರದಲ್ಲಿ ಅವುಗಳ ಮಹತ್ವವನ್ನು ತಿಳಿಸಬೇಕು, ಇತ್ತೀಚಿನ ಕೃಷಿ ಚಟುವಟಿಕೆಯಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಸಾವಯವ ಕೃಷಿ ಮತ್ತು ಮುಖ್ಯ ಬೆಳೆಯೊಂದಿಗೆ ಬೆಳೆಯಬಹುದಾದ ಅಂತರಬೆಳೆಯ ಕುರಿತು ರೈತರಿಗೆ ಹೆಚ್ಚಿನ ಮಾಹಿತಿ ಕೊಡಬೇಕು ಎಂದು ತಿಳಿಸಿದರು.
ಕೃಷಿ ವಿದ್ಯಾರ್ಥಿಯಾದ ಮನೋಜಿ ರಾವ್ ಮೋರೆ ಅವರು ಮಾತನಾಡಿ ಮಾಹಿತಿ ಕೇಂದ್ರದಲ್ಲಿ ಹಾಕಿರುವ ವಿವಿಧ ಮಾಹಿತಿಯನ್ನು ಕುಲಪತಿ ಡಾ. ಆರ್.ಪಿ. ಜಗದೀಶ್ ಅವರಿಗೆ ವಿವರಿಸಿದರು.
19ಕೆಟಿಆರ್.ಕೆ.1
ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ಬಿಎಸ್ಸಿ (ಕೃಷಿ) ವಿದ್ಯಾರ್ಥಿಗಳಿಂದ ತಯಾರಿಸಲ್ಪಟ್ಟ ಕೃಷಿ ಕಾಮಧೇನು ಮಾಹಿತಿ ಕೇಂದ್ರಕ್ಕೆ ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ಭೇಟಿ ನೀಡಿ ಮಾತನಾಡಿದರು.