ಬೆಳಗಾವಿ: ಶಿವಂ ಅಸೋಸಿಯೇಟ್ಸ್ ಬೆಳಗಾವಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹೋಪಯೋಗಿ ದಿನಸಿ ಹಾಗೂ ಇತರೆ ವಸ್ತುಗಳನ್ನು ಬಹಿರಂಗ ಹರಾಜು ಮಾಡಲು ನಿರ್ಧರಿಸಲಾಗಿದೆ.
ಬೆಳಗಾವಿ: ಶಿವಂ ಅಸೋಸಿಯೇಟ್ಸ್ ಬೆಳಗಾವಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹೋಪಯೋಗಿ ದಿನಸಿ ಹಾಗೂ ಇತರೆ ವಸ್ತುಗಳನ್ನು ಬಹಿರಂಗ ಹರಾಜು ಮಾಡಲು ನಿರ್ಧರಿಸಲಾಗಿದೆ. ವಿಶೇಷಾಧಿಕಾರಿಗಳು ಹಾಗೂ ಬೆಂಗಳೂರಿನ ಸಕ್ಷಮ ಪ್ರಾಧಿಕಾರಿಗಳ ನಿರ್ದೇಶನದ ಮೇರೆಗೆ ಅ.17ರಂದು ಬೆಳಗ್ಗೆ 11 ಗಂಟೆಗೆ ಹೊನಗಾ ಕೈಗಾರಿಕಾ ಪ್ರದೇಶದ ಕೆಐಎಡಿಬಿ ಗೋಡೌನ್ ಆವರಣದಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ.
ಹೊನಗಾ ಕೈಗಾರಿಕಾ ಪ್ರದೇಶದ ನಂ.18/ಸಿ ವಿಳಾಸದಲ್ಲಿರುವ ಗೋಡೌನ್‌ನಲ್ಲಿ ಹರಾಜು ನಡೆಯಲಿದ್ದು, ಆಸಕ್ತರು ಭಾಗವಹಿಸಬಹುದು ಎಂದು ಬೆಳಗಾವಿ ಉಪವಿಭಾಗದ ಹಿರಿಯ ಉಪವಿಭಾಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.