ಪರಿಹಾರ ನೀಡಿದರೇ ಮಾತ್ರ ಜನಸೇವೆ ಯಶಸ್ವಿ: ಯಶ್‌ಪಾಲ್ ಸುವರ್ಣ

KannadaprabhaNewsNetwork |  
Published : Oct 18, 2026, 03:15 AM IST
ಗ್ರಾಪಂನ ಫಲಾನುಭವಿಗಳಿಗೆ ವಿವಿಧ ಸವತ್ತುಗಳನ್ನು ವಿತರಿಸಲಾಯಿತು | Kannada Prabha

ಸಾರಾಂಶ

ಸರ್ಕಾರದ ಪ್ರಜಾಸೇವಾ ಆಂದೋಲನ ಸಭೆ, ಜನರ ಕುಂದುಕೊರತೆ, ಅಹವಾಲು, ಸಮಸ್ಯೆಗಳಿಗೆ ಸಕಾರಾತ್ಮಕ ಪರಿಹಾರ ನೀಡಿದರೇ ಮಾತ್ರ ಯಶಸ್ವಿಯಾಗುತ್ತವೆ, ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಾರ್ಯಪ್ರವೃತ್ತರಾಗೋಣ ಎಂದು ಉಡುಪಿ ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು.

ಬ್ರಹ್ಮಾವರ ; ಸರ್ಕಾರದ ಪ್ರಜಾಸೇವಾ ಆಂದೋಲನ ಸಭೆ, ಜನರ ಕುಂದುಕೊರತೆ, ಅಹವಾಲು, ಸಮಸ್ಯೆಗಳಿಗೆ ಸಕಾರಾತ್ಮಕ ಪರಿಹಾರ ನೀಡಿದರೇ ಮಾತ್ರ ಯಶಸ್ವಿಯಾಗುತ್ತವೆ, ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಾರ್ಯಪ್ರವೃತ್ತರಾಗೋಣ ಎಂದು ಉಡುಪಿ ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು.

ಅವರು ಶನಿವಾರ ಉಪ್ಪೂರು ಗ್ರಾಮದ ಕೊಳಲಗಿರಿ ಸೇಕ್ರೆಡ್ ಹಾರ್ಟ್ ಚರ್ಚಿನ ಸೌಹಾರ್ದ ಸಭಾಭವನದಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಉಡುಪಿಯ ಜನರು ಸಮಸ್ಯೆ ಬಂದಾಗ ನೇರವಾಗಿ ಜನಪ್ರತಿನಿಧಿಗಳು ಅಥವಾ ಅಧಿಕಾರಿಗಳಲ್ಲಿ ತೆರಳಿ ಪರಿಹಾರ ಮಾಡಿಕೊಂಡು ಬರುತ್ತಾರೆ. ಜಿಲ್ಲೆಯು ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಮುಂದೆ ಇರಲು ಇದೂ ಒಂದು ಕಾರಣ ಎಂದ ಅವರು, ಪ್ರಸ್ತುತ ವಿವಿಧ ಇಲಾಖೆಗಳಲ್ಲಿರುವ ಸಿಬ್ಬಂದಿಗಳ ಕೊರತೆಯನ್ನು ಭರ್ತಿ ಮಾಡಿದರೇ ಜನರ ಸೇವೆಗೆ ಇನ್ನಷ್ಟು ಅನುಕೂಲವಾಗುತ್ತದೆ ಎಂದರು.

ಜನಸೇವೆಗೆ ಅವಕಾಶ: ಬ್ರಹ್ಮಾವರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷೆ ಡಾ. ಸುನೀತಾ ಶೆಟ್ಟಿ ಮಾತನಾಡಿ, ಪ್ರಜಾಸೇವಾ ಆಂದೋಲನ ಜನರ ಸೇವೆ ಮಾಡಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಒಂದು ಉತ್ತಮ ಅವಕಾಶವಾಗಿದೆ, ಇದನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹಾರೈಸಿದರು.

ಇದೇ ಸಂದರ್ಭದಲ್ಲಿ ಉಪ್ಪೂರು ಗ್ರಾಪಂನ ಶೇ. 25 ರ ಅನುದಾನದ ಸವಲತ್ತುಗಳನ್ನು ವಿತರಿಸಲಾಯಿತು. ಸಭೆಯಲ್ಲಿ ಜನರು ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 43 ಅಹವಾಲುಗಳನ್ನು ಸಲ್ಲಿಸಿದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ಎಡಿಸಿ ಅಬೀದ್ ಗದ್ಯಾಳ್, ಜಿಪಂ ಉಪ ಕಾರ್ಯದರ್ಶಿ ಎಸ್.ಎಸ್.ಕಾದ್ರೊಳ್ಳಿ, ಸಹಾಯಕ ಕಮೀಷನರ್ ರಶ್ಮಿ ಎಸ್.ಆರ್., ಉಪ್ಪೂರು ಗ್ರಾಪಂ ಆಡಳಿತಾಧಿಕಾರಿ ಸುಧೀರ್ ಕುಮಾರ್ ಕೆ. ಮತ್ತಿತರರು ಉಪಸ್ಥಿತರಿದ್ದರು. ಉಪ್ಪೂರು ಪಿಡಿಓ ಸಿದ್ದೇಶ್ ಸ್ವಾಗತಿಸಿ, ಬ್ರಹ್ಮಾವರ ತಾಪಂ ಸಹಾಯಕ ನಿರ್ದೇಶಕ ಮಹೇಶ್ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಯಾನ್ಸರ್ ಗೆ ಭಯಪಡದೆ ತಪಾಸಣೆ ಮಾಡಿಸಿಕೊಳ್ಳಿ : ಡಾ. ಅನುಷಾ
ಪದವಿ ಜೀವನದ ಮಹತ್ತರವಾದ ಕಾಲಘಟ್ಟ‌: ಡಾ. ಪ್ರಮೋದ್ ಕುಮಾರ್