ದೊಡ್ಡಬಳ್ಳಾಪುರ: ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್.ಅನುರಾಧ ಹೇಳಿದರು.
ರಾಜ್ಯಾದ್ಯಂತ ಸರ್ಕಾರವು ಘನ ತ್ಯಾಜ್ಯ ನಿರ್ವಹಣಾ ನಿಯಮಗಳು-2026 ಅನ್ನು ಅನುಷ್ಠಾನಗೊಳಿಸಿದ್ದು, ಪ್ರತಿಯೊಬ್ಬರೂ ತಮ್ಮ ಮನೆಯ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೇ ಒಣ ತ್ಯಾಜ್ಯ, ಹಸಿ ತ್ಯಾಜ್ಯ, ಅಪಾಯಕಾರಿ ತ್ಯಾಜ್ಯ ಹಾಗೂ ಕಪ್ಪು ತ್ಯಾಜ್ಯವಾಗಿ ನಾಲ್ಕು ವಿಭಾಗದಲ್ಲಿ ತ್ಯಾಜ್ಯ ವಿಂಗಡಿಸಿ, ಸ್ವಚ್ಛ ವಾಹಿನಿ ವಾಹನಕ್ಕೆ ನೀಡುವಲ್ಲಿ ಸಹಕರಿಸಬೇಕು. ಇದರಿಂದ ಸ್ವಚ್ಚ ಹಾಗೂ ಸುಂದರ ವಾತಾವರಣ ನಿರ್ಮಿಸಲು ಸಹಕಾರಿಯಾಗುತ್ತದೆ ಎಂದರು.
ನಾವು ಎಲ್ಲೆಂದರಲ್ಲಿ ಕಸ ಎಸೆಯುವುದರಿಂದ ನಮ್ಮ ಆರೋಗ್ಯದ ಮೇಲೆಯೇ ದುಷ್ಪರಿಣಾಮ ಬೀರುತ್ತದೆ ಎನ್ನುವ ಸ್ಪಷ್ಟ ಅರಿವು ಸಾರ್ವಜನಿಕರಲ್ಲಿ ಇರಬೇಕು. ಪೌರಾಡಳಿತ ಅಥವಾ ಸ್ಥಳೀಯ ಸಂಸ್ಥೆಗಳ ಸ್ವಚ್ಚ ವಾಹಿನಿ ವಾಹನ ಮನೆ ಬಾಗಿಲಿಗೆ ಬಂದಾಗ ವಿಂಗಡಿಸಿದ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಿಕೊಡುವಂತೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.ಜಿಲ್ಲೆಯ ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರಿ ಉದ್ದೇಶಗಳಿಗೆ ಸೂಕ್ತ ಜಾಗ ಕೊಡಿಸಲು ಪ್ರಯತ್ನಿಸಬೇಕು. ಜತೆಗೆ ತಮ್ಮ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ಹೇಳಿದರು.
ತ್ಯಾಜ್ಯ ನಿರ್ವಹಣಾ ಮಾನದಂಡಗಳನ್ನು ಪಾಲಿಸದ ವ್ಯಕ್ತಿಗಳು, ಸಂಸ್ಥೆಗಳು ಅಥವಾ ಸಂಸ್ಥೆಗಳು ಪರಿಸರ ದಂಡ ಪಾವತಿಸಬೇಕು. ದೊಡ್ಡ ವಸತಿ ಸಂಕೀರ್ಣಗಳು, ವಿಶ್ವವಿದ್ಯಾಲಯಗಳು, ಮಾಲ್‌ಗಳು ಮತ್ತು ಸರ್ಕಾರಿ ಕಟ್ಟಡಗಳಂತಹ ಬೃಹತ್ ತ್ಯಾಜ್ಯ ಉತ್ಪಾದಕರ ಮೇಲೆ ನಿಯಮಗಳು ಹೆಚ್ಚಿನ ಜವಾಬ್ದಾರಿಯನ್ನು ಇದ್ದು, ಅವರು ಉತ್ಪಾದಿಸುವ ತ್ಯಾಜ್ಯವನ್ನು ಸರಿಯಾಗಿ ವಿಂಗಡಿಸಿ ಸಂಸ್ಕರಿಸಬೇಕು. ನಾವು ತ್ಯಾಜ್ಯವನ್ನು ಸರಿಯಾಗಿ ಬೇರ್ಪಡಿಸಿ ನಿಯಮಗಳನ್ನು ಅನುಸರಿಸಿದರೆ, ನಾವು ನಮ್ಮ ಪರಿಸರವನ್ನು ರಕ್ಷಿಸಬಹುದು ಮತ್ತು ಮುಂದಿನ ಪೀಳಿಗೆಗೆ ಆರೋಗ್ಯಕರ ಭವಿಷ್ಯವನ್ನು ಸೃಷ್ಟಿಸಬಹುದು ಎಂದು ಹೇಳಿದರು.
ನಾವೆಲ್ಲರೂ ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ಪ್ಲಾಸ್ಟಿಕ್
ಕಸ ಸಂಗ್ರಹಿಸುವ ಪೌರಕಾರ್ಮಿಕರ ಬಗ್ಗೆ ಗೌರವ ಇರಬೇಕು. ಇವರು ದಿನಂಪ್ರತಿ ನಿರ್ವಹಿಸುವ ಕಾರ್ಯದಿಂದಲೇ ಸಮಾಜವು ಸ್ವಚ್ಛ ಹಾಗೂ ಸ್ವಾಸ್ಥ್ಯದಿಂದ ಇರುವುದನ್ನು ಮರೆಯಬಾರದು ಎಂದು ಹೇಳಿದರು.
ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಪ್ರತಿಯೊಂದು ಮನೆ ಹಂತದಿಂದ ತ್ಯಾಜ್ಯ ನಿರ್ವಹಣೆ ಆಗುವಂತೆ ಮಾಡಬೇಕು. ರೈತರು ಹಸಿ ಕಸದಿಂದ ಸಾವಯವ ಗೊಬ್ಬರ ಉತ್ಪಾದಿಸಿ, ರಾಸಾಯನಿಕ ಗೊಬ್ಬರ ಬಳಕೆ ತಡೆಗೆ ಉತ್ತೇಜಿಸಲು ಮುಂದಾಗಬೇಕು ಎಂದರು.
ಜನಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ವಿತರಣೆ ಮಾಡಿದರು.
2ಕೆಡಿಬಿಪಿ2-
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಘನ ತ್ಯಾಜ್ಯ ಸಮರ್ಪಕ ನಿರ್ವಹಣೆ ಕುರಿತು ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ನಡೆಯಿತು.