ಸಾರ್ವಜನಿಕ ಸೇವೆಯೇ ಎನ್ಎಸ್ಎಸ್ ಮೂಲ ಉದ್ದೇಶ: ಡಾ.ಎ.ಟಿ.ಶಿವರಾಮು

KannadaprabhaNewsNetwork | Published : Jul 9, 2024 12:47 AM

ಸಾರಾಂಶ

ವಿದ್ಯಾರ್ಥಿಗಳನ್ನು ವ್ಯಕ್ತಿತ್ವ ವಿಕಸನದೊಂದಿಗೆ ಸಾರ್ವಜನಿಕ ಸೇವೆಗೆ ಪ್ರೇರೇಪಣೆ ನೀಡುವುದೇ ಎನ್‌ಎಸ್‌ಎಸ್‌ನ ಮೂಲ ಉದ್ದೇಶವಾಗಿದೆ. ಸ್ವಚ್ಛತೆ, ಆರೋಗ್ಯ ಹಾಗೂ ಗ್ರಾಮ ನೈರ್ಮಲ್ಯವೇ ಪ್ರಮುಖ ಧ್ಯೇಯವುಳ್ಳ ರಾಷ್ಟ್ರೀಯ ಸೇವಾ ಯೋಜನೆಯ ಚಿಹ್ನೆಯು ಕೊನಾರ್ಕ್ ದೇವಾಲಯದ ರಥ ಚಕ್ರದ ಗುರುತಾಗಿದೆ. ಸದಾ ಚಲನಶೀಲವಾಗಿರುವುದೇ ಇದರ ಘೋಷವಾಕ್ಯ.

ಕನ್ನಡಪ್ರಭ ವಾರ್ತೆ ನಾಗಮಂಗಲ

ವಿದ್ಯಾರ್ಥಿಗಳನ್ನು ವ್ಯಕ್ತಿತ್ವ ವಿಕಸನದೊಂದಿಗೆ ಸಾರ್ವಜನಿಕ ಸೇವೆಗೆ ಪ್ರೇರೇಪಣೆ ನೀಡುವುದೇ ಎನ್‌ಎಸ್‌ಎಸ್‌ನ ಮೂಲ ಉದ್ದೇಶವಾಗಿದೆ ಎಂದು ಆದಿಚುಂಚನಗಿರಿ ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಚಾಲಕ ಡಾ. ಎ.ಟಿ.ಶಿವರಾಮು ಹೇಳಿದರು.

ತಾಲೂಕಿನ ಬ್ರಹ್ಮದೇವರಹಳ್ಳಿಯಲ್ಲಿ ಆದಿಚುಂಚನಗಿರಿ ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ಆಯೋಜಿಸಿದ್ದ ಒಂದು ದಿನದ ವಿಶೇಷ ಶ್ರಮದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಸ್ವಚ್ಛತೆ, ಆರೋಗ್ಯ ಹಾಗೂ ಗ್ರಾಮ ನೈರ್ಮಲ್ಯವೇ ಪ್ರಮುಖ ಧ್ಯೇಯವುಳ್ಳ ರಾಷ್ಟ್ರೀಯ ಸೇವಾ ಯೋಜನೆಯ ಚಿಹ್ನೆಯು ಕೊನಾರ್ಕ್ ದೇವಾಲಯದ ರಥ ಚಕ್ರದ ಗುರುತಾಗಿದೆ. ಸದಾ ಚಲನಶೀಲವಾಗಿರುವುದೇ ಇದರ ಘೋಷವಾಕ್ಯ ಎಂದರು.

ವಿದ್ಯಾರ್ಥಿಗಳು ಶಿಬಿರಗಳಲ್ಲಿ ಸ್ವಯಂ ಪ್ರೇರಿತವಾಗಿ ಭಾಗವಹಿಸಲು ಪ್ರೇರೇಪಿಸುವುದೇ ಸಂಸ್ಥೆಯ ಮೂಲ ತತ್ವವಾಗಿದೆ. ಲೋಕ ಸೇವೆಯ ಮೂಲಕ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಸಹಕರಿಸುವ ಯುವ ಪೀಳಿಗೆಯನ್ನು ಸಜ್ಜು ಗೊಳಿಸಬೇಕಾಗಿದೆ. ಯುವಕರು ಸೇವಾ ಮನೋಭಾವವನ್ನು ರೂಢಿಸಿಕೊಂಡು ಸಮಾಜದ ಪ್ರಗತಿಗೆ ಪಾತ್ರರಾಗಬೇಕು ಎಂದರು.

ಗ್ರಾಪಂ ಪಿಡಿಒ ಶಿವಲಿಂಗೇಗೌಡ ಮಾತನಾಡಿ, ಪ್ರಸ್ತುತ ಉಲ್ಬಣಿಸುತ್ತಿರುವ ಡೆಂಘೀ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ಖಾಯಿಲೆಗಳಿಗೆ ಸಿಲುಕದಿರಲು ಸ್ವಚ್ಛತೆಗೆ ಪ್ರಾಮುಖ್ಯತೆ ನೀಡುವ ಜೊತೆಗೆ ತ್ಯಾಜ್ಯ ವಸ್ತುಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಬೇಕು ಎಂದರು.

ನೂರಾರು ಮಂದಿ ಸ್ವಯಂ ಸೇವಕರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ, ದೇವಾಲಯಗಳು, ಶಾಲಾ ಆವರಣ ಹಾಗೂ ಗ್ರಾಮದ ಬೀದಿಗಳನ್ನು ಸ್ವಚ್ಛಗೊಳಿಸಿ ಶಿಬಿರವನ್ನು ಯಶಸ್ವಿಗೊಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಪಂ ಗ್ರೇಡ್-1 ಕಾರ್ಯದರ್ಶಿ ಆರ್.ಶೋಭಾ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳಾದ ಸಿ.ಎಲ್. ಶಿವಣ್ಣ, ಎಸ್.ಕಾಂತರಾಜು, ಡಾ.ವಿಜಯ್ ಹೂಗಾರ್, ಬಿ.ಎನ್.ರವೀಂದ್ರ, ರಾಜಶೇಖರ್, ಸಾರ್ವಜನಿಕ ಸಂಪರ್ಕಾಧಿಕಾರಿ ಧಮೇಂದ್ರ ಸೇರಿದಂತೆ ಆದಿಚುಂಚನಗಿರಿ ವಿಶ್ವವಿದ್ಯಾನಿಲಯದ ಸ್ವಯಂ ಸೇವಕರು ಮತ್ತು ಬ್ರಹ್ಮದೇವರಹಳ್ಳಿ ಗ್ರಾಮಸ್ಥರು ಇದ್ದರು.ಕುಡಿಯಲು, ಕೆರೆ, ಕಟ್ಟೆಗಳಿಗಾಗಿ 15 ದಿನಗಳ ಕಾಲ ನಾಲೆಗಳಿಗೆ ನೀರು

ಮಂಡ್ಯ:ಕೃಷ್ಣರಾಜಸಾಗರ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಜನ-ಜಾನುವಾರುಗಳು ಕುಡಿಯಲು ಹಾಗೂ ಕೆರೆ-ಕಟ್ಟೆಗಳನ್ನು ತುಂಬಿಸಲು ಜುಲೈ 8 ರಿಂದ 15 ದಿನಗಳ ಕಾಲ ನಾಲೆಗಳಿಗೆ ನೀರು ಹರಿಸಲಾಗುತ್ತಿದೆ.

ಕೃಷ್ಣರಾಜಸಾಗರ ಜಲಾಶಯದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಹಾಗೂ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಜುಲೈ 6 ರಂದು ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಅಣೆಕಟ್ಟೆಯಿಂದ ನೀರು ಬಿಡಲಾಗುತ್ತಿದೆ.ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಹಾಗೂ ಜಲಾಶಯಕ್ಕೆ ಹರಿದು ಬರುವ ಒಳಹರಿವನ್ನು ಪರಿಗಣಿಸಿ ಬೆಳೆಗಳಿಗೆ ನೀರು ಹರಿಸುವ ಸಂಬಂಧ ಮತ್ತೊಂದು ಸಭೆ ಕರೆದು ನಿರ್ಣಯಿಸಲಾಗುವುದು.ಎಂದು ಮಂಡ್ಯ ಕೃಷ್ಣರಾಜಸಾಗರ ಆಧುನೀಕರಣ ಮತ್ತು ಮಧ್ಯಮ, ನೀರಾವರಿ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

Share this article