ಹಿರಿಯ ನಾಗರಿಕರಿಗೆ ಕಾನೂನು ಬದ್ಧ ರಕ್ಷಣೆ, ಆರ್ಥಿಕ ಭದ್ರತೆ ಪ್ರತಿಯೊಬ್ಬರ ಕರ್ತವ್ಯ: ಸುರೇಶ್

KannadaprabhaNewsNetwork |  
Published : Oct 19, 2026, 01:45 AM IST
18ಕೆಎಂಎನ್ ಡಿ12 | Kannada Prabha

ಸಾರಾಂಶ

ಪ್ರಸ್ತುತ ದಿನಗಳಲ್ಲಿ ಹಿರಿಯ ನಾಗರಿಕರನ್ನು ಕಡೆಗಣಿಸುತ್ತಿರುವುದು ಮತ್ತು ಹಲವು ಸೌಲಭ್ಯ ನೀಡದೆ ವಂಚಿಸುತ್ತಿರುವ ಪ್ರಕರಣಗಳು ಕಂಡು ಬರುತ್ತಿರುವ‌ ಹಿನ್ನೆಲೆಯಲ್ಲಿ ಈ ಸಂಬಂಧ ಸಾರ್ವಜನಿಕರಿಗೆ ಅರಿವು ಮೂಡಿಸುವ ಜೊತೆಗೆ ಕಾನೂನಿನಲ್ಲಿ ರಕ್ಷಣೆ ಪಡೆಯಬಹುದು.

ಕನ್ನಡಪ್ರಭ ವಾರ್ತೆ ಮದ್ದೂರು

ಹಿರಿಯ ನಾಗರಿಕರಿಗೆ ಕಾನೂನು ಬದ್ಧ ರಕ್ಷಣೆ ಮತ್ತು ಆರ್ಥಿಕ ಭದ್ರತೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು‌ ತಾಲೂಕು ಪಂಚಾಯ್ತಿ ಯೋಜನಾಧಿಕಾರಿ ಸುರೇಶ್ ತಿಳಿಸಿದರು

ನಗರದ ತಾಪಂ ಸಭಾಂಗಣದಲ್ಲಿ ಜಿಲ್ಲಾ‌ ಹಾಗೂ ತಾಲೂಕು ಆಡಳಿತ ತಾಲೂಕು ಕಾನೂನು ಸೇವೆಗಳ ಸಮಿತಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ತಾಲೂಕು ಸಂಯೋಜಕರು ಗ್ರಾಮೀಣ ಮತ್ತು ನಗರ ಪುನರ್ವಸತಿ ಯೋಜನೆಯಿಂದ ಆಯೋಜಿಸಿದ್ದ ಹಿರಿಯ ನಾಗರಿಕರ ಪಾಲನೆ ಪೋಷಣೆ ಮತ್ತು ಸಂರಕ್ಷಣಾ ಕಾಯ್ದೆ 2007ರ ಕುರಿತು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಹಿರಿಯ ನಾಗರಿಕರನ್ನು ಕಡೆಗಣಿಸುತ್ತಿರುವುದು ಮತ್ತು ಹಲವು ಸೌಲಭ್ಯ ನೀಡದೆ ವಂಚಿಸುತ್ತಿರುವ ಪ್ರಕರಣಗಳು ಕಂಡು ಬರುತ್ತಿರುವ‌ ಹಿನ್ನೆಲೆಯಲ್ಲಿ ಈ ಸಂಬಂಧ ಸಾರ್ವಜನಿಕರಿಗೆ ಅರಿವು ಮೂಡಿಸುವ ಜೊತೆಗೆ ಕಾನೂನಿನಲ್ಲಿ ರಕ್ಷಣೆ ಪಡೆಯಬಹುದು ಎಂದರು.

ಹಿರಿಯ ನಾಗರಿಕರನ್ನು ಪಾಲನೆ ಪೋಷಣೆ ಮತ್ತು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ನಿರ್ಲಕ್ಷ್ಯ ಮಾಡುವ ವ್ಯಕ್ತಿಗಳ ವಿರುದ್ಧ ಕಾನೂನಿನ ಅಡಿ ಕ್ರಮ ಕೈಗೊಳ್ಳಬಹುದಾಗಿದೆ. ಸರ್ಕಾರ ಹಿರಿಯ ನಾಗರಿಕರಿಗೆ ಹಲವು ಸೌಲಭ್ಯ ಒದಗಿಸಿದೆ. ಇದರ ಸದುಪಯೋಗಕ್ಕೆ ಪ್ರತಿಯೊಬ್ಬರು ಮುಂದಾಗಬೇಕು ಎಂದರು.

ತಾಲೂಕು ಆರೋಗ್ಯಧಿಕಾರಿ ಡಾ.ರವಿಶಂಕರ್ ಮಾತನಾಡಿ, ಹಿರಿಯ ನಾಗರಿಕರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲು‌ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಲವಾರು ಯೋಜನೆ, ಸೌಲಭ್ಯಗಳನ್ನು ಒದಗಿಸಿದೆ. ಈ ಸೌಲಭ್ಯಗಳನ್ನು ಮನೆ ಬಾಗಿಲಿಗೆ ಸರ್ಕಾರ ಒದಗಿಸಿರುವುದಾಗಿ ಹೇಳಿದರು.

ಈ ವೇಳೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಎಸ್.ಎಸ್.ಕೋಮಲ್ ಕುಮಾರ್, ಸಿಡಿಪಿಒ ಅರುಣ್ ಕುಮಾರ್, ಜಿಲ್ಲಾ ಸಂಯೋಜಕಿ ಚೈತ್ರ, ತಾಲೂಕು ಸಂಯೋಜಕ ಪುಟ್ಟಸ್ವಾಮಿ, ಎಸ್.ಎಂ.ಬಸವರಾಜು, ಕಾನೂನು ಸಲಹೆಗಾರರು ಕೆ.ಜೆ.ತ್ರಿವೇಣಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಾರಂಪರಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆತೆರೆ
ಮಹಿಳಾ ದಸರಾ: ರಂಗು ರಂಗಿನ ಬಣ್ಣಗಳಿಂದ ರಂಗವಲ್ಲಿ ಚಿತ್ತಾರ ಬಿಡಿಸಿದ ಮಹಿಳೆಯರು