ಘಟಕಗಳಲ್ಲಿ ಸಿಮೆಂಟ್ ಧೂಳು, ತ್ಯಾಜ್ಯ ನೀರು ಸಮರ್ಪಕ ವಿಲೇವಾರಿ ಮಾಡದೆ ಪರಿಸರ ಮಾಲಿನ್ಯ ಮಾಡುತ್ತಿರುವ ಹಾಗೂ ನಿಯಮ ಮೀರಿ ವಾಹನದಲ್ಲಿ ಹೆಚ್ಚಿನ ಪ್ರಮಾಣದ ಕಾಂಕ್ರೀಟ್ ಮಿಕ್ಸ್ ಸಾಗಣೆ ಮಾಡಿ ರಸ್ತೆಯಲ್ಲಿ ಚೆಲ್ಲುವ ಪರಿಣಾಮ ರಸ್ತೆ ಸುರಕ್ಷತೆಗೆ ಸಮಸ್ಯೆ ಉಂಟಾಗುತ್ತಿದ್ದು, ಹಲವಾರು ಅಪಘಾತಗಳು ನಡೆದಿದೆ. ಜೊತೆಗೆ ಓವರ್ ಲೋಡ್ ಕಾಂಕ್ರೀಟ್ ಮಿಕ್ಸ್ ವಾಹನಗಳ ಸಂಚಾರದಿಂದ ರಸ್ತೆಗಳು ಹದಗೆಟ್ಟಿರುವ ಬಗ್ಗೆ ದೂರುಗಳು ಬರುತ್ತಿದ್ದು, ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು, ತಪ್ಪಿದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಕನ್ನಡಪ್ರಭ ವಾರ್ತೆ ಮಣಿಪಾಲ
ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಾಚರಿಸುವ ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ ಬಗ್ಗೆ ಸಣ್ಣ ಕೈಗಾರಿಕೆಗಳ ಸಂಘ ಹಾಗೂ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಉಡುಪಿ ನಗರಸಭೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ರೆಡಿಮಿಕ್ಸ್ ಘಟಕಗಳ ಅಧಿಕಾರಿಗಳ ಸಭೆ ನಡೆಸಿ, ನಗರಸಭೆಯ ನಿಯಮಾವಳಿಗಳಿಗೆ ಬದ್ಧವಾಗಿ ಕಾರ್ಯಾಚರಿಸುವಂತೆ ಸೂಚನೆ ನೀಡಿದರು.ಘಟಕಗಳಲ್ಲಿ ಸಿಮೆಂಟ್ ಧೂಳು, ತ್ಯಾಜ್ಯ ನೀರು ಸಮರ್ಪಕ ವಿಲೇವಾರಿ ಮಾಡದೆ ಪರಿಸರ ಮಾಲಿನ್ಯ ಮಾಡುತ್ತಿರುವ ಹಾಗೂ ನಿಯಮ ಮೀರಿ ವಾಹನದಲ್ಲಿ ಹೆಚ್ಚಿನ ಪ್ರಮಾಣದ ಕಾಂಕ್ರೀಟ್ ಮಿಕ್ಸ್ ಸಾಗಣೆ ಮಾಡಿ ರಸ್ತೆಯಲ್ಲಿ ಚೆಲ್ಲುವ ಪರಿಣಾಮ ರಸ್ತೆ ಸುರಕ್ಷತೆಗೆ ಸಮಸ್ಯೆ ಉಂಟಾಗುತ್ತಿದ್ದು, ಹಲವಾರು ಅಪಘಾತಗಳು ನಡೆದಿದೆ. ಜೊತೆಗೆ ಓವರ್ ಲೋಡ್ ಕಾಂಕ್ರೀಟ್ ಮಿಕ್ಸ್ ವಾಹನಗಳ ಸಂಚಾರದಿಂದ ರಸ್ತೆಗಳು ಹದಗೆಟ್ಟಿರುವ ಬಗ್ಗೆ ದೂರುಗಳು ಬರುತ್ತಿದ್ದು, ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು, ತಪ್ಪಿದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.ಈ ಸಂದರ್ಭ ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ನಗರಸಭಾ ಸದಸ್ಯರಾದ ಕಲ್ಪನಾ ಸುಧಾಮ, ಉಡುಪಿ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಹರೀಶ್ ಕುಂದರ್, ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ದುರ್ಗಾಪ್ರಸಾದ್ ಹಾಗೂ ವಿವಿಧ ರೆಡಿಮಿಕ್ಸ್ ಘಟಕಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.