ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಪ್ರಜಾಸೇವೆ ಆಂದೋಲನ

KannadaprabhaNewsNetwork |  
Published : Nov 08, 2026, 01:30 AM IST
ಕೆ ಕೆ ಪಿ ಸುದ್ದಿ 01: ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಪ್ರಜಾ ಸವಾ ಆಆಂದೋಲನದಲ್ಲಿ ಸಚಿವ ಬಾಲಕೃಷ್ಣ ಸಾರ್ವಜನಿಕರಿಂದ ಅಹವಾಲು ಗಳನ್ನು ಸ್ವೀಕರಿಸಿದರು.  | Kannada Prabha

ಸಾರಾಂಶ

ಕನಕಪುರ: ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಎಂಬ ಧ್ಯೇಯದೊಂದಿಗೆ ಸಾರ್ವಜನಿಕರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವ ಉತ್ತರದಾಯಿತ್ವ ಕಾರ್ಯಕ್ರಮವೇ ಪ್ರಜಾ ಸೇವಾ ಆಂದೋಲನ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಬಾಲಕೃಷ್ಣ ಹೇಳಿದರು

ಕನಕಪುರ: ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಎಂಬ ಧ್ಯೇಯದೊಂದಿಗೆ ಸಾರ್ವಜನಿಕರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವ ಉತ್ತರದಾಯಿತ್ವ ಕಾರ್ಯಕ್ರಮವೇ ಪ್ರಜಾ ಸೇವಾ ಆಂದೋಲನ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಬಾಲಕೃಷ್ಣ ಹೇಳಿದರು.

ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಮುಖ್ಯಮಂತ್ರಿಗಳ ಕನಸಿನ, ದೂರದೃಷ್ಟಿ, ಅಭಿವೃದ್ಧಿ ಚಿಂತನೆಯುಳ್ಳ ಯೋಜನೆ ಪ್ರಜಾಸೇವಾ ಆಂದೋಲನ ನಿರಂತರ ಕಾರ್ಯಕ್ರಮ. ಸಭೆಯಲ್ಲಿ ಸಲ್ಲಿಸುವ ಅಹವಾಲು ಕಾನೂನು ವ್ಯಾಪ್ತಿಯೊಳಗಿದ್ದರೆ ಕೂಡಲೇ ಪರಿಹಾರ ಹಾಗೂ ಕಾನೂನು ವ್ಯಾಪ್ತಿಯ ಹೊರಗಿದ್ದರೆ, ಮುಂದೇನು ಮಾಡಬೇಕೆಂದು ಮಾರ್ಗದರ್ಶನ ನೀಡುವ ಕಾರ್ಯಕ್ರಮ ಇದಾಗಿದೆ. ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವುದು ಕಾರ್ಯಕ್ರಮದ ಉದ್ದೇಶ. ಜನರಲ್ಲಿ ಆತ್ಮವಿಶ್ವಾಸ ಮೂಡಿಸುವುದು ಪ್ರಜಾಸೇವಾ ಇಲಾಖೆ ಗುರಿ ಎಂದರು.

ಪ್ರತಿ ತಿಂಗಳ ಮೊದಲ, ಮೂರನೇ ಶನಿವಾರ ತಾಲೂಕು ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಉಪಸ್ಥಿತಿಯಲ್ಲಿ ಹಾಗೂ ಎರಡು, ನಾಲ್ಕನೇ ಶನಿವಾರ ಹೋಬಳಿ ಮಟ್ಟದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಅರ್ಜಿಗಳಿಗೆ ಕೈಗೊಂಡ ಕ್ರಮಗಳ ಕುರಿತು ಮುಂದಿನ ಪ್ರಜಾಸೇವಾ ಆಂದೋಲನಾ ಸಭೆಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಜನರಿಗೆ ತಿಳಿಸಬೇಕು ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಂಜುನಾಥ್ ಮಾತನಾಡಿ, ಕನಕಪುರದ ಪ್ರಜಾಸೇವಾ ಆಂದೋಲನದಲ್ಲಿ ಬಹುತೇಕ ಕಂದಾಯ ಇಲಾಖೆಗೆ ಸೇರಿದ ಸಮಸ್ಯೆಗಳ ಪರಿಹಾರಕ್ಕೆ ಅಹವಾಲು ಸಲ್ಲಿಸಲಾಗಿದೆ. ಪಿಂಚಣಿ, ದರಖಾಸ್ತು ಪೋಡಿ, ಪಹಣಿ ತಿದ್ದುಪಡಿಯಂತಹ ಹಾಗೂ ಹೊಸ ಜಮೀನಿಗೆ ಅರ್ಜಿಗಳು ಬಂದಿವೆ. ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇದ್ದಾಗ್ಯೂ ಸಾರ್ವಜನಿಕರ ಸಮಸ್ಯೆಗಳ ನಿವಾರಣೆಗೆ ಕ್ರಮ ವಹಿಸಲಾಗಿದೆ. ಮೇವಿನ ಕೊರತೆಯಾಗದಂತೆ ಪಶುಪಾಲನಾ ಇಲಾಖೆಯಿಂದ 2500 ಮೇವು ಕಿಟ್‌ಗಳನ್ನು ವಿತರಿಸಲಾಗಿದೆ. ಕಾಟಾಚಾರಕ್ಕೆ ಕಾರ್ಯಕ್ರಮ ಮಾಡದೇ, ಮುತುವರ್ಜಿಯಿಂದ ಸಮಸ್ಯೆಗೆ ಪರಿಹಾರ ನೀಡಬೇಕು. ಬಹುತೇಕ ಅಧಿಕಾರಿಗಳು ಜಿಲ್ಲಾ ಕೇಂದ್ರದವರೇ ಆಗಿರುವುದರಿಂದ ಸ್ವಂತ ಜಿಲ್ಲೆಯಲ್ಲಿ ಸೇವೆ ಮಾಡುವ ಭಾಗ್ಯ ಸಿಕ್ಕಿದೆ. ಇದನ್ನು ಸದ್ಬಲಸಿಕೊಂಡು ಕರ್ತವ್ಯ ನಿರ್ವಹಿಸಿ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದರು.

ಕೆ ಕೆ ಪಿ ಸುದ್ದಿ 01:

ಕನಕಪುರದ ಅಂಬೇಡ್ಕರ್ ಭವನದಲ್ಲಿ ಪ್ರಜಾಸೇವಾ ಆಂದೋಲನದಲ್ಲಿ ಸಚಿವ ಬಾಲಕೃಷ್ಣ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಂಜುನಾಥ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕವಿ ಹೃದಯದ ಡಾ.ಚೆನ್ನಬಸವ ಶ್ರೀಗಳು: ತೋಂಟದಾರ್ಯ ಶ್ರೀ
ಶಿರಗುಪ್ಪಿ ಕಾರ್ಖಾನೆಯಿಂದ ₹4,000 ದರ ಘೋಷಣೆ