ಯಾದಗಿರಿ ನಗರದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರಶುರಾಮ್ ಸಾವು ಪ್ರಕರಣ: ಶಾಸಕ, ಪುತ್ರನ ಬಂಧನಕ್ಕೆ ಆಗ್ರಹ

KannadaprabhaNewsNetwork |  
Published : Aug 05, 2024, 12:38 AM ISTUpdated : Aug 05, 2024, 12:44 PM IST
ಗುರುಮಠಕಲ್ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿ.ಎಸ್.ಪಿ ಪಕ್ಷ ರಾಜ್ಯ ಕಾರ್ಯದರ್ಶಿ ಕೆ.ಬಿ. ವಾಸು ಸುದ್ದಿಗೋಷ್ಠಿ ನಡೆಸಿದರು. | Kannada Prabha

ಸಾರಾಂಶ

ಯಾದಗಿರಿ ನಗರದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರಶುರಾಮ್ ಅವರ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಕೂಡಲೇ ಅವರ ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ಬಿಎಸ್‌ಪಿ ಆಗ್ರಹಿಸಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಕೆ.ಬಿ. ವಾಸು ಒತ್ತಾಯಿಸಿದ್ದಾರೆ.

 ಗುರುಮಠಕಲ್ :  ಯಾದಗಿರಿ ನಗರದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರಶುರಾಮ್ ಅವರ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಕೂಡಲೇ ಅವರ ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ಬಿಎಸ್‌ಪಿ ಆಗ್ರಹಿಸಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಕೆ.ಬಿ. ವಾಸು ಒತ್ತಾಯಿಸಿದ್ದಾರೆ.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ಪಿಎಸ್ಐ ಪರಶುರಾಮ್‌ ಸಾವಿಗೆ ಸ್ಥಳೀಯ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ಮತ್ತು ಪುತ್ರ ಸನ್ನಿಗೌಡ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಪೋಸ್ಟಿಂಗ್‌ಗಾಗಿ ₹30 ಲಕ್ಷ ಹಣಕ್ಕೆ ಯಾದಗಿರಿ ಕಾಂಗ್ರೆಸ್‌ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ಬೇಡಿಕೆ ಇಟ್ಟಿದ್ದರು. ಅವರ ಸಾವಿಗೆ ನ್ಯಾಯ ದೊರಕಲು ಶಾಸಕರನ್ನು ಮತ್ತು ಅವರ ಮಗನನ್ನು ಬಂಧಿಸಿ ವಿಚಾರಿಸಬೇಕಾಗಿದೆ ಎಂದರು.

ಯಾದಗಿರಿ ಶಾಸಕರಿಗೆ ಹಣದ ಆಸೆ ಬಹಳಷ್ಟಿದೆ. ಪರಶುರಾಮ್‌ ಅವರ ಜಾಗಕ್ಕೆ ಬೇರೊಬ್ಬರು ಬಂದರೂ ವರ್ಗಾವಣೆ ಪಟ್ಟಿಯಲ್ಲಿ ಪರಶುರಾಮ್‌ ಹೆಸರೇ ಇರಲಿಲ್ಲ. ಈಗ ಹೊಸದಾಗಿ ಬಂದವರು ಹಣ ನೀಡಿಯೇ ಬಂದಿದ್ದಾರೆ ಎಂದು ಮಾವ ವೆಂಕಟಸ್ವಾಮಿ ಮತ್ತು ಪತ್ನಿ ಶ್ವೇತಾ ಗಂಭೀರ ಆರೋಪ ಮಾಡಿದ್ದಾರೆ ಎಂದು ಅವರು ವಿವರಿಸಿದರು.

ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ಅವರ ವಿಧಾನಸಭೆಯಲ್ಲಿ ಗುರುಮಠಕಲ್ ಪಿ.ಐ. ಸಂಜೀವ್ ಕುಮಾರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಪ್ರಾಮಾಣಿಕವಾಗಿರುವ ಪಿ.ಐ. ಸಂಜೀವ್ ಕುಮಾರ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸಬೇಕು ಎಂದರು.

ಈ ವೇಳೆ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಮೌರ್ಯ, ಭೀಮು ಗಿರಿ, ಅಸೆಂಬ್ಲಿ ಉಸ್ತುವಾರಿ ಅಶೋಕ್ ನಜರಾಪುರ್, ಮಹಾದೇವಪ್ಪ ಚಪೆಟ್ಲಾ, ಅಸೆಂಬ್ಲಿ ಅಧ್ಯಕ್ಷ ಜಾನ್ ಕಲಾಲ್, ಉಪಾಧ್ಯಕ್ಷ ಸುರೇಶ್ ಅಸೆಂಬ್ಲಿ, ನಗರ ಅಧ್ಯಕ್ಷ ಮಲ್ಲೇಶ್ ಸೇರಿದಂತೆ ಕಾರ್ಯಕರ್ತರಿದ್ದರು.

PREV

Recommended Stories

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ