ಧಾರವಾಡ:
ರಾಯಾಪುರದಲ್ಲಿರುವ ಕರ್ನಾಟಕ ಹಾಲು ಮಹಾ ಮಂಡಳಿ ತರಬೇತಿ ಕೇಂದ್ರದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಕರ್ನಾಟಕ ಪಶುವೈದ್ಯಕೀಯ ಸಂಘ ಜಂಟಿಯಾಗಿ ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಪಶುವೈದ್ಯಾಧಿಕಾರಿಗಳು, ವೈದ್ಯಾಧಿಕಾರಿಗಳು ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಏರ್ಪಡಿಸಿದ್ದ ತಾಂತ್ರಿಕ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಜಂಟಿ ನಿರ್ದೇಶಕ ಡಾ. ಎಚ್. ನಾಗರಾಜ್ ರೇಬಿಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮ, ಪ್ರಾಣಿಗಳ ಲಸಿಕಾಕರಣ ಹಾಗೂ ಇಲಾಖೆಯ ವತಿಯಿಂದ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು.ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮಹೇಶ ಚಿತ್ತರಗಿ ರೇಬಿಸ್‌ನಿಂದ ಉಂಟಾಗುವ ಆರೋಗ್ಯ ಸಮಸ್ಯೆ, ನಾಯಿ ಕಚ್ಚಿದ ಸಂದರ್ಭದಲ್ಲಿ ತಕ್ಷಣ ಕೈಗೊಳ್ಳಬೇಕಾದ ಕ್ರಮ ಹಾಗೂ ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ರೇಬಿಸ್ ನಿಯಂತ್ರಣದ ಮಹತ್ವದ ಕುರಿತು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವೆ ಇಲಾಖೆ ನಿರ್ದೇಶಕ ಡಾ.ಎಸ್.ವಿ. ಸಂತಿ ಮಾತನಾಡಿ, ಡಬ್ಲೂಎಚ್‌ಓ ಘೋಷಿಸಿದಂತೆ 2030ರ ಒಳಗೆ ನಾಯಿ ಕಡಿತದಿಂದ ಆಗುವ ರೇಬಿಸ್ ಸಾವುಗಳನ್ನು ಶೂನ್ಯವಾಗಿಸುವ ಸಂಕಲ್ಪವನ್ನು ಸಾಧಿಸಲು ಇರುವ ಸವಾಲುಗಳು ಹಾಗೂ ಅವುಗಳನ್ನು ಎದುರಿಸಲು ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಪಶು ವೈದ್ಯರು ಮಾನವ ವೈದ್ಯರು ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ಈ ಕಾರ್ಯಾಗಾರ ಮುಖ್ಯ ವೇದಿಕೆಯಾಗಲೆಂದರು.