ಕನ್ನಡಪ್ರಭ ವಾರ್ತೆ ಹೊಸಪೇಟೆ
ಸ್ಥಳೀಯ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲ ನ್ಯಾಯ ಮಂಡಳಿ, ಮಕ್ಕಳ ವಿಶೇಷ ಪೊಲೀಸ್ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲೆಯಲ್ಲಿ ಕಾಣೆಯಾದ ಮಕ್ಕಳನ್ನು ಪತ್ತೆ ಹಚ್ಚುವ ವಿಶೇಷ ಕಾರ್ಯಪಡೆ ಸಮತಿ ಸಭೆಯ ಅಧ್ಯಕ್ಷತೆ ವಹಿಸಿಕೊಂಡು ಅವರು ಮಾತನಾಡಿದರು.
2021 ರಿಂದ 2026 ರ ವರೆಗೂ 18 ವರ್ಷದ ಒಳಗಿನ 352 ಮಕ್ಕಳು ಕಾಣೆಯಾದ ಕುರಿತು ಪ್ರಕರಣಗಳು ದಾಖಲಾಗಿವೆ.ಅದರಲ್ಲಿ 117 ಬಾಲಕರು ಹಾಗೂ 265 ಬಾಲಕಿಯರು ಕಾಣೆಯಾಗಿದ್ದಾರೆ. ಇದರಲ್ಲಿ 109 ಬಾಲಕರು, 261 ಬಾಲಕಿಯರು ಪತ್ತೆಯಾಗಿದ್ದಾರೆ. ನಮ್ಮ ಜಿಲ್ಲೆ ವ್ಯಾಪ್ತಿಯಲ್ಲಿ ಎಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿವೆಯೊ ಅಲ್ಲಿ ಹೆಚ್ಚಾಗಿ ಜನರಲ್ಲಿ ಜಾಗೃತಿ ಮೂಡಿಸು ಕೆಲಸ ಪೋಲೀಸ್ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಗಬೇಕಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲಾದ್ಯಾಂತ ಜನರಲ್ಲಿ ಜಾಗೃತಿ ಮೂಡಿಸುವುದಕ್ಕೆ ಮೈಕ್ರೋ ಪ್ರಾಜೆಕ್ಟ್ ಸಿದ್ಧಪಡಿಸಿ ಕೆಲಸ ಮಾಡೋಣ ಎಂದು ಅವರು ಹೇಳಿದರು. ಸಭೆಯಲ್ಲಿ ಮಕ್ಕಳ ವಿಶೇಷ ಕಾರ್ಯಪಡೆ ಸಮಿತಿಯ ಸದಸ್ಯರು ಹಾಗೂ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೊಕೇಶ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕಾಧಿಕಾರಿ ಸುದೀಪ್ ಕುಮಾರ್ ಉಂಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಹೆಚ್. ಮುದುಕಪ್ಪ, ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಬಸವಂತಪ್ಪ, ಹೊಸಪೇಟೆ ಡಿವೈಎಸ್ಪಿ ಪಿ.ಮುರುಳಿಧರ್, ಬಾಲ ನ್ಯಾಯಮಂಡಳಿ ಸದಸ್ಯೆ ಎನ್.ಕಲಾವತಿ, ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ ಸಂಸ್ಕೃತ ಅಧ್ಯಕ್ಷ ಭೀಮರಾಜ, ಪ್ಯಾರಲೀಗಲ್ ವಾಲಂಟಿಯರ್ಸ ಸಿದ್ಧಪ್ಪ ಬೆಳಗಲ್, ಇಂಡಿಯಾನ್ ಜಿಪ್ಸಿ ಸಂಸ್ಥೆಯ ಸೌಂದರ್ಯ ರಾಜ್ ಮಕ್ಕಳ ರಕ್ಷಣಾಧಿಕಾರಿ ಗಂಗಾಧರ, ಜಿಲ್ಲಾ ಸಂಯೋಜಕರು ಮಕ್ಕಳ ಸಹಾಯವಾಣಿ ಚಿದಾನಂದ, ಮಕ್ಕಳ ರಕ್ಷಾಧಿಕಾರಿ ಶರಣಪ್ಪ, ಕಾನೂನು ಪರಿವೀಕ್ಷಣಾಧಿಕಾರಿ ಶ್ರೀಕಾಂತ, ಆರೋಗ್ಯ ಇಲಾಖೆ ಅಧಿಕಾರಿ ಎಂ.ಪಿ. ದೊಡ್ಡಮನಿ, ಕೆ.ಎಸ್.ಆರ್.ಟಿ.ಸಿ ಅಧಿಕಾರಿ ಸಿದ್ದರಾಜು, ಕಾರ್ಮಿಕ ಇಲಾಖೆಯ ನಿರೀಕ್ಷಕ ಶಿವಶಂಕರಪ್ಪ, ಅಮರೇಶ್ವರ ಆಸ್ಪತ್ರೆಯ ವೈದ್ಯೆ ಡಾ.ಹೇಮಲತಾ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.