ಕನ್ನಡಪ್ರಭ ವಾರ್ತೆ ಪುತ್ತೂರು
ಪುತ್ತೂರಿನ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸರಿತಾ ಡಿ. ಅವರ ನ್ಯಾಯಾಲಯದಲ್ಲಿ ೫೧ ಪ್ರಕರಣಗಳಲ್ಲಿ ೧೭ ಇತ್ಯರ್ಥಗೊಂಡಿದ್ದು ೫೪,೬೮,೭೭೦ ರು. ಪರಿಹಾರ ವಿತರಣೆಗೆ ಆದೇಶ ಆಗಿದೆ. ಪುತ್ತೂರು ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶ ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಪ್ರಿಯ ರವಿ ಜೋಗಲೇಕರ್ ಅವರ ನ್ಯಾಯಾಲಯದಲ್ಲಿ ೧೨೭ ಪ್ರಕರಣಗಳಲ್ಲಿ ೫೪ ಇತ್ಯರ್ಥಗೊಂಡಿದ್ದು ೩೬,೫೭,೦೦೦ ರು. ಪರಿಹಾರ ವಿತರಣೆಗೆ ಆದೇಶ ಆಗಿದೆ.
ಅಪರ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶೆ ಮತ್ತು ಜೆಎಮ್‌ಎಫ್‌ಸಿಯೂ ಆಗಿರುವ ಪ್ರಿಯಾ ಜೋವಲೆಕರ್ ಅವರ ನ್ಯಾಯಾಲಯದಲ್ಲಿ ೧೫೮ ಪ್ರಕರಣಗಳಲ್ಲಿ ೬೩ ಪ್ರಕರಣ ಇತ್ಯರ್ಥಗೊಂಡಿದ್ದು, ೭೨,೭೯,೮೦೦ ರು. ಪರಿಹಾರ ವಿತರಿಸಲು ಆದೇಶಿಸಿದರು.ಪ್ರಧಾನ ಸಿವಿಲ್ ನ್ಯಾಯಾಲಯ, ಜೆಎಂಎಫ್‌ಸಿ ನ್ಯಾಯಾಧೀಶೆ ಅರ್ಚನಾ ಕೆ. ಉನ್ನಿತಾನ್ ಅವರ ನ್ಯಾಯಾಲಯದಲ್ಲಿ ೩೦೦ ಪ್ರಕರಣಗಳಲ್ಲಿ ೩೮ ಪ್ರಕರಣಗಳು ಇತ್ಯರ್ಥಗೊಂಡಿದ್ದು ೫೨,೪೪,೯೩೪ ರು. ವಿತರಣೆಗೆ ಆದೇಶ ಆಗಿದೆ.
೨ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್‌ಸಿ ಯೋಗೇಂದ್ರ ಶೆಟ್ಟಿ ಅವರ ನ್ಯಾಯಾಲಯದಲ್ಲಿ ೨೩೧ ಪ್ರಕರಣಗಳಲ್ಲಿ ೧೮೦ ಪ್ರಕರಣ ಇತ್ಯರ್ಥಗೊಂಡಿದ್ದು, ೧೬, ೨೮,೪೨೮ ರು. ವಿತರಣೆಗೆ ಆದೇಶ ಆಗಿದೆ.
ಪ್ರಕರಣಗಳ ಇತ್ಯರ್ಥಕ್ಕೆ ಸಂಧಾನಕಾರರಾಗಿ ನ್ಯಾಯವಾದಿಗಳಾದ ಅಶ್ವಿನಿ ರೈ, ಚಂದ್ರಾವತಿ ಸಿ.ಟಿ., ಮಿಥುನ್ ರೈ, ಸುಶ್ಮಿತಾ, ರಾಜೇಶ್ವರಿ ಆಚಾರ್ಯ ಅವರು ಸಹಕರಿಸಿದರು.ಸದರಿ ವ್ಯಾಜ್ಯಗಳಲ್ಲಿ ಸಂಧಾನಕಾರ ವಕೀಲರನ್ನು ವಕೀಲರ ಸಂಘದ ಅಧ್ಯಕ್ಷ ಜಗನ್ನಾಥ ರೈ ಅವರು ನೇಮಕ ಮಾಡಿದ್ದರು.