ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ, ಜಿಲ್ಲೆಯಲ್ಲಿ ಕ್ಷಯರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ. ಪ್ರಾರಂಭದಲ್ಲೇ ಕ್ಷಯ ರೋಗಿಗಳನ್ನು ಗುರುತಿಸಿ ಚಿಕಿತ್ಸೆ ನೀಡಬೇಕು ಹಾಗೂ ಈ ರೋಗ ಹರಡದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕೆಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಕ್ಷಯರೋಗದಿಂದ ಬಾದಿತ ಸಮುದಾಯ ಹಾಗೂ ವ್ಯಕ್ತಿಗಳನ್ನು ಗುರುತಿಸಿ ಸೂಕ್ತ ಚಿಕಿತ್ಸೆ ನೀಡಬೇಕು. ಕ್ಷಯರೋಗಿಗಳಿಗೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ತಲುಪಿಸಿ, ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು. ನ್ಯಾಯಯುತವಾಗಿ ಸೇವೆಗಳು ದೊರಕುವಂತೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಆಶಾಲತಾ ಮಾತನಾಡಿ, ೨೦೨೩ ನೇ ಸಾಲಿನಲ್ಲಿ ೧೬ ಗ್ರಾಮ ಪಂಚಾಯಿತಿಗಳನ್ನು ಕ್ಷಯ ಮುಕ್ತ ಗ್ರಾಮ ಪಂಚಾಯಿತಿಯನ್ನಾಗಿ ಘೋಷಿಸಲಾಗಿದ್ದು, ೨೦೨೪ ನೇ ಸಾಲಿನಲ್ಲಿ ಎಲ್ಲಾ ಪಂಚಾಯಿತಿಗಳನ್ನು ಕ್ಷಯ ಮುಕ್ತ ಗ್ರಾಮ ಪಂಚಾಯತ್‌ಗೆ ಕಾರ್ಯಕ್ರಮ ರೂಪಿಸಲಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ ೭೧೨ ಕ್ಷಯ ರೋಗಿಗಳು ಚಿಕಿತ್ಸೆಯನ್ನು ಪಡೆಯುತ್ತಿದ್ದು, ಎಲ್ಲರಿಗೂ ಉಚಿತ ಚಿಕಿತ್ಸೆಯನ್ನು ನೀಡಲಾಗುತ್ತದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಕೆ.ಪಿ.ಅಶ್ವಥ್, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ಎಂ.ಸೋಮಶೇಖರ್ ಡಾ.ಮರೀಗೌಡ ಇತರರಿದ್ದರು.