ಎಸ್‌ಐಆರ್ ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯ-ದಲ್ಜಿತಕುಮಾರ

KannadaprabhaNewsNetwork |  
Published : Jul 05, 2026, 02:00 AM IST
ಮತದಾರರ ಜಾಗೃತಿಗಾಗಿ ಆಯೋಜಿಸಲಾದ ಬೈಕ್ ರ‍್ಯಾಲಿಗೆ ಹಾವೇರಿ ನಗರದ ಪುರಸಿದ್ದೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಿಪಂ ಸಿಒಒ ದಲ್ಜಿತ್‌ಕುಮಾರ ಶನಿವಾರ ಚಾಲನೆ ನೀಡಿದರು. | Kannada Prabha

ಸಾರಾಂಶ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಜಿಲ್ಲೆಯಲ್ಲಿ ಜೂ. 30ರಿಂದ ಆರಂಭಗೊಂಡಿದ್ದು, ಎಸ್‌ಐಆರ್ ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಲ್ಜಿತ್‌ಕುಮಾರ ಹೇಳಿದರು.

ಹಾವೇರಿ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಜಿಲ್ಲೆಯಲ್ಲಿ ಜೂ. 30ರಿಂದ ಆರಂಭಗೊಂಡಿದ್ದು, ಎಸ್‌ಐಆರ್ ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಲ್ಜಿತ್‌ಕುಮಾರ ಹೇಳಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕುರಿತು ಮತದಾರರ ಜಾಗೃತಿಗಾಗಿ ಆಯೋಜಿಸಲಾದ ಬೈಕ್ ರ‍್ಯಾಲಿಗೆ ನಗರದ ಪುರಸಿದ್ಧೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಶನಿವಾರ ಚಾಲನೆ ನೀಡಿ ಮಾತನಾಡಿದರು.

ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಎನುಮರೇಷನ್ ನಮೂನೆಗಳನ್ನು ವಿತರಿಸುತ್ತಿದ್ದಾರೆ. ಬಿಎಲ್‌ಒಗಳು ನೀಡುವ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ ಜು. 29ರೊಳಗೆ ಮರಳಿ ಸಲ್ಲಿಸಬೇಕು. ಆ. 15ರಂದು ಪ್ರಕಟವಾಗಲಿರುವ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಬೇಕಾದರೆ ನಮೂನೆ ಸಲ್ಲಿಕೆ ಕಡ್ಡಾಯವಾಗಿದೆ. ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿಕೊಂಡು ಅಗತ್ಯವಿದ್ದಲ್ಲಿ ಬಿಎಲ್‌ಒಗಳನ್ನು ಸಂಪರ್ಕಿಸಿ ಮಾಹಿತಿ ನೀಡಬೇಕು. ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಹೊರಗುಳಿಯದಂತೆ ಸಾರ್ವಜನಿಕರು, ಜನಪ್ರತಿನಿಧಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳು ಕೈಜೋಡಿಸಬೇಕು ಎಂದು ಕರೆ ನೀಡಿದರು.

ತಹಸೀಲ್ದಾರ್ ಶರಣಮ್ಮ ಕೆ., ಮಾತನಾಡಿ, ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ತಾಲೂಕು, ಜಿಲ್ಲಾ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮನೆಮನೆಗೆ ಭೇಟಿ ನೀಡುವ ಬಿಎಲ್‌ಒಗಳಿಗೆ ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ನೀಡಿ ಸಹಕರಿಸಬೇಕು. ಪ್ರತಿಯೊಬ್ಬ ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಬೇಕು ಎಂದರು.

ಜಾಥಾದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ. ಪುನೀತ್ ಬಿ.ಆರ್., ಪ್ರಾದೇಶಿಕ ಸಾರಿಗೆ ಅಧಿಕಾರಿ ಆರ್. ವಿನಯಾ ಕಾಟೋಕರ್, ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.ಆಕರ್ಷಕ ಬೈಕ್ ರ‍್ಯಾಲಿ: ನಗರದ ಪುಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ಆಕರ್ಷಕ ಬೈಕ್ ರ‍್ಯಾಲಿ, ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸುವ ಮೂಲಕ ಮುನ್ಸಿಪಲ್ ಹೈಸ್ಕೂಲ್ ಮೈದಾನದ ವರೆಗೆ ಜರುಗಿತು. ರ‍್ಯಾಲಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕುರಿತು ಜಾಗೃತಿ ಮೂಡಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗದಗ ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ವ್ಯಾಪಕ ಅಕ್ರಮ: ಬಸವರಾಜ ಬೊಮ್ಮಾಯಿ
ಮೂರು ಬೂತ್‌ಗಳಲ್ಲಿ ಎಚ್.ಕೆ. ಪಾಟೀಲ ಹೆಸರು: ಬಸವರಾಜ ಬೊಮ್ಮಾಯಿ ಆರೋಪ