ಬೀದಿಬದಿ ವ್ಯಾಪಾರಿಗಳಿಗೆ ಸಕಾಲಕ್ಕೆ ಸೌಲಭ್ಯ ಒದಗಿಸಿ

KannadaprabhaNewsNetwork |  
Published : Jul 23, 2024, 12:45 AM IST
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. | Kannada Prabha

ಸಾರಾಂಶ

ಬಡವರಿಗಾಗಿ ಜಾರಿಗೊಳಿಸಿರುವ ಪಿಎಂ ಸ್ವನಿಧಿ ಯೋಜನೆಗಳಡಿ ಬ್ಯಾಂಕುಗಳು ವಿಳಂಬ ಧೋರಣೆ ಅನುಸರಿಸದೇ ತ್ವರಿತವಾಗಿ ಸಕಾಲಕ್ಕೆ ಸಾಲ ವಿತರಣೆ ಮಾಡಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ಬಡವರಿಗಾಗಿ ಜಾರಿಗೊಳಿಸಿರುವ ಪಿಎಂ ಸ್ವನಿಧಿ ಯೋಜನೆಗಳಡಿ ಬ್ಯಾಂಕುಗಳು ವಿಳಂಬ ಧೋರಣೆ ಅನುಸರಿಸದೇ ತ್ವರಿತವಾಗಿ ಸಕಾಲಕ್ಕೆ ಸಾಲ ವಿತರಣೆ ಮಾಡಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಹಂತ ಹಂತವಾಗಿ ನೀಡುವ ಸಾಲ ಎರಡನೇ ಹಂತದ ಯೋಜನೆಯಲ್ಲಿ ಯಾದಗಿರಿ ಜಿಲ್ಲೆಯು ರಾಜ್ಯಕ್ಕೆ ಮೊದಲನೇ ಸ್ಥಾನ ಪಡೆದಿದ್ದು, ಈ ಯೋಜನೆಗೆ ಬೀದಿ ಬದಿ ವ್ಯಾಪಾರಿಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಬ್ಯಾಂಕ್‌ಗಳು ಹೆಚ್ಚಿನ ಆಸಕ್ತಿ ವಹಿಸಿ ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯ ಒದಗಿಸಿ ನಿಗದಿತ ಗುರಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯ ವಿವಿಧ ನಗರಗಳಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಮಂಜೂರಾದರೂ ವಿತರಣೆ ಮಾಡದೇ ಇರುವುದಕ್ಕೆ ಟೀಕೆಗಳು ಕೇಳಿ ಬರುತ್ತಿವೆ. ಸದರಿ ಅರ್ಜಿಗಳನ್ನು ವಿಲೇವಾರಿ ಮಾಡಿ ಸಾಲ ಸೌಲಭ್ಯ ಒದಗಿಸಿಬೇಕು. ನಿರ್ಲಕ್ಷ್ಯ ತೋರಿದರೆ ಸಂಬಂಧಿಸಿದ ಬ್ಯಾಂಕ್‌ ವ್ಯವಸ್ಥಾಪಕರೇ ನೇರ ಹೊಣೆ ಎಂದು ಎಚ್ಚರಿಕೆ ನೀಡಿದರು.

ಕಕ್ಕೇರಾ, ಕೆಂಭಾವಿ, ಗುರುಮಠಕಲ್ ನಗರದ ಎಸ್‌ಬಿಐ ಬ್ಯಾಂಕ್‌ಗಳು ಹಾಗೂ ಸುರಪುರ ನಗರದ ಕರ್ನಾಟಕ ಬ್ಯಾಂಕ್‌ಗಳಲ್ಲಿ ಹೆಚ್ಚಿನ ಅರ್ಜಿಗಳು ಬಾಕಿ ಇರುವುದು ಕಂಡು ಬಂದಿದ್ದು, ಅರ್ಜಿ ವಿಲೇವಾರಿಗೆ ಕ್ರಮ ವಹಿಸಬೇಕು ಎಂದರು. 2024-25ನೇ ಸಾಲಿನ ಡೇ-ನಲ್ಮ ಯೋಜನೆಯಡಿ ಎಲ್ಲಾ ಉಪಘಟಕಗಳಲ್ಲಿ ನಿಗದಿತ ಅವಧಿ ಒಳಗಾಗಿ ಪ್ರಗತಿ ಸಾಧಿಸಲು ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತ, ಮುಖ್ಯಾಧಿಕಾರಿಗಳು ಹಾಗೂ ಯೋಜನೆಗೆ ಸಂಬಂಧಿಸಿದ ಸಿಬ್ಬಂದಿ ವರ್ಗದವರಿಗೆ ನಿರ್ದೇಶನ ನೀಡಿದರು.ಸಾರ್ವತ್ರಿಕ ರಜೆ ದಿನಗಳಲ್ಲಿ ಜಿಲ್ಲೆಯ ಬಹುತೇಕ ಕಡೆ ಬ್ಯಾಂಕ್‌ನ ಎಟಿಎಂಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದು ಕಂಡು ಬಂದಿದೆ. ಆದ್ದರಿಂದ ಸಾರ್ವತ್ರಿಕ ರಜೆ ದಿನಗಳಲ್ಲಿಯೂ ಸಹ ಎಲ್ಲಾ ಬ್ಯಾಂಕಿನ ಎಟಿಎಂಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಿದರು.

ಸಭೆಯಲ್ಲಿ ಕೌಶಲ್ಯಾಭಿವೃದ್ದಿ ಇಲಾಖೆಯ ಸಹಾಯಕ ನಿರ್ದೇಶಕ ಬಸಪ್ಪ ಎಸ್ ತಳವಾಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಹಾಗೂ ಪೌರಾಯುಕ್ತ ಲಕ್ಷ್ಮಿಕಾಂತ, ಜಿಲ್ಲಾ ಲೀಡ್ ವ್ಯವಸ್ಥಾಪಕ ಭೀಮರಾವ್ ಪಂಚಾಳ, ಕೌಶಲ್ಯಾಭಿವೃದ್ದಿ ಇಲಾಖೆ ಅಭಿಯಾನ ವ್ಯವಸ್ಥಾಪಕ ವಿಜಯಕುಮಾರ ಪಾಟೀಲ್, ನಗರಸಭೆ ಸಮುದಾಯ ಸಂಘಟನಾಧಿಕಾರಿ ಭೀಮಣ್ಣ ವೈದ್ಯ ಸೇರಿದಂತೆ ಇತರರಿದ್ದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಕಡಿಮೆ ಗುಣದ ಔಷಧಿ ಎರಡೇ ದಿನಕ್ಕೇ ಮಾರುಕಟ್ಟೆಯಿಂದ ವಾಪಸ್‌: ಸಚಿವ