ಕನ್ನಡಪ್ರಭ ವಾರ್ತೆ ಶಿರಾ
ಅವರು ಶುಕ್ರವಾರ ನಗರದ ಡಿವೈಎಸ್ಪಿ ಕಚೇರಿ ಆವರಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಏರ್ಪಡಿಸಿದ್ದ ಸಾರ್ವಜನಿಕ ಕುಂದು ಕೊರತೆ ಸಭೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿದರು. ಕಳೆದ ಒಂದು ತಿಂಗಳಿನಿಂದ ತುಮಕೂರು ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ಹಾಗೂ ನಶೆ ಮುಕ್ತ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಯಶಸ್ವಿಯಾಗಿ ಮಾಡಿದ್ದಾರೆ. ಶಾಲಾ ಕಾಲೇಜುಗಳಲ್ಲಿ ಅಪರಾಧ ತಡೆ ಮಾಸಾಚರಣೆ ಹಾಗೂ ನಶೆ ಮುಕ್ತ ಅಭಿಯಾನ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದರು.
ಅನುದಾನಿತ ಶಾಲೆಯಲ್ಲಿ ಆರ್ ಎಸ್ ಎಸ್ ಚಟುವಟಿಕೆಗೆ ಕಡಿವಾಣ ಹಾಕಿ:ಶಿರಾ ನಗರದ ಶ್ರೀ ಮಾಧವ ವಿದ್ಯಾ ಮಂದಿರ ಅನುದಾನಿತ ಶಾಲೆಯಲ್ಲಿ ಮಕ್ಕಳಿಗೆ ಆರ್ ಎಸ್ ಎಸ್ ವಿಚಾರಗಳನ್ನು ಬೋಧನೆ ಮಾಡುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮಲ್ಲಿಕಾಪುರ ನಾಗರಾಜು ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಪತ್ರಕರ್ತರಿಂದ ಮನವಿ ಸಲ್ಲಿಕೆ:ಶಿರಾ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರು ಹಾಗೂ ಪತ್ರಿಕೆಗಳ ಬಗ್ಗೆ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಮಾತನಾಡಿ ವಿಡಿಯೋ ಹರಿ ಬಿಟ್ಟಿದ್ದು, ಆ ವ್ಯಕ್ತಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳ ಬೇಕೆಂದು ಮನವಿ ಸಲ್ಲಿಸಲಾಯಿತು.
ಸಾರ್ವಜನಿಕ ಕುಂದು ಕೊರತೆ ಸಭೆಯಲ್ಲಿ ಡಿವೈಎಸ್ಪಿ ಬಿ.ಕೆ. ಶೇಖರ್, ಅಡಿಷನಲ್ ಎಸ್ ಪಿ ಪುರುಷೋತ್ತಮ್, ಗ್ರಾಮಂತರ ಸರ್ಕಲ್ ಇನ್ಸ್ಪೆಕ್ಟರ್ ಡಿ.ಜಿ. ಶ್ರೀನಿವಾಸ್, ನಗರ ಸರ್ಕಲ್ ಇನ್ಸ್ಪೆಕ್ಟರ್ ಪ್ರವೀಣ್ ಕುಮಾರ್ ಸೇರಿ ಹಲವರು ಹಾಜರಿದ್ದರು.-------