ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಆಳ್ವಾಸ್ ಕಾಲೇಜ್ ಆಫ್ ನರ್ಸಿಂಗ್‌ನ ಸಮುದಾಯ ಆರೋಗ್ಯ ನರ್ಸಿಂಗ್ ವಿಭಾಗದ ವತಿಯಿಂದ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾದ ‘ಎನ್‌ಕ್ಯೂಎಎಸ್ ಎಕ್ಸ್ಪ್ಲೋರೇಷನ್–2026’ ಪ್ರಾದೇಶಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
ಆಳ್ವಾಸ್ ವೈದ್ಯಕೀಯ ಮತ್ತು ಸಂಶೋಧನಾ ಕೇಂದ್ರದ ಡೀನ್ ಡಾ. ಮಹಾಬಲೇಶ್ ಶೆಟ್ಟಿ ಮಾತನಾಡಿ, ಆರೋಗ್ಯ ಸೇವೆಯಲ್ಲಿ ಗುಣಮಟ್ಟವೇ ಮೂಲಾಧಾರವಾಗಿದೆ. ರೋಗನಿರ್ಣಯ ಮಾಡುವುದು, ಚಿಕಿತ್ಸೆ ನೀಡುವುದು ಅಥವಾ ಔಷಧಿಗಳನ್ನು ಸೂಚಿಸುವುದಕ್ಕೆ ಮಾತ್ರ ಆರೋಗ್ಯ ಸೇವೆ ಸೀಮಿತವಾಗಬಾರದು. ಪ್ರತಿಯೊಬ್ಬ ರೋಗಿಗೂ ಸುರಕ್ಷಿತ, ಪರಿಣಾಮಕಾರಿ, ಸಮಯೋಚಿತ ಮತ್ತು ಸಹಾನುಭೂತಿಯಿಂದ ಕೂಡಿದ ಆರೈಕೆಯನ್ನು ಒದಗಿಸುವುದು ಆರೋಗ್ಯ ವ್ಯವಸ್ಥೆಯ ಪ್ರಮುಖ ಉದ್ದೇಶವಾಗಬೇಕು ಎಂದರು.ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಕಾಲೇಜ್ ಆಫ್ ನರ್ಸಿಂಗ್‌ನ ಪ್ರಾಂಶುಪಾಲ ಡಾ. ಬಿ.ಎ. ಯತಿಕುಮಾರ ಸ್ವಾಮಿ ಗೌಡ ಮಾತನಾಡಿದರು.
ಸಮ್ಮೇಳನದ ಅಂಗವಾಗಿ ರಾಷ್ಟ್ರೀಯ ಗುಣಮಟ್ಟದ ಭರವಸೆ ಮಾನದಂಡಗಳ ವಿವಿಧ ಆಯಾಮಗಳ ಕುರಿತು ತಜ್ಞರಿಂದ ಉಪನ್ಯಾಸಗಳು ಮತ್ತು ಸಂವಾದ ಕಾರ್ಯಕ್ರಮ ನಡೆಯಿತು. ಮಂಗಳೂರಿನ ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್‌ನ ಸಮುದಾಯ ಆರೋಗ್ಯ ನರ್ಸಿಂಗ್ ವಿಭಾಗದ ಪ್ರಾಧ್ಯಾಪಕಿ ಡಾ. ಶಿಜಿ ಪಿ.ಜೆ. ಯವರು ‘ಎನ್‌ಕ್ಯೂಎಎಸ್:ಗುಣಮಟ್ಟದ ಚೌಕಟ್ಟಿನ ಅರಿವು’ ವಿಷಯದ ಕುರಿತು ಮಾತನಾಡಿದರು.
ಗೋಷ್ಠಿಯಲ್ಲಿ ಕಾಟಿಪಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಯಶಸ್ವಿನಿ ಕೆ.ಎಸ್., ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಲೆನಿಟಾ ಡಿಸೋಜಾ ಹಾಗೂ ಆಳ್ವಾಸ್ ಕಾಲೇಜ್ ಆಫ್ ನರ್ಸಿಂಗ್‌ನ ಸಮುದಾಯ ಆರೋಗ್ಯ ನರ್ಸಿಂಗ್ ವಿಭಾಗದ ಮುಖ್ಯಸ್ಥೆ ಪ್ರೊ. ನಿಕ್ಸಿ ಎನ್.ಎಂ. ಭಾಗವಹಿಸಿದರು.
ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ವೀಕ್ಷಕ ಕೆ. ಅನಿಲ್ ಕುಮಾರ್, ಕಾಲೇಜಿನ ಪ್ರಾಚರ‍್ಯ ಡಾ. ಬಿ.ಎ. ಯತಿಕುಮಾರ ಸ್ವಾಮಿ ಗೌಡ ಹಾಗೂ ಉಪಪ್ರಾಂಶುಪಾಲೆ ಪ್ರೊ. ರೇಣುಕಾ, ಕಾರ‍್ಯಕ್ರಮದ ಸಂಯೋಜಕಿ ಪ್ರೊ. ನಿಕ್ಸಿ ಎನ್. ಇದ್ದರು.