ಕನ್ನಡಪ್ರಭ ವಾರ್ತೆ ಗೌರಿಬಿದನೂರು
ಈ ವೇಳೆ ಬಿಸಿಯೂಟಕ್ಕೆ ಸರಬರಾಜಾಗಿದ್ದ ಅಕ್ಕಿಯಲ್ಲಿ ಹುಳುಗಳು ಕಂಡು ಬಂದಿದ್ದು, ಸಾಂಬರಿಗೆ ಬಳಸುವ ತೊಗರಿ ಬೇಳೆ ದಾಸ್ತಾನು ಇಲ್ಲದಿರುವ ಬಗ್ಗೆ ಚರ್ಚಿಸಿದರು. ಅನ್ನ ಮತ್ತು ಸಾಂಬರು ಗುಣಮಟ್ಟದ ಬಗ್ಗೆ ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಸರ್ಕಾರಿ. ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ಗುಣಮಟ್ಟ ಕಾಪಾಡಿಕೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದರು. ಬಳಿಕ ಮಾತನಾಡಿದ ಜಿ.ಪಂ ಸಿಇಒ ಡಾ.ವೈ.ನವೀನ್ ಭಟ್, ಗೌರಿಬಿದನೂರು ತಾಲ್ಲೂಕಿನಲ್ಲಿ 2025-26 ನೇ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಉತ್ತಮಪಡಿಸಲು ಜಿಲ್ಲಾಡಳಿತ ವತಿಯಿಂದ ನನಗೆ ಉಸ್ತುವಾರಿ ಜವಾಬ್ದಾರಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರ ಕೆಲವು ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು. ಬಳಿಕ ಶಿಕ್ಷಕರೊಂದಿಗೆ ಚರ್ಚಿಸಿ ವಿದ್ಯಾರ್ಥಿಗಳಿಗೆ ಅಗತ್ಯ ಪಠ್ಯದ ತರಬೇತಿ ಜೊತೆಗೆ ಪರೀಕ್ಷೆಗೆ ಸಿದ್ಧರಾಗುವ ಎಲ್ಲ ಸಿದ್ದತೆಗಳನ್ನು ಹಂತಹಂತವಾಗಿ ಮಾಡಬೇಕಾಗಿದೆ. ಗುಣಮಟ್ಟದ ಶಿಕ್ಷಣದ ಜೊತೆಗೆ ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಹೆಚ್ಚಿಸುವುದು ನಮ್ಮ ಗುರಿಯಾಗಿದೆ ಎಂದರು.ದೂರು ಬಂದರೆ ಕ್ರಮ
ಇತ್ತೀಚೆಗೆ ನಗರದ ಹೊರವಲಯದಲ್ಲಿನ ಆದರ್ಶ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಮಧ್ಯಾಹ್ನ ಬಿಸಿಯೂಟಕ್ಕೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಬಂದಿದ್ದವು. ಇದರಿಂದಾಗಿ ಅಲ್ಲಿನ ಪ್ರಭಾರ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. ಒಂದು ವೇಳೆ ಮುಖ್ಯ ಶಿಕ್ಷಕಿಯಿಂದ ಯಾವುದೇ ತೊಂದರೆ ಇಲ್ಲವೆಂದು ವರದಿ ಬಂದಲ್ಲಿ ಖಂಡಿತವಾಗಿಯೂ ಅಮಾನತನ್ನು ಹಿಂಪಡೆಯಲು ಆದೇಶ ಹೊರಡಿಸಲಾಗುವುದು. ಇದೇ ರೀತಿ ತಾಲ್ಲೂಕಿನ ವಿವಿಧ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟಕ್ಕೆ ಸಂಬಂಧಿಸಿದಂತೆ ದೂರುಗಳು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ವಹಿಸಲಾಗುವುದು ಎಂದು ಹೇಳಿದರು. ಈ ವೇಳೆ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿನ ಅಡುಗೆ ಕೋಣೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸಿದ್ಧವಾಗಿದ್ದ ಬಿಸಿ ಅನ್ನ ಮತ್ತು ಸಾಂಬರನ್ನು ಪರೀಕ್ಷಿಸಿ ಆಹಾರದಲ್ಲಿ ಗುಣಮಟ್ಟ ಕಾಪಾಡುವಂತೆ ಮುಖ್ಯ ಶಿಕ್ಷಕರು ಮತ್ತು ಅಡುಗೆ ಸಿಬ್ಬಂಧಿಗೆ ಎಚ್ಚರಿಸಿದರು.ಸಹಾಯಕ ನಿರ್ದೇಶಕ ಗೈರುಬಳಿಕ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಿಗೆ ಅನೇಕ ಬಾರಿ ಮೊಬೈಲ್ ಕರೆ ಮಾಡಿ ತುರ್ತಾಗಿ ಸ್ಥಳಕ್ಕೆ ಬರುವಂತೆ ಸೂಚಿಸಿದರೂ ಕೂಡ ಅವರು ಬರಲಿಲ್ಲ. ಜಿಪಂ ಸಿಇಒ ಶಾಲೆಯಿಂದ ತೆರಳಿದ ಬಳಿಕ ಸ್ಥಳದಲ್ಲಿ ಪ್ರತ್ಯಕ್ಷವಾದರು. ಈ ವೇಳೆ ತಾಪಂ ಇಒ ಜಿ.ಕೆ. ಹೊನ್ನಯ್ಯ, ಬಿಇಒ ಜಿ.ಗಂಗರೆಡ್ಡಿ, ವಿಷಯ ಪರಿವೀಕ್ಷಕರಾದ ಲಕ್ಷ್ಮಿಕಾಂತ್, ತಾ.ಪಂ ವ್ಯವಸ್ಥಾಪಕರು ಮತ್ತು ಪಿಡಿಒ ಆರ್.ಎನ್.ಬಾಲಕೃಷ್ಣ ಸೇರಿದಂತೆ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.