ಮೂಲಸೌಕರ್ಯ ಒದಗಿಸುವುದು ಮೊದಲ ಆದ್ಯತೆ: ಶಾಸಕ ಭೀಮಣ್ಣ ನಾಯ್ಕ

KannadaprabhaNewsNetwork |  
Published : Feb 06, 2026, 02:45 AM IST
ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಅಂದಾಜು 3 ಕೋಟಿ ರೂ.ಗೂ ಅಧಿಕ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಭೀಮಣ್ಣ ನಾಯ್ಕ ಚಾಲನೆ ನೀಡಿದರು. | Kannada Prabha

ಸಾರಾಂಶ

ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಅಂದಾಜು 3 ಕೋಟಿಗೂ ಅಧಿಕ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಶಾಸಕ ಭೀಮಣ್ಣ ನಾಯ್ಕ ಭೂಮಿಪೂಜೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಶಿರಸಿ

ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಅಂದಾಜು ₹3 ಕೋಟಿಗೂ ಅಧಿಕ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಶಾಸಕ ಭೀಮಣ್ಣ ನಾಯ್ಕ ಭೂಮಿಪೂಜೆ ನೆರವೇರಿಸಿದರು.

₹50 ಲಕ್ಷ ವೆಚ್ಚದಲ್ಲಿ ⁠ವಿದ್ಯಾನಗರ ಮತ್ತು ಸಹ್ಯಾದ್ರಿ ಕಾಲನಿ ರಸ್ತೆ ಅಭಿವೃದ್ಧಿ ಕಾಮಗಾರಿ, ₹30 ಲಕ್ಷ ವೆಚ್ಚದಲ್ಲಿ ⁠ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದ ಎದುರಿನ ರಸ್ತೆ ಅಭಿವೃದ್ಧಿ ಕಾಮಗಾರಿ, ₹20 ಲಕ್ಷ ವೆಚ್ಚದಲ್ಲಿ ಮರಾರಿಕೊಪ್ಪದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, ₹65 ಲಕ್ಷ ವೆಚ್ಚದಲ್ಲಿ ಬಿಡ್ಕಿಬೈಲ್‌ನ ⁠ಮಾರಿಕಾಂಬಾ ಜಾತ್ರಾ ಗದ್ದುಗೆ ಸುತ್ತಲಿನ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಹಾಗೂ ಗ್ರಾಮೀಣ ಭಾಗದ ದೊಡ್ಡಳ್ಳಿ ಗ್ರಾಪಂ ವ್ಯಾಪ್ತಿಯ ನರೇಬೈಲ್ ಊರಿನ ಒಳಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಕ್ಷೇತ್ರದಲ್ಲಿ ಮೂಲಸೌಕರ್ಯ ಒದಗಿಸುವುದು ಮೊದಲ ಆದ್ಯತೆಯಾಗಿದ್ದು, ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್‌ ನೀಡಿದ ಐದು ಗ್ಯಾರಂಟಿ ಯೋಜನೆಗಳನ್ನು ನಮ್ಮ ಸರ್ಕಾರ ಈಡೇರಿಸುವ ಜತೆ ಅಭಿವೃದ್ಧಿಗೂ ಅನುದಾನ ಬಿಡುಗಡೆಗೊಳಿಸುತ್ತಿದೆ. ರಾಜ್ಯ ಪ್ರಸಿದ್ಧ ಮಾರಿಕಾಂಬಾ ದೇವಿ ಜಾತ್ರೆ ಹಿನ್ನೆಲೆ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಆಗಮಿಸುವ ಭಕ್ತರಿಗೆ ತೊಂದರೆಯಾಗದಂತೆ ಮೂಲಸೌಕರ್ಯ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ, ಉಪಾಧ್ಯಕ್ಷ ನಾಗರಾಜ ಮುರ್ಡೇಶ್ವರ, ತಾಲೂಕಾ ಅಧ್ಯಕ್ಷೆ ಸುಮಾ ಉಗ್ರಾಣಕರ, ನಗರಸಭೆ ಮಾಜಿ ಅಧ್ಯಕ್ಷ ಪ್ರದೀಪ ಶೆಟ್ಟಿ, ಪ್ರಮುಖರಾದ ಶ್ರೀನಿವಾಸ ನಾಯ್ಕ, ರಾಜು ಉಗ್ರಾಣಕರ, ಅಬ್ಬಾಸ ತೋನ್ಸೆ, ನಗರಸಭೆ ಪೌರಾಯುಕ್ತ ಪ್ರಕಾಶ ಚನ್ನಪ್ಪನವರ, ಗುತ್ತಿಗೆದಾರ ಪ್ರವೀಣ ಶೇಟ್‌ ಮತ್ತಿತರರಿದ್ದರು.ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ:ಅಭಿವೃದ್ಧಿ ಎನ್ನುವುದು ನಿಂತ ನೀರಲ್ಲ. ಕ್ಷೇತ್ರದ ಜನತೆ ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿರುವುದಕ್ಕೆ ಅವರ ಋಣ ತೀರಿಸಲು ಶ್ರಮಿಸುತ್ತೇನೆ. ಸರ್ಕಾರದ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಅನುದಾನ ಬಿಡುಗಡೆಗೊಳಿಸಿ, ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌
ಬ್ಯಾಲೆಟ್‌ ಪೇಪರಲ್ಲೇ ಪಂಚಾಯ್ತಿ ಚುನಾವಣೆಗೆ ಸರ್ಕಾರ ಮಸೂದೆ