ಜನರ ಅವಹಾಲುಗಳಿಗೆ ಪರಿಹಾರ ನೀಡಿ: ಭೀಮಣ್ಣ ನಾಯ್ಕ

KannadaprabhaNewsNetwork |  
Published : Apr 29, 2026, 03:45 AM IST
ಸಿದ್ದಾಪುರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು. | Kannada Prabha

ಸಾರಾಂಶ

ಈಗಾಗಲೇ ಹೋಬಳಿ ಮಟ್ಟದ ಜನಸ್ಪಂದನ ಸಭೆ ನಡೆಸಲಾಗಿದ್ದು, ಜನರಿಂದ ಬಂದ ಅವಹಾಲುಗಳಿಗೆ ಅಧಿಕಾರಿಗಳು ಪರಿಹಾರ ನೀಡಬೇಕು.

ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕ ಸೂಚನೆ

ಕನ್ನಡಪ್ರಭ ವಾರ್ತೆ ಸಿದ್ದಾಪುರಈಗಾಗಲೇ ಹೋಬಳಿ ಮಟ್ಟದ ಜನಸ್ಪಂದನ ಸಭೆ ನಡೆಸಲಾಗಿದ್ದು, ಜನರಿಂದ ಬಂದ ಅವಹಾಲುಗಳಿಗೆ ಅಧಿಕಾರಿಗಳು ಪರಿಹಾರ ನೀಡಬೇಕು. ಪರಿಹರಿಸುವಲ್ಲಿ ಸಮಸ್ಯೆ ಇದ್ದರೆ ಚರ್ಚಿಸಿ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆರೋಗ್ಯ ಇಲಾಖೆಯ ಮಾಹಿತಿ ನೀಡಿದ ಡಾ. ಲಕ್ಷ್ಮಿಕಾಂತ ನಾಯ್ಕ, ತಾಲೂಕಿನಲ್ಲಿ ಕಳೆದ ಒಂದು ತಿಂಗಳಿನಲ್ಲಿ 1 ಕುಷ್ಠರೋಗ, 2 ಕ್ಷಯ ರೋಗ ಪತ್ತೆಯಾಗಿದೆ. ಮಂಗನಕಾಯಿಲೆಯಲ್ಲಿ ಇದುವರೆಗೂ 6 ಪ್ರಕರಣಗಳು ಪತ್ತೆಯಾಗಿವೆ. 937 ರಕ್ತದ ಮಾದರಿ ಪರೀಕ್ಷಿಸಲಾಗಿತ್ತು. ಅದರಲ್ಲಿ 3 ಪ್ರಕರಣ ದೃಢಪಟ್ಟಿವೆ. ರೋಗಿಗಳು ಗುಣಮುಖರಾಗಿದ್ದಾರೆ. 143 ನಾಯಿ ಕಡಿತ ಪ್ರಕರಣ ನಡೆದಿವೆ. 163 ಎಂಡೋಸಲ್ಫಾನ್ ಪ್ರಕರಣ ಪತ್ತೆಯಾಗಿವೆ ಎಂದರು. ಸಾರಿಗೆ ಇಲಾಖೆಯ ಪ್ರವೀಣ್ ಶೇಟ್, ಮಾರ್ಚ್ ತಿಂಗಳಿನಲ್ಲಿ 1352000 ಜನ ಶಕ್ತಿ ಯೋಜನೆಯ ಲಾಭವ ಪಡೆದಿದ್ದಾರೆ. ಜನರ ಬೇಡಿಕೆಯಂತೆ ಬಸ್‌ಗಳನ್ನು ನಿಯೋಜಿಸಲಾಗುತ್ತಿದೆ ಎಂದರು.

ಪಶು ಸಂಗೋಪನಾ ಇಲಾಖೆಯ ವಿವೇಕಾನಂದ ಹೆಗಡೆ ಇಲಾಖೆಯ ಮಾಹಿತಿ ನೀಡುವ ಸಂದರ್ಭ ಬೀದಿ ನಾಯಿಗಳ ಹಾವಳಿ ಕುರಿತು ಚರ್ಚೆ ನಡೆಯಿತು. ಬೀದಿನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿದೆ. ಶಿಕ್ಷಕರು ಜನಗಣತಿ ಕಾರ್ಯ ನಡೆಸುತ್ತಿದ್ದು ಅವರು ಹೊರಗಡೆ ಓಡಾಡಲು ಭಯಪಡುವ ವಾತಾವರಣ ಇದೆ. ಬೀದಿನಾಯಿಗಳ ನಿಯಂತ್ರಣಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.ಪಟ್ಟಣ ಪಂಚಾಯಿತಿ ಅಧಿಕಾರಿ ಮತ್ತು ಪಿಡಿಒಗಳು ತಕ್ಷಣ ಬೀದಿನಾಯಿಗಳ ನಿಯಂತ್ರಣಕ್ಕೆ ತಕ್ಷಣ ಕ್ರಮ ವಹಿಸಬೇಕು ಎಂದು ಶಾಸಕರು ಸೂಚಿಸಿದರು. ಕೃಷಿ ಸಹಾಯಕ ನಿರ್ದೇಶಕಿ ಸುಮಾ ಎಸ್. ಎಂ. ವಿವರ ನೀಡಿ, ಈ ಎರಡು ತಿಂಗಳಲ್ಲಿ 17ಎಂಎಂ ಮಳೆ ಆಗಿದೆ. ವಾಡಿಕೆಗಿಂತ ಕಡಿಮೆ ಆಗಿದೆ. ಮುಂಗಾರುಮಳೆ ಕೊರತೆ ಆಗಬಹುದು ಎಂಬ ಸೂಚನೆ ಇದೆ. ಬಿತ್ತನೆ ಬೀಜದ ಬೇಡಿಕೆಯ ವರದಿ ನೀಡಲಾಗಿದೆ. ರಸಗೊಬ್ಬರ ದಾಸ್ತಾನು ಇದೆ. ಈ ಬಾರಿ ಯೂರಿಯಾ ಗೊಬ್ಬರದ ಕೊರತೆ ಉಂಟಾಗುವ ಸಾಧ್ಯತೆ ಇದೆ. ಕಾರಣ ಯೂರಿಯಾ ಗೊಬ್ಬರವನ್ನು ರೈತರ ಎಫ್‌ಐಡಿ ಮೂಲಕ ವಿತರಣೆ ಮಾಡಲಾಗುವುದು ಎಂದರು.

ತಾಲೂಕಿನಲ್ಲಿ 5643 ಹೆಕ್ಟೇರ್ ಪ್ರದೇಶದಲ್ಲಿ ಅಡಕೆ ಬೆಳೆ ಇದೆ. ಇದರಲ್ಲಿ 2650 ಹೆ. ಪ್ರದೇಶದಲ್ಲಿ ಎಲೆಚಿಕ್ಕಿ ರೋಗ ಕಾಣಿಸಿಕೊಂಡಿದೆ ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಅರುಣ ಮಾಹಿತಿ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಎಚ್. ನಾಯ್ಕ ಮಾತನಾಡಿ, ಪ್ರಾಥಮಿಕ ಶಾಲೆಯಲ್ಲಿ 140 ಶಿಕಕರ ಕೊರತೆ ಇದೆ. 27 ಪ್ರೌಢಶಾಲೆ ಶಿಕ್ಷಕರ ಕೊರತೆ ಇದೆ. ಅತಿಥಿ ಶಿಕ್ಷಕರನ್ನು ನೇಮಿಸಿ ತರಗತಿ ನಡೆಸಲಾಗುತ್ತಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಶೇ.99.75 ಫಲಿತಾಂಶ ಬಂದಿದ್ದು, ರಾಜ್ಯದಲ್ಲಿ ತಾಲೂಕು ಮಟ್ಟದಲ್ಲಿ ಎರಡನೇ ಸ್ಥಾನ ದೊರಕಿದೆ ಎಂದರು.

ತಾಲೂಕಿನಲ್ಲಿ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಆಗಬಾರದು. ಪಿಡಿಓಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು. ಕುಡಿಯುವ ನೀರು ಪೂರೈಕೆಗೆ ಬೇಕಾದ ಎಲ್ಲಾ ಸಹಕಾರ ನೀಡಲಾಗುತ್ತದೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.ಎಲ್ಲ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ತಾಪಂ ಆಡಳಿತಾಧಿಕಾರಿ ಡಿ.ಆರ್. ನಾಯ್ಕ, ತಾಪಂ ಇಓ ದೇವರಾಜ ಹಿತಾಲಕೊಪ್ಪ, ತಹಶೀಲ್ದಾರ್ ಎಂ.ಆರ್. ಕುಲಕರ್ಣಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ. ನಾಗರಾಜ ಮತ್ತು ಕೆಡಿಪಿ ಸಭೆಯ ನಾಮ ನಿರ್ದೇಶಿತ ಸದಸ್ಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾವೇರಿ ನೀರು ವಾಸ್ತವಾಂಶ ಸಂಂಗ್ರಹಿಸಿ ಸುಪ್ರೀಂ ಕೋರ್ಟ್‌ಗೆ ರಿಟ್‌: ಎಚ್‌.ಕೆ.ರಾಮು
ವಿಕಸಿತ ಭಾರತ ಭವಿಷ್ಯ ರೂಪಿಸುವ ದೃಢ ಸಂಕಲ್ಪ: ನಿರ್ಮಲಾ ಸೀತಾರಾಮನ್