ಕನ್ನಡಪ್ರಭ ವಾರ್ತೆ ನಾಪೋಕ್ಲು
ಸ್ಥಳೀಯ ಕೊಡವ ಸಮಾಜದಲ್ಲಿ ಜರುಗಿದ ಗ್ರಾಮ ಸಭೆಯಲ್ಲಿ ಸಾರ್ವಜನಿಕರಿಂದ ಪ್ರಶ್ನೆಗಳ ಸುರಿಮಳೆಯೇ ಕಂಡುಬಂತು.
ಕುಡಿಯುವ ನೀರಿನ ಶುದ್ಧೀಕರಣ ಘಟಕ ಸ್ಥಾಪನೆ ಕೆಲಸ ಪ್ರಾರಂಭವಾಗಿ ಹತ್ತು ವರ್ಷಗಳಾಗಿದ್ದರೂ ಶುದ್ಧ ಕುಡಿಯುವ ನೀರು ಸಾರ್ವಜನಿಕರಿಗೆ ದೊರಕುತ್ತಿಲ್ಲ. ಕಾವೇರಿ ಹೊಳೆಯಿಂದ ನೇರವಾಗಿ ಸಾರ್ವಜನಿಕರಿಗೆ ನೀರು ಸರಬರಾಜು ಮಾಡಲಾಗುತ್ತಿದೆ, ಬೀದಿ ನಾಯಿ ಮತ್ತು ಜಾನುವಾರುಗಳು ಪಟ್ಟಣದಲ್ಲಿ ಸಮಸ್ಯೆ ಉಂಟುಮಾಡುತ್ತಿವೆ ಈ ಹಿಂದಿನಂತೆ ಜಾನುವಾರಗಳನ್ನು ದೊಡ್ಡಿಗೆ ಹಾಕಿ ಕಾನೂನು ಕ್ರಮ ಕೈಗೊಳ್ಳಿ ಎಂದು ನಾಗರಿಕರು ಒತ್ತಾಯಿಸಿದರು.ವಿದ್ಯುತ್ ಸಮಸ್ಯೆ ಅಧಿಕವಾಗುತ್ತಿದೆ. ಕೂಡಲೇ ವಿದ್ಯುತ್ ಸ್ಟೇಷನ್‌ಗೆ ಜಾಗ ಗುರುತಿಸಿ ಸಮಸ್ಯೆ
ಗ್ರಾಮ ಸಭೆಯಲ್ಲಿ ಪಂಚಾಯತಿ ಸದಸ್ಯರ ಪೈಕಿ ಎಲ್ಲರೂ ಸಭೆಗೆ ಹಾಜರಾಗಿಲ್ಲ. ಇಲ್ಲಿ ಇಲಾಕೆ ಸಿಬ್ಬಂದಿ ಹಾಜರಾತಿ, ಸಾರ್ವಜನಿಕರಿಂದ ಹೆಚ್ಚಿದೆ. ಸರಿಯಾದ ಮಾಹಿತಿ ಇಲ್ಲದ ಕಾರಣ 17 ಸಾರ್ವಜನಿಕರು ಮಾತ್ರ ಉಪಸ್ಥಿತರಿದ್ದಾರೆ ಎಂದು ಗ್ರಾಮ ಪಂಚಾಯತಿ ಮಾಜಿ ಸದಸ್ಯ ಬಿದ್ದಾಟಂಡನ ರೋಜಿ ಚಿನ್ನಪ್ಪ ಆರೋಪಿಸಿದರು.
ಸಭೆಗೆ ಇಲಾಖೆಗಳ ಅಧಿಕಾರಿಗಳು ಎಲ್ಲರೂ ಬರಬೇಕಿತ್ತು. ನಮ್ಮ ಸಮಸ್ಯೆ ಪರಿಹರಿಸಲು ನಮ್ಮ ಇಲಾಖೆ ಅಧಿಕಾರಿಗಳು ಬಂದಿಲ್ಲ. ಅವರಿಗೆ ನಾವು ಮಾಹಿತಿ ನೀಡಿದ್ದೇವೆ. ಆದ ಕಾರಣ ಪಂಚಾಯಿತಿ ಅಧಿಕಾರಿಗಳಿಗೆ ನೋಟಿಸ್ ಕಳಿಸಬೇಕು ಎಂದು ಅಂಗನವಾಡಿ ಶಿಕ್ಷಕಿ ಆಶಾಲತಾ ಒತ್ತಾಯಿಸಿದರು.
ಗ್ರಾಮ ಪಂಚಾಯಿತಿ ಪಿಡಿಓ ಚೋಂದಕ್ಕಿ, ಸದಸ್ಯ ಕುಲ್ಲೇಟಿರ ಅರುಣ್ ಬೇಬ ಪಾಲ್ಗೊಂಡರು.
ಉಪ ಅಧ್ಯಕ್ಷ ಕುಲ್ಲೇಟಿರ ಹೇಮಾ ಅರುಣ್, ಪಂಚಾಯತಿ ಸದಸ್ಯ ಪ್ರತಿನಿಧಿಗಳು, ಸಿಬ್ಬಂದಿ, ಅಂಗನವಾಡಿ, ಆಶಾ ಹಾಗೂ ಆರೋಗ್ಯ ಕಾರ್ಯಕರ್ತರು, ಸ್ವಸಹಾಯ ಸಂಘದ ಪದಾಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.