ಕೇಂದ್ರದ ಕಾರ್ಮಿಕ ಸಂಹಿತೆಗಳ ವಿರುದ್ದ ಜನಾಕ್ರೋಶ

KannadaprabhaNewsNetwork |  
Published : Feb 13, 2026, 01:30 AM IST
ದೊಡ್ಡಬಳ್ಳಾಪುರದಲ್ಲಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ಬೃಹತ್‌ ಬಹಿರಂಗ ಸಭೆ ನಡೆಯಿತು. ಕಾರ್ಮಿಕ ಸಂಘಟನೆಗಳ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಗುರುವಾರ ಕರೆ ನೀಡಿದ್ದ ಸಾರ್ವತ್ರಿಕ ಮುಷ್ಕರಕ್ಕೆ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ದೊಡ್ಡಬಳ್ಳಾಪುರ ನಗರದಲ್ಲಿ ಬೃಹತ್‌ ಪ್ರತಿಭಟನೆ, ಬಹಿರಂಗ ಸಭೆ ನಡೆಯಿತು

ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಗುರುವಾರ ಕರೆ ನೀಡಿದ್ದ ಸಾರ್ವತ್ರಿಕ ಮುಷ್ಕರಕ್ಕೆ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ದೊಡ್ಡಬಳ್ಳಾಪುರ ನಗರದಲ್ಲಿ ಬೃಹತ್‌ ಪ್ರತಿಭಟನೆ, ಬಹಿರಂಗ ಸಭೆ ನಡೆಯಿತು.

ಕೇಂದ್ರ ಸರ್ಕಾರ 4 ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು. ನರೇಗಾ ಮರು ಜಾರಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರ ನಡೆದಿದ್ದು, ಸಂಯುಕ್ತ ಕಿಸಾನ್ ಮೋರ್ಚಾ ಬೆಂಬಲದೊಂದಿಗೆ 10 ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಮುಷ್ಕರಕ್ಕೆ ಬೆಂಬಲ ಘೋಷಿಸಿದ್ದವು.

ದೊಡ್ಡಬಳ್ಳಾಪುರದಲ್ಲಿ ಬೃಹತ್‌ ಬೈಕ್‌ ರ್ಯಾಲಿ ನಡೆಸಿ, ಸಾರ್ವಜನಿಕರಲ್ಲಿ ಮುಷ್ಕರದ ಕುರಿತು ಅರಿವು ಮೂಡಿಸಲಾಯಿತು. ಕಾರ್ಮಿಕರ ಮುಷ್ಕರ ಬೆಂಬಲಿಸಿ ಇಲ್ಲಿನ ಕೈಗಾರಿಕಾ ಪ್ರದೇಶದ ಹಲವು ಕಾರ್ಖಾನೆಗಳು ಬಂದ್‌ ಆಗಿದ್ದವು.

ಸಿದ್ದಲಿಂಗಯ್ಯ ವೃತ್ತದಲ್ಲಿ ಬೃಹತ್‌ ಬಹಿರಂಗ ಸಭೆಯಲ್ಲಿ ಮಾತನಾಡಿದ ಮುಖಂಡರು, ಕೇಂದ್ರ ಸರ್ಕಾರದ ನಾಲ್ಕು ಕಾರ್ಮಿಕ ಸಂಹಿತೆಗಳು ಮಾಲೀಕರ ಮತ್ತು ಉಳ್ಳವರ ಸಂಹಿತೆಗಳಾಗಿವೆ. ನೂರಾರು ವರ್ಷ ಹೋರಾಟ ಮಾಡಿ ಪಡೆದ ಕಾರ್ಮಿಕ ಹಕ್ಕುಗಳನ್ನು ಇವು ನಿರಾಕರಿಸುತ್ತವೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರವು ದೇಶದ ಕಾರ್ಮಿಕರ ವಿರುದ್ಧ 4 ಕಾರ್ಮಿಕ ಮಸೂದೆಗಳನ್ನು ಜಾರಿಗೊಳಿಸಿದ್ದು ಕಾರ್ಮಿಕರಿಗೆ ಮಾರಕವಾದ ಈ ಮಸೂದೆಗಳನ್ನು ರದ್ದುಗೊಳಿಸಬೇಕು. ಬಡವರ ಜೀವನಧಾರವಾಗಿರುವ ನರೇಗಾ ಯೋಜನೆಯನ್ನು ಪುನರ್ ಸ್ಥಾಪಿಸಿ ವಿಬಿ ಜಿ ರಾಮ್ ಜಿ ಕಾಯ್ದೆ ಹಾಗೂ ಭೂ ಸ್ವಾಧೀನ ಕಾಯ್ದೆಯನ್ನು ಹಿಂಪಡೆಯಲು ಒತ್ತಾಯಿಸಿ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕಾರ್ಮಿಕರು ಮುಂದಾಗಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ಭೂಸುಧಾರಣಾ, ಜಾನುವಾರು ಸಂರಕ್ಷಣಾ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು. ದೇಶದ ವಿದ್ಯುಚ್ಛಕ್ತಿ ಖಾಸಗೀಕರಣ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನಿಲುವು ಬದಲಾಗಬೇಕು, ರೈತರಿಗೆ ಮಾರಕವಾಗಿರುವ ಬೀಜ ಮಸೂದೆ ಕಾಯ್ದೆಯನ್ನು ಹಿಂಪಡೆಯಬೇಕು, ವಿಮಾ ತಿದ್ದುಪಡಿ ಕಾಯ್ದೆ. ಶಾಂತಿ ಕಾಯ್ದೆರದ್ದುಗೊಳಿಸಿ ಕರ್ನಾಟಕ ಸರ್ಕಾರ ಕಾರ್ಮಿಕ ಸಂಹಿತೆಗಳಿಗೆ ಈಗ ತಂದಿರುವ ಗೆಜೆಟ್ ನೋಟಿಫಿಕೇಷನ್ ಅನ್ನು ವಾಪಸ್ಸು ಪಡೆಯಬೇಕು. ಮತ್ತು ಒಕ್ಕೂಟ ಸರ್ಕಾರ ತಂದಿರುವ ಜನವಿರೋಧಿ ಮಸೂದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಆರ್.ಚಂದ್ರತೇಜಸ್ವಿ, ಸಿಐಟಿಯು ಮುಖಂಡ ಪಿ.ಎ.ವೆಂಕಟೇಶ್, ಕನ್ನಡ ಪಕ್ಷದ ರಾಜ್ಯ ಮುಖಂಡ ಸಂಜೀವ್ ನಾಯಕ್, ಪ್ರಗತಿಪರ ಚಳವಳಿಗಾರ ಕಾರಳ್ಳಿ ಶ್ರೀನಿವಾಸ್, ಪ್ರಜಾ ವಿಮೋಚನಾ ಚಳುವಳಿ ಮುಖಂಡ ಗೂಳ್ಯ ಹನುಮಣ್ಣ, ಸಿಐಟಿಯು ಜಿಲ್ಲಾ ಖಜಾಂಚಿ ಎಚ್.ಎನ್.ಮೋಹನ್ ಬಾಬು, ಕೆಐಇಇಎಫ್ ಕಾರ್ಮಿಕ ಸಂಘದ ಮುಖಂಡ ಪ್ರಭಾಕರ್ ಎಂ.ಜೆ, ಶಿವಕುಮಾರ್ .ಹೆಚ್, ಎಐಟಿಯುಸಿ ಮುಖಂಡ ಒಟ್ಟು ಬಿಲ್ಜ್, ಮಂಜುನಾಥ್ ಎನ್, ಓಮಿನಿ, ಎಚ್.ಎಲ್ ಹೇಮಂತ್ ಕುಮಾರ್, ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷ ಶ್ರೀಕಾಂತ್, ಕರ್ನಾಟಕ ರಾಜ್ಯ ರೈತ ಸಂಘದ ಮುತ್ತೇಗೌಡ, ನಾರಾಯಣಪ್ಪ,ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಂಜಪ್ಪ, ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ ) ಹಮಾಮ್ ವೆಂಕಟೇಶ್, ಬಿರ್ಲಾ ಸೂಪರ್ ಕಾರ್ಮಿಕ ಸಂಘದ ಮುಖಂಡ ರೇಣುಕಾರಾಧ್ಯ, ಅನಿಲ್ ಗುಪ್ತ, ಬೀರೇಂದ್ರ ಗುಪ್ತ, ಎಆರ್ಡಿಯು ಆಟೋ ಚಾಲಕರ ಸಂಘದ ಅಧ್ಯಕ್ಷ ಸಾದಿಕ್ ಪಾಷಾ, ಶಿವರಾಜ್ ಕುಮಾರ್ ಸೇನಾ ಸಮಿತಿ ಅಧ್ಯಕ್ಷ ರಮೇಶ್, ಡಾ.ರಾಜಕುಮಾರ್ ಅಭಿಮಾನಿಗಳ ಸಂಘದ ಮಹದೇವಯ್ಯ, ಡಿಎಸ್ಎಸ್ ಸಂಚಾಲಕರಾದ ಸುರೇಶ್, ಕರ್ನಾಟಕ ಪ್ರಾಂತ ರೈತ ಸಂಘದ ಸಿ ಎಚ್ ರಾಮಕೃಷ್ಣಯ್ಯ, ಸದಾಶಿವಪ್ಪ, ಇಂಡೇನಾ ಇಂಡಿಯಾ ಕಾರ್ಮಿಕ ಸಂಘದ ವಿನಯ್ ಮತ್ತಿತರರು ಹಾಜರಿದ್ದರು.

12ಕೆಡಿಬಿಪಿ3-

ದೊಡ್ಡಬಳ್ಳಾಪುರದಲ್ಲಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ಬೃಹತ್‌ ಬಹಿರಂಗ ಸಭೆ ನಡೆಯಿತು. ಕಾರ್ಮಿಕ ಸಂಘಟನೆಗಳ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈತರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ
ಸಾರ್ವತ್ರಿಕ ಮುಷ್ಕರ: ತಿಪಟೂರಿನಲ್ಲಿ ಸ್ವಯಂ ಪ್ರೇರಿತ ಬಂದ್