ಎಲ್ಲಾ ಸರ್ಕಾರಿ ಶಾಲೆಗಳಿಗೆ ಶೌಚಾಲಯ ವ್ಯವಸ್ಥೆ ಕಲ್ಪಿಸಿ

KannadaprabhaNewsNetwork |  
Published : Jun 17, 2025, 01:59 AM ISTUpdated : Jun 17, 2025, 02:00 AM IST
ಆಸ್ಪತ್ರೆಯ ಸುಚಿತ್ವವನ್ನು ಕಾಪಾಡಿ ರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಹಿರಿಯ ನಾಗರಿಕ ವೇದಿಕೆ ವತಿಯಿಂದ ಮನವಿ | Kannada Prabha

ಸಾರಾಂಶ

ಬಾಣಾವರದ ಹಿರಿಯ ನಾಗರಿಕ ವೇದಿಕೆ ವತಿಯಿಂದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಭೇಟಿ ಮಾಡಿ ಬಾಣಾವರ ಸರ್ಕಾರಿ ಆಸ್ಪತ್ರೆ ಆವರಣವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಆಸ್ಪತ್ರೆ ಆಸ್ಪತ್ರೆ ಕಟ್ಟಡ ಹಾಗೂ ನಿವೇಶನಕ್ಕೆ ಈ ಸ್ವತ್ತು ವಿತರಿಸುವಂತೆ ಹಾಗೂ ಎಲ್ಲಾ ಸರ್ಕಾರಿ ಶಾಲೆಗಳಿಗೆ ಶೌಚಾಲಯ ವ್ಯವಸ್ಥೆ ಕಲ್ಪಿಸುವಂತೆ ಮನವಿ ಸಲ್ಲಿಸಲಾಯಿತು. ಸರ್ಕಾರಿ ಆಸ್ಪತ್ರೆ ಆವರಣವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಆಸ್ಪತ್ರೆಯ ಸುಚಿತ್ವವನ್ನು ಕಾಪಾಡಿ ರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಹಾಗೂ ಬಾಣಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಂತಹ ನಿವೇಶನದಲ್ಲಿ ಹಿರಿಯ ನಾಗರೀಕರ ವೇದಿಕೆಯ ಕಚೇರಿ ನಿರ್ಮಾಣ ಮಾಡಲು ನಿವೇಶನ ನೀಡುವಂತೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ತಾಲೂಕಿನ ಬಾಣಾವರದ ಹಿರಿಯ ನಾಗರಿಕ ವೇದಿಕೆ ವತಿಯಿಂದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಭೇಟಿ ಮಾಡಿ ಬಾಣಾವರ ಸರ್ಕಾರಿ ಆಸ್ಪತ್ರೆ ಆವರಣವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಆಸ್ಪತ್ರೆ ಆಸ್ಪತ್ರೆ ಕಟ್ಟಡ ಹಾಗೂ ನಿವೇಶನಕ್ಕೆ ಈ ಸ್ವತ್ತು ವಿತರಿಸುವಂತೆ ಹಾಗೂ ಎಲ್ಲಾ ಸರ್ಕಾರಿ ಶಾಲೆಗಳಿಗೆ ಶೌಚಾಲಯ ವ್ಯವಸ್ಥೆ ಕಲ್ಪಿಸುವಂತೆ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ನಾಗರಿಕ ವೇದಿಕೆ ಅಧ್ಯಕ್ಷ ಪರಮೇಶ್ವರ, ಬಾಣಾವರ ನಗರವು ದಿನೇ ದಿನೇ ವೇಗವಾಗಿ ಬೆಳೆಯುತ್ತಿದ್ದು, ಗ್ರಾಮಕ್ಕೆ ಅಕ್ಕಪಕ್ಕದ ಗ್ರಾಮದ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪಡೆಯುತ್ತಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಶೌಚಾಲಯದ ವ್ಯವಸ್ಥೆ ಸಮರ್ಪಕವಾಗಿ ಇಲ್ಲದೆ ಇರುವುದರಿಂದ ಸಮರ್ಪಕವಾದ ಶೌಚಾಲಯ ವ್ಯವಸ್ಥೆ ಮತ್ತು ಶಾಲಾ ಆವರಣ ಸ್ವಚ್ಛಗೊಳಿಸಿ ಸಾಂಕ್ರಾಮಿಕ ರೋಗಗಳು ಹರಡದಂತೆ ರಕ್ಷಿಸುವಂತೆ ಹಾಗೂ ಬಾಣಾವರ ಸರ್ಕಾರಿ ಆಸ್ಪತ್ರೆಯು ಸುಮಾರು 40ರಿಂದ 50 ಗ್ರಾಮಗಳಿಗೆ ಹೆಚ್ಚಿನ ಜನ ಈ ಆಸ್ಪತ್ರೆಯನ್ನು ಅವಲಂಬಿಸಿದ್ದು, ಬಾಣಾವರ ನಗರದ ಒಳಭಾಗದಲ್ಲಿ ಎರಡು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಿರುವುದರಿಂದ ಇಲ್ಲಿ ಅಪಘಾತಗಳು ಸರ್ವೇಸಾಮಾನ್ಯವಾಗಿದ್ದು, ಈ ಸರ್ಕಾರಿ ಆಸ್ಪತ್ರೆಯನ್ನೇ ಸಾರ್ವಜನಿಕರು ಅವಲಂಬಿಸಿರುವುದರಿಂದ ಸರ್ಕಾರಿ ಆಸ್ಪತ್ರೆ ಆವರಣವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಆಸ್ಪತ್ರೆಯ ಸುಚಿತ್ವವನ್ನು ಕಾಪಾಡಿ ರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಹಾಗೂ ಬಾಣಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಂತಹ ನಿವೇಶನದಲ್ಲಿ ಹಿರಿಯ ನಾಗರೀಕರ ವೇದಿಕೆಯ ಕಚೇರಿ ನಿರ್ಮಾಣ ಮಾಡಲು ನಿವೇಶನ ನೀಡುವಂತೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿಗಳಾದ ಪಶುಪತಿ ರಾವ್ ಹಾಗೂ ನಿರ್ದೇಶಕರುಗಳಾದ ಪ್ಯಾರೂ ಸಾಹೇಬ್, ರುದ್ರಸ್ವಾಮಿ ಬಿ ಆರ್‌ ಲಕ್ಷ್ಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ