ಮೂಲಸೌಕರ್ಯ ಕಲ್ಪಿಸುವುದು ಕೆಎಚ್‌ಬಿಯ ಜವಾಬ್ದಾರಿ

KannadaprabhaNewsNetwork |  
Published : Nov 05, 2026, 02:00 AM IST
ಹುಬ್ಬಳ್ಳಿ ಗಾಮನಗಟ್ಟಿ ಹೊರವಲಯದಲ್ಲಿರುವ ಅಭಿನಂದನ್ ಕಾಲೋನಿಗೆ ವಿಪ ಸದಸ್ಯ ಲಿಂಗರಾಜ ಪಾಟೀಲ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದರು. | Kannada Prabha

ಸಾರಾಂಶ

ಮನೆ ನಿರ್ಮಿಸಿ ಜನರಿಗೆ ಹಸ್ತಾಂತರಿಸುವುದಷ್ಟೇ ಜವಾಬ್ದಾರಿಯಲ್ಲ. ಅಲ್ಲಿನ ನಿವಾಸಿಗಳಿಗೆ ಅಗತ್ಯವಾದ ರಸ್ತೆ, ಚರಂಡಿ, ಕುಡಿಯುವ ನೀರು, ಬೀದಿದೀಪ, ಸ್ವಚ್ಛತೆ ಸೇರಿದಂತೆ ಮೂಲಭೂತ ನಾಗರಿಕ ಸೌಲಭ್ಯ ಒದಗಿಸುವುದು ಕೂಡ ಅದರ ಪ್ರಮುಖ ಜವಾಬ್ದಾರಿಯಾಗಿದೆ.

ಹುಬ್ಬಳ್ಳಿ:

ಮನೆ ನಿರ್ಮಿಸಿ ಜನರಿಗೆ ಹಸ್ತಾಂತರಿಸುವುದಷ್ಟೇ ಜವಾಬ್ದಾರಿಯಲ್ಲ. ಅಲ್ಲಿನ ನಿವಾಸಿಗಳಿಗೆ ಅಗತ್ಯವಾದ ರಸ್ತೆ, ಚರಂಡಿ, ಕುಡಿಯುವ ನೀರು, ಬೀದಿದೀಪ, ಸ್ವಚ್ಛತೆ ಸೇರಿದಂತೆ ಮೂಲಭೂತ ನಾಗರಿಕ ಸೌಲಭ್ಯ ಒದಗಿಸುವುದು ಕೂಡ ಅದರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ವಿಪ ಸದಸ್ಯ ಲಿಂಗರಾಜ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಗಾಮನಗಟ್ಟಿ ಹೊರವಲಯದಲ್ಲಿರುವ ಕರ್ನಾಟಕ ಹೌಸಿಂಗ್ ಬೋರ್ಡ್ ಅಭಿವೃದ್ಧಿಪಡಿಸಿರುವ ಕೆಎಚ್‌ಬಿ 2ನೇ ಹಂತದ ಅಭಿನಂದನ್ ಕಾಲನಿ ಮೂಲಸೌಕರ್ಯಗಳ ಕೊರತೆ ಹಾಗೂ ವಿವಿಧ ಅವ್ಯವಸ್ಥೆಗಳ ಕುರಿತು ನಿವಾಸಿಗಳಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಈಚೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು ಆಲಿಸಿದ ಅವರು, ಅಲ್ಲಿನ ಅವ್ಯವಸ್ಥೆ ಕಂಡು ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕೆಎಚ್‌ಬಿ ನಗರದಲ್ಲಿ ವಾಸಿಸುವ ಜನರು ತಮ್ಮ ಜೀವನಪರ್ಯಂತದ ಉಳಿತಾಯವನ್ನು ವಿನಿಯೋಗಿಸಿ ಮನೆ ಖರೀದಿಸಿದ್ದಾರೆ. ಬಳಿಕ ಅವರು ಮೂಲಸೌಕರ್ಯಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿರುವುದು ಖಂಡನೀಯ. ಸಾರ್ವಜನಿಕರಿಂದ ತೆರಿಗೆ ಹಾಗೂ ವಿವಿಧ ಶುಲ್ಕ ಪಡೆಯುವ ಆಡಳಿತ ವ್ಯವಸ್ಥೆ ಜನರಿಗೆ ಅಗತ್ಯ ಸೌಲಭ್ಯ ಒದಗಿಸುವಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ಹೇಳಿದರು.

ಕೆಎಚ್‌ಬಿ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ಪರಸ್ಪರ ಜವಾಬ್ದಾರಿಯನ್ನು ಒಬ್ಬರ ಮೇಲೊಬ್ಬರು ವರ್ಗಾಯಿಸದೆ, ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು. ಅಧಿಕಾರಿಗಳು ಸ್ಥಳದಲ್ಲಿನ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ, ಕಾಮಗಾರಿಗಳ ಅಗತ್ಯತೆ ಗುರುತಿಸಿ, ವಿಳಂಬ ಮಾಡದೆ ಕ್ರಮಕೈಗೊಳ್ಳಬೇಕು. ಜನರು ಪ್ರತಿದಿನ ಎದುರಿಸುತ್ತಿರುವ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಸೂಚಿಸಿದರು.

ಈ ವೇಳೆ ಕೆಎಚ್‌ಬಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಮಣ್ಣ ನಂದಿ, ಅಭಿಯಂತರ ರಾಹುಲ್ ಬೆಳವಟಗಿ ಸೇರಿದಂತೆ ಸ್ಥಳೀಯ ನಿವಾಸಿಗಳಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಗಳನ್ನು ಲವ್‌ ಮಾಡಿದ್ದಕ್ಕೆ ಕೆಲಸಗಾರನ ಹತ್ಯೆ
ಡೇಟಿಂಗ್‌ ಆ್ಯಪಲ್ಲಿ ಪರಿಚಯವಾದಯುವಕನ ದರೋಡೆ: ನಾಲ್ವರ ಸೆರೆ