ಮೂರನೇ ಬಾರಿ ರೆಡ್‌ಕ್ರಾಸ್‌ ರಾಜ್ಯಸಭಾಪತಿ: ಬಸ್ರೂರು ರಾಜೀವ ಶೆಟ್ಟಿ ಸಾರ್ವಜನಿಕ ಅಭಿನಂದನೆ

KannadaprabhaNewsNetwork | Published : Apr 25, 2025 11:53 PM

ಸಾರಾಂಶ

ಅಂತಾರಾಷ್ಟ್ರೀಯ ಸೇವಾ ಸಂಸ್ಥೆ ರೆಡ್ ಕ್ರಾಸ್‌ ಕರ್ನಾಟಕ ಸಭಾಪತಿಯಾಗಿ ಮೂರನೇ ಬಾರಿ ಆಯ್ಕೆಯಾಗಿರುವ ಮೂಲಕ ಬಸ್ರೂರು ರಾಜೀವ ಶೆಟ್ಟಿ ಅವರಿಗೆ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ, ವಿವಿಧ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಸಾರ್ವಜನಿಕವಾಗಿ ಸನ್ಮಾನ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಅಂತಾರಾಷ್ಟ್ರೀಯ ಸೇವಾ ಸಂಸ್ಥೆ ರೆಡ್ ಕ್ರಾಸ್‌ ಕರ್ನಾಟಕ ಸಭಾಪತಿಯಾಗಿ ಮೂರನೇ ಬಾರಿ ಆಯ್ಕೆಯಾಗಿರುವ ಮೂಲಕ ಬಸ್ರೂರು ರಾಜೀವ ಶೆಟ್ಟಿ ಉಡುಪಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇದು ನಾವೆಲ್ಲರೂ ಹೆಮ್ಮೆ ಪಡುವ ಸಾಧನೆಯಾಗಿದೆ ಎಂದು ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಹೇಳಿದ್ದಾರೆ. ರಾಜ್ಯ ರೆಡ್ಕ್ರಾಸ್ ಸಭಾಪತಿಗಳಾಗಿ ಆಯ್ಕೆಯಾದ ಬಸ್ರೂರು ರಾಜೀವ ಶೆಟ್ಟಿ ಅವರನ್ನು

ನಗರದ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ, ವಿವಿಧ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಸಾರ್ವಜನಿಕವಾಗಿ ಸನ್ಮಾನಿಸಿ ಅವರು ಮಾತಾನಾಡಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿ, ರಾಜೀವ ಶೆಟ್ಟಿ ಸೇವಾ ಕಾರ್ಯಗಳ ಮೂಲಕ ಉಡುಪಿ ರೆಡ್ ಕ್ರಾಸ್‌ ಘನತೆ ಹೆಚ್ಚಿಸಿದ್ದಾರೆ ಎಂದರು.

ಉಡುಪಿ ಶಾಸಕ ಯಶ್ಪಾಲ್ ಎ ಸುವರ್ಣ ಶುಭ ಹಾರೈಸಿದರು. ಮಾಜಿ ಜಿಲ್ಲಾ ಗವರ್ನರ್ ವಿ.ಜಿ. ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು.

ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ವಿಜಯ ಬಲ್ಲಾಳ್, ಉಡುಪಿ ಜಿಲ್ಲೆ ಸ್ಕೌಟ್ ಮತ್ತ್ತು ಗೈಡ್ ಸಂಸ್ಥೆ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ, ಕುಂದಾಪುರ ರೆಡ್‌ಕ್ರಾಸ್ ಸಭಾಪತಿ ಜಯಕರ ಶೆಟ್ಟಿ, ಮಂಗಳೂರು ವಿಶ್ವವಿದ್ಯಾನಿಲಯದ ರೆಡ್‌ಕ್ರಾಸ್ ಸಂಯೋಜಕಿ ಡಾ. ಗಾಯತ್ರಿ, ದಕ್ಷಿಣ ಕನ್ನಡ ಜಿಲ್ಲಾ ರೆಡ್‌ಕ್ರಾಸ್ ಸಭಾಪತಿ ಶಾಂತರಾಮ್ ಶೆಟ್ಟಿ, ಉಡುಪಿ ಲಯನ್ಸ್ ಕ್ಲಬ್ ಅಧ್ಯಕ್ಷ ಲೂಯಿಸ್ ಲೋಬೋ, ಜಿಲ್ಲಾ ರೆಡ್‌ಕ್ರಾಸ್ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈಜಿ., ಮಾಜಿ ಖಜಾಂಚಿ ಟಿ. ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.

ಖ್ಯಾತ ಕಲಾವಿದ ಶಂಕರ್‌ದಾಸ್‌ ಚಂಡ್ಕಳ ನಾಡಗೀತೆ ಹಾಡಿದರು. ಜಿಲ್ಲಾ ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಸೇರಿಗಾರ ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲಾ ಖಜಾಂಚಿ ರಮಾದೇವಿ ವಂದಿಸಿದರು.

Share this article