ನಗರವನ್ನು ಸ್ವಚ್ಛಗೊಳಿಸಲು ಸಾರ್ವಜನಿಕರ ಸಹಕಾರ ಅಗತ್ಯ: ಪೌರಾಯುಕ್ತೆ ಗೀತಾ

KannadaprabhaNewsNetwork |  
Published : Jul 12, 2024, 01:30 AM IST
ಡೆಂಗುವಿನಿಂದ ಪಾರಾಗಲು ಸ್ವಚ್ಛತೆಯೊಂದೆ ಮಾರ್ಗ  | Kannada Prabha

ಸಾರಾಂಶ

ಪ್ರತಿ ಮನೆ ಮನೆಗೂ ಭೇಟಿ ನೀಡಿ ಸೊಳ್ಳೆಗಳು ಉತ್ಪತ್ತಿ ಆಗುವ ಪ್ರದೇಶಗಳನ್ನು ನಾಶಪಡಿಸುವ ಮತ್ತು ಅದರ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಮಾಡಲಾಗುತ್ತಿದೆ. ಖಾಲಿ ನಿವೇಶನಗಳಲ್ಲಿನ ಶುಭ್ರತೆಯನ್ನು ನಿವೇಶನದ ಯಜಮಾನರು ಸ್ವಚ್ಛ ಮಾಡಿಸಲು ಈಗಾಗಲೇ ಸೂಚಿಸಲಾಗಿದೆ. ಎಲ್ಲೆಡೆ ಡೆಂಘೀ ಮಹಾಮಾರಿ ವ್ಯಾಪಕವಾಗಿ ಹರಡುತ್ತಿದ್ದು, ತಾಲೂಕಿನಲ್ಲಿ 12 ಪ್ರಕರಣಗಳು ದಾಖಲಾಗಿವೆ, ಯಾವುದೇ ಸಾವು ಸಂಭವಿಸಿಲ್ಲ.

ಕನ್ನಡಪ್ರಭ ವಾರ್ತೆ ಗೌರಿಬಿದನೂರು

ಸುಂದರ ಹಾಗೂ ಸ್ವಚ್ಛ ನಗರವನ್ನಾಗಿಸಲು ನಗರದ ವಿವಿಧ ಉದ್ಯಾನವನಗಳ ಸ್ವಚ್ಛತಾ ಕಾರ್ಯವನ್ನು ನಗರಸಭೆಯಿಂದ ಗುರುವಾರ ಕೈಗೊಳ್ಳಲಾಗಿತ್ತು. ಈ ಕುರಿತು ಮಾತನಾಡಿದ ಪೌರಾಯುಕ್ತೆ ಡಿ.ಎಂ. ಗೀತ, ಸುಂದರ ಹಾಗೂ ಸ್ವಚ್ಛತೆ ನಗರವನ್ನಾಗಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದರು.

ನಗರದ ವಿವಿಧ ವಾರ್ಡ್ ಗಳಲ್ಲಿ ಮೂಲೆ ಗುಂಪಾಗಿದ್ದ ಉದ್ಯಾನವನಗಳ ಸ್ವಚ್ಛತಾ ಕಾರ್ಯವನ್ನು ನಗರಸಭೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಯಶಸ್ವಿ ಪಿಯು ಕಾಲೇಜುಗಳ ಎನ್ಸಿಸಿ, ಎನ್ಎಸ್ಎಸ್ ಮತ್ತು ಸ್ಕೌಟ್ಸ್, ಗೈಡ್ಸ್ ನ ಸಹಯೋಗದೊಂದಿಗೆ ಸುಮಾರು 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯದಲ್ಲಿ ಕೈಗೊಂಡಿದ್ದರು. ಹಂತ ಹಂತವಾಗಿ ನಗರದಲ್ಲಿನ ಎಲ್ಲಾ ಉದ್ಯಾನವನಗಳನ್ನು ಸ್ವಚ್ಛಗೊಳಿಸಿ, 4000 ಕ್ಕೂ ಹೆಚ್ಚು ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಪ್ರತಿ ಮನೆ ಮನೆಗೂ ಭೇಟಿ ನೀಡಿ ಸೊಳ್ಳೆಗಳು ಉತ್ಪತ್ತಿ ಆಗುವ ಪ್ರದೇಶಗಳನ್ನು ನಾಶಪಡಿಸುವ ಮತ್ತು ಅದರ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಮಾಡಲಾಗುತ್ತಿದೆ. ಖಾಲಿ ನಿವೇಶನಗಳಲ್ಲಿನ ಶುಭ್ರತೆಯನ್ನು ನಿವೇಶನದ ಯಜಮಾನರು ಸ್ವಚ್ಛ ಮಾಡಿಸಲು ಈಗಾಗಲೇ ಸೂಚಿಸಲಾಗಿದೆ. ಎಲ್ಲೆಡೆ ಡೆಂಘೀ ಮಹಾಮಾರಿ ವ್ಯಾಪಕವಾಗಿ ಹರಡುತ್ತಿದ್ದು, ತಾಲೂಕಿನಲ್ಲಿ 12 ಪ್ರಕರಣಗಳು ದಾಖಲಾಗಿವೆ, ಯಾವುದೇ ಸಾವು ಸಂಭವಿಸಿಲ್ಲ ಎಂದು ತಿಳಿಸಿದರು.

ಆರೋಗ್ಯ ನಿರೀಕ್ಷಕರಾದ ನವೀನ್, ರೂಪ, ಶ್ವೇತ, ಶಿಕ್ಷಕ ಗಿರಿಧರ್, ನಗರ ಸಭೆ ಸದಸ್ಯೆ ಮೊಮೀನ್ ತಾಜ್ ಮುಂತಾದವರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!