ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಗುರುವಾರ (ಏ.9) ಮಧ್ಯಾಹ್ನ 3 ಗಂಟೆಗೆ ವೆಬ್‌ಸೈಟ್, ಮೊಬೈಲ್ ಆ್ಯಪ್‌ನಲ್ಲಿ ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಗುರುವಾರ (ಏ.9) ಮಧ್ಯಾಹ್ನ 3 ಗಂಟೆಗೆ ವೆಬ್‌ಸೈಟ್, ಮೊಬೈಲ್ ಆ್ಯಪ್‌ನಲ್ಲಿ ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.
ಅಲ್ಲದೆ, ಇದೇ ಮೊದಲ ಬಾರಿಗೆ ಫಲಿತಾಂಶ ಜೊತೆಗೆ ಡಿಜಿಲಾಕರ್ ಮೂಲಕ ಡಿಜಿಟಲ್ ಅಂಕಪಟ್ಟಿಯನ್ನೂ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದಾಗಿದೆ.
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು https://karresults.nic.in ವೆಬ್‌ಸೈಟ್ ಮತ್ತು ‘ಕರ್ನಾಟಕ ಒನ್’ ಮೊಬೈಲ್ ಆ್ಯಪ್ ಮೂಲಕವೂ ಪಡೆಯಬಹುದು. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಪ್/ಎಸ್‌ಎಂಎಸ್ ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುವುದು. ಅಷ್ಟೇ ಅಲ್ಲ, ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಣೆಯ ಸಮಯದಲ್ಲೇ ಅವರ ಅಂಕಪಟ್ಟಿಗಳನ್ನೂ ಡಿಜಿಲಾಕರ್ ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ. https://www.digilocker.gov.in ಮೂಲಕ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಮಂಡಳಿ ಮಾಹಿತಿ ನೀಡಿದೆ.
ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಯಾವ ರೀತಿ ಡೌನ್‌ಲೋಡ್ ಮಾಡಿಕೊಳ್ಳಬೇಕು ಎನ್ನುವ ಮಾಹಿತಿಯನ್ನು https://tinyurl.com/mw84wmh9 ನಲ್ಲಿ ತಿಳಿದುಕೊಳ್ಳಬಹುದು. ರಾಜ್ಯದ ಎಲ್ಲಾ ಪಿಯು ಕಾಲೇಜುಗಳಿಗೂ ತಮ್ಮ ವಿದ್ಯಾರ್ಥಿಗಳ ಫಲಿತಾಂಶದ ಪಟ್ಟಿಯನ್ನು ಗುರುವಾರ ಮಧ್ಯಾಹ್ನ 3 ಗಂಟೆಗೇ ಲಭ್ಯಗೊಳಿಸಲಾಗುವುದು ಎಂದು ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.
ಸಂಜೆ 6.15ಕ್ಕೆ ಫಲಿತಾಂಶದ ಒಟ್ಟಾರೆ ಮಾಹಿತಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸುದ್ಧಿಗೋಷ್ಠಿ ಮೂಲಕ ಪ್ರಕಟಿಸಲಿದ್ದಾರೆ.ಹೀಗೆ ನೋಡಿ ರಿಸಲ್ಟ್‌ಫಲಿತಾಂಶವನ್ನು https://karresults.nic.in ವೆಬ್‌ಸೈಟ್ ಮತ್ತು ‘ಕರ್ನಾಟಕ ಒನ್’ ಮೊಬೈಲ್ ಆಪ್ ಮೂಲಕ ಪಡೆಯಬಹುದು. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಪ್/ಎಸ್‌ಎಂಎಸ್ ಮೂಲಕವೂ ಫಲಿತಾಂಶದ ಮಾಹಿತಿ ಮಂಡಳಿಯಿಂದ ರವಾನೆ.----ಅಂಕಪಟ್ಟಿ ಪಡೆಯೋದು ಹೇಗೆ?https://www.digilocker.gov.in ಮೂಲಕ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ಯಾವ ರೀತಿ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂಬ ಮಾಹಿತಿಯನ್ನು https://tinyurl.com/mw84wmh9 ಮೂಲಕ ತಿಳಿದುಕೊಳ್ಳಬಹುದು.----
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.