ಕನ್ನಡಪ್ರಭವಾರ್ತೆ ಮೂಲ್ಕಿ
ಅಧ್ಯಕ್ಷತೆ ವಹಿಸಿದ್ದ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ ಮಾತನಾಡಿ ಕಾರ್ಯಕ್ರಮದಲ್ಲಿ ಜನರಿಗೆ ಕೈಗೆಟುಕುವ ಬೆಲೆಯಲ್ಲಿ ಬಟ್ಟೆಬರೆ, ಹೂವು , ತರಕಾರಿ ಸಸ್ಯಗಳು, ತಿಂಡಿ, ತಿನಿಸು, ನಾನಾ ಬಗೆಯ ಆಹಾರ ಖಾದ್ಯಗಳಿದ್ದು, ಎಲ್ಲರೂ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕೆಂದು ಹೇಳಿದರು. ಬಂಟರ ಸಂಘದ ಕೃಷಿ ಸಮಿತಿಯ ಸಂಚಾಲಕ ಸುಧಾಕರ ಶೆಟ್ಟಿ ಖಂಡಿಗೆ ಯವರನ್ನು ಸನ್ಮಾನಿಸಲಾಯಿತು. ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ ತಡಂಬೈಲ್, ಲಯನ್ಸ್ ಕ್ಲಬ್ ಸುರತ್ಕಲ್ ಅಧ್ಯಕ್ಷ ಜಯೇಶ್ ಗೋವಿಂದ್, ಸುರತ್ಕಲ್ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಬಂಟರ ಸಂಘದ ಮಹಿಳಾ ವೇದಿಕೆ ಅಧ್ಯಕ್ಷೆ ಸರೋಜಾ ಟಿ. ಶೆಟ್ಟಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಆಪದ್ಭಾಂಧವ ಸಂಘಟನೆಯ ಉಮೇಶ್ ಇಡ್ಯಾ, ರೈತಕುಡ್ಲ ಪ್ರತಿಷ್ಠಾನದ ಕಾರ್ಯದರ್ಶಿ ಲತೀಶ್ ಮಳಲಿ ಮತ್ತಿತರರಿದ್ದರು. ರೈತಕುಡ್ಲ ಪ್ರತಿಷ್ಠಾನದ ಅಧ್ಯಕ್ಷ ಭರತ್ ರಾಜ್ ಸೊರಕೆ ಸ್ವಾಗತಿಸಿದರು, ರಾಜಯ್ಯ ವಂದಿಸಿದರು. ರಾಜೇಶ್ವರಿ ಡಿ. ಶೆಟ್ಟಿ ನಿರೂಪಿಸಿದರು.