ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪಿಯು ಕಾಲೇಜು ಪ್ರಾರಂಭ

KannadaprabhaNewsNetwork |  
Published : Jul 28, 2026, 01:30 AM IST
ಸೂಲಿಬೆಲೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉನ್ನತಕರಿಸಿದ ಪದವಿಪೂರ್ವ ಕಾಲೇಜಿನ ಪ್ರಾರಂಭೋತ್ಸವವನ್ನು ರಾಜ್ಯ ಒಕ್ಕಲಿಗ ಸಂಘದ ಮಾಜ ನಿರ್ದೇಶಕ ಬಿ.ಎನ್.ಗೋಪಾಲಗೌಡ ನೆರವೇರಿಸಿದರು. ಪ್ರಾಂಶುಪಾಲ ವೆಂಕಟೇಶ್, ಜೇನುಗೂಡು ಟ್ರಸ್ಟ್ ಉಪಾಧ್ಯಕ್ಷ ಚೌಡೇಗೌಡ ಇತರರು ಇದ್ದರು. | Kannada Prabha

ಸಾರಾಂಶ

ಸೂಲಿಬೆಲೆ: ರಾಜ್ಯ ಕಾಂಗ್ರೆಸ್ ಸರ್ಕಾರದ ಯುವ ನೇತಾರ ಶರತ್ ಬಚ್ಚೇಗೌಡರು ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ಬಿ.ಎನ್.ಗೋಪಾಲಗೌಡ ಹೇಳಿದರು

ಸೂಲಿಬೆಲೆ: ರಾಜ್ಯ ಕಾಂಗ್ರೆಸ್ ಸರ್ಕಾರದ ಯುವ ನೇತಾರ ಶರತ್ ಬಚ್ಚೇಗೌಡರು ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ಬಿ.ಎನ್.ಗೋಪಾಲಗೌಡ ಹೇಳಿದರು.

ಇಲ್ಲಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉನ್ನತೀಕರಿಸಿದ ಪದವಿ ಪೂರ್ವ ಕಾಲೇಜಿನ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಾಜಿ ಸಚಿವರಾದ ಬಿ.ಎನ್.ಬಚ್ಚೇಗೌಡರು ಸೂಲಿಬೆಲೆ ಗ್ರಾಮಕ್ಕೆ ಸುಮಾರು ೨೫ ವರ್ಷಗಳ ಹಿಂದೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಾಡಿಕೊಟ್ಟಿದ್ದರು. ಪ್ರಸ್ತುತ ಅವರ ಪುತ್ರ ಶರತ್ ಬಚ್ಚೇಗೌಡರು ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜು ಪ್ರಾರಂಭಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಇಬ್ಬರು ನಾಯಕರು ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಆದ್ಯತೆ ನೀಡುತ್ತಿದ್ದರು ಎಂದರು.

ಪ್ರಾಂಶುಪಾಲರಾದ ವೆಂಕಟೇಶ್ ಮಾತನಾಡಿ, ಸರ್ಕಾರದ ಆದೇಶದಂತೆ ರಾಜ್ಯದಲ್ಲಿ ೩೧ ವಸತಿ ಶಾಲೆಗಳನ್ನು ಉನ್ನತೀಕರಿಸಿ ಪದವಿಪೂರ್ವ ಕಾಲೇಜುಗಳಾಗಿಸಿದ್ದು ಕಾಲೇಜು ಪ್ರಾರಂಭೋತ್ಸವ ಮಾಡಿ ದಾಖಲಾತಿಗೆ ಚಾಲನೆ ನೀಡಿದ್ದೇವೆ. ಪ್ರಸ್ತುವ ವರ್ಷ ವಿದ್ಯಾರ್ಥಿಗಳು ಪಿಸಿಎಂಬಿ ಹಾಗೂ ಪಿಸಿಎಂಸಿ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಪ್ರತಿ ವಿಷಯದಲ್ಲೂ ೪೦ ವಿದ್ಯಾರ್ಥಿಗಳಂತೆ ಪ್ರಥಮ ವರ್ಷದಲ್ಲಿ ೮೦ ವಿದ್ಯಾರ್ಥಿಗಳಿಗೆ ಅವಕಾಶವಿದ್ದು ಪೋಷಕರು ಇದರ ಸದುಪಯೋಗ ಪಡೆದುಕೊಳ್ಳಬಹುದು. ಶಾಸಕ ಶರತ್ ಬಚ್ಚೇಗೌಡರ ಸತತ ಹೋರಾಟ ಸ್ವಯಂ ಹಿತಾಸಕ್ತಿಯಿಂದ ಪದವಿಪೂರ್ವ ಕಾಲೇಜು ಪ್ರಾರಂಭವಾಗಿದ್ದು ಪ್ರಸಕ್ತ ಸಾಲಿನಲ್ಲಿ ೩೧ ಕಾಲೇಜುಗಳಲ್ಲಿ ರಾಜ್ಯದಲ್ಲಿಯೇ ಇದೇ ಪ್ರಥಮವಾಗಿ ಪ್ರಾರಂಭಿಸಲಾಗಿದೆ ಎಂದರು.

ಜೇನುಗೂಡು ಟ್ರಸ್ಟ್ ಉಪಾಧ್ಯಕ್ಷರಾದ ಕೆ.ಎಂ.ಚೌಡೇಗೌಡ ಮಾತನಾಡಿ, ಮಾಜಿ ಸಚಿವರಾದ ಬಿ.ಎನ್.ಬಚ್ಚೇಗೌಡರು ಹಾಗೂ ಶಾಸಕ ಶರತ್ ಬಚ್ಚೇಗೌಡರು ಸದಾ ಶಿಕ್ಷಣ ಕ್ಷೇತ್ರಗಳ ಅಭವೃದ್ಧಿಗೆ ಪ್ರಥಮ ಆದ್ಯತೆ ನೀಡುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಬಸವರಾಜ್, ರಕ್ಷಿತಾ, ರುತ್‌ಜೆಸಂತಾ, ಗ್ಯಾರಂಟಿ ಸಮಿತಿ ಸದಸ್ಯ ಸೈಯದ್ ಮಹಬೂಬ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಜಿಯಾವುಲ್ಲಾ, ಜೇನುಗೂಡು ಟ್ರಸ್ಟ್ ನಿರ್ದೇಶಕರಾದ ನಯಾಜ್ ಖಾನ್, ಮಂಜುನಾಥ್, ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಪ್ರಶಾಂತ್ ಇತರರಿದ್ದರು.

(ಫೋಟೋ ಕ್ಯಾಪ್ಷನ್‌)

ಸೂಲಿಬೆಲೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉನ್ನತೀಕರಿಸಿದ ಪದವಿಪೂರ್ವ ಕಾಲೇಜಿನ ಪ್ರಾರಂಭೋತ್ಸವವನ್ನು ರಾಜ್ಯ ಒಕ್ಕಲಿಗ ಸಂಘದ ಮಾಜ ನಿರ್ದೇಶಕ ಬಿ.ಎನ್.ಗೋಪಾಲಗೌಡ ನೆರವೇರಿಸಿದರು. ಪ್ರಾಂಶುಪಾಲ ವೆಂಕಟೇಶ್, ಜೇನುಗೂಡು ಟ್ರಸ್ಟ್ ಉಪಾಧ್ಯಕ್ಷ ಚೌಡೇಗೌಡ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

30 ವಿದ್ಯಾರ್ಥಿಗಳ ಸಾವಿಗೆ ಸಚಿವ ಶಾ ನೇರ ಹೊಣೆ
ನಿರಂತರ ಪರಿಶ್ರಮದಿಂದ ಸಾಧನೆ ಸಾಧ್ಯ: ಬಿ.ಸಿ.ಪಾಟೀಲ್