ಪಾಲಿಕೆ ಆಯುಕ್ತರ ಪ್ರತಿಕೃತಿ ದಹಿಸಿ ಪೌರಕಾರ್ಮಿಕರ ಆಕ್ರೋಶ

KannadaprabhaNewsNetwork |  
Published : Dec 28, 2024, 12:46 AM IST
ಪೌರಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಸ್ಪಂಧಿಸದ ನಡೆ ಖಂಡಿಸಿ ಹು-ಧಾ ಮಹಾನಗರ ಪಾಲಿಕೆ ಆಯುಕ್ತರ ಪ್ರತಿಕೃತಿ ದಹಿಸಿ ಪೌರಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು. | Kannada Prabha

ಸಾರಾಂಶ

ಕಳೆದ 17 ದಿನಗಳಿಂದ ನೇರ ನೇಮಕಾತಿ, ನೇರ ವೇತನ ಪಾವತಿ ಹಾಗೂ ವಿವಿಧ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಹೋರಾಟಕ್ಕೆ ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು ಸ್ಪಂದಿಸುತ್ತಿಲ್ಲ.

ಹುಬ್ಬಳ್ಳಿ:

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ಎದುರು ಪೌರಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಧರಣಿ ಶುಕ್ರವಾರ 17ನೇ ದಿನಕ್ಕೆ ಕಾಲಿಟ್ಟಿದೆ. ಧರಣಿ ನಿರತರು ಪಾಲಿಕೆ ಆಯುಕ್ತರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ 17 ದಿನಗಳಿಂದ ನೇರ ನೇಮಕಾತಿ, ನೇರ ವೇತನ ಪಾವತಿ ಹಾಗೂ ವಿವಿಧ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಹೋರಾಟಕ್ಕೆ ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು ಸ್ಪಂದಿಸುತ್ತಿಲ್ಲ. ಸರ್ಕಾರದ ಆದೇಶದಂತೆ ನೇರ ನೇಮಕಾತಿ ಆದೇಶ ಪತ್ರಗಳನ್ನು ನೀಡದೇ ವಂಚಿಸುತ್ತಿದ್ದಾರೆ. ಸರ್ಕಾರ ಆದೇಶವನ್ನು ಧಿಕ್ಕರಿಸಿ ಕಾನೂನು ಬಾಹಿರವಾಗಿ ಗುತ್ತಿಗೆ ಮುಂದುವರಿಸಿದ್ದಾರೆ. ಪಾಲಿಕೆ ಠರಾವು ಅನ್ವಯ ಕನಿಷ್ಠ ವೇತನ ವ್ಯತ್ಯಾಸದ ಬಾಕಿ ₹ 9 ಕೋಟಿ ಪಾವತಿಸಬೇಕು. ಪಾಲಿಕೆ ಆಯುಕ್ತರ ಆದೇಶದಂತೆ 868 ಮಹಿಳಾ ಪೌರಕಾರ್ಮಿಕರಿಗೆ ತಲಾ ₹2500 ರಂತೆ ಒಟ್ಟು ₹ 21.70 ಲಕ್ಷ ಪಾವತಿಸಬೇಕು. ತುಟ್ಟಿಭತ್ಯೆ ಬಾಕಿ ಮೊತ್ತ ₹ 2 ಕೋಟಿ ಪಾವತಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಯಿತು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಡಾ. ವಿಜಯ ಗುಂಟ್ರಾಳ, ಸಾತಪ್ಪ ಉಳ್ಳಿಕಾಶಿ, ತಾಯಪ್ಪ ಯಮನಾಳ, ಸುಮಿತ್ರಾ ಹೊಸಹಳ್ಳಿ, ಸುನೀಲ ದೊಡ್ಡಮನಿ, ಶರೀಫ್ ಮಸರಕಲ್, ದತಪ್ಪ ಆಪುಸಪೇಟ್, ಪ್ರೇಮಾ ಕಣೆಕಲ್, ರಾಜು ನಾಗರಾಳ, ಗಾಳೆಪ್ಪ ದ್ವಾಸಲಕೇರಿ, ಸುನೀಲ್ ಪಾಟೀಲ, ನಾಗೇಶ ಚುರಮುರಿ ಸೇರಿದಂತೆ ನೂರಾರು ಪೌರಕಾರ್ಮಿಕರು ಪಾಲ್ಗೊಂಡಿದ್ದರು. ಧರಣಿ ನಿರತ ಮಹಿಳೆ ಅಸ್ವಸ್ಥ:

ಪಾಲಿಕೆ ಎದುರು ಪೌರಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಧರಣಿ ನಿರತ ಪೌರಕಾರ್ಮಿಕಳೋರ್ವಳು ಶುಕ್ರವಾರ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ನಗರದ ಚಿಟಗುಪ್ಪಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಮಲಾ ಆಲೂರ ಅಸ್ವಸ್ಥಳಾದ ಮಹಿಳಾ ಪೌರಕಾರ್ಮಿಕಳು. ಈಗ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಯಕತ್ವ ಗೊಂದಲ ಮಧ್ಯೆ 13 ಕೈ ಶಾಸಕರು ವಿದೇಶಕ್ಕೆ :
ವಿದ್ಯಾರ್ಥಿಗಳ ಗೋಳು, ಕೇಳೋರು ಯಾರು?