ಹೊಸಕೋಟೆಯಲ್ಲಿ ಲೋಕೋಪಯೋಗಿ ಕಟ್ಟಡ ಉದ್ಘಾಟನೆ

KannadaprabhaNewsNetwork |  
Published : Oct 11, 2025, 01:00 AM IST
ಫೋಟೋ : 10 ಹೆಚ್‌ಎಸ್‌ಕೆ 1 ಮತ್ತು 2 1: ಹೊಸಕೋಟೆ ನಗರದ ಕೆಆರ್ ಬಡಾವಣೆಯಲ್ಲಿ ಎರಡು ಕೋಟಿ ರೂ ವೆಚ್ಚದ ಲೋಕೋಪಯೋಗಿ ಇಲಾಖೆಯ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮವನ್ನು ಶಾಸಕ ಶರತ್ ಬಚ್ಚೇಗೌಡ ಉದ್ಘಾಟಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ಲೋಕೋಪಯೋಗಿ ಇಲಾಖೆ ತಾಲೂಕಿನಲ್ಲಿ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಶಾಸಕ ಶರತ್‌ ಬಚ್ಚೇಗೌಡ ಹೇಳಿದರು.

ಹೊಸಕೋಟೆ: ಲೋಕೋಪಯೋಗಿ ಇಲಾಖೆ ತಾಲೂಕಿನಲ್ಲಿ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಶಾಸಕ ಶರತ್‌ ಬಚ್ಚೇಗೌಡ ಹೇಳಿದರು.

ನಗರದ ಕೆಆರ್ ಬಡಾವಣೆಯ ಬೆಸ್ಕಾಂ ಕಚೇರಿ ಮುಂದೆ 2 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಲೋಕೋಪಯೋಗಿ ಇಲಾಖೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಮುಖ ರಸ್ತೆಗಳನ್ನು 100 ಕೋಟಿಗಳಿಗೂ ಅಧಿಕ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಹೊಸಕೋಟೆಯಲ್ಲಿ ಲೋಕೋಪಯೋಗಿ ಇಲಾಖೆ ಕಚೇರಿಗೆ ನನ್ನ ಅವಧಿಯಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸುವುದು ನನ್ನ ಗುರಿಯಾಗಿದೆ. ಗುದ್ದಲಿಪೂಜೆ ಮಾಡಿದ 6ರಿಂದ 7 ತಿಂಗಳ ಒಳಗೆ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮುಗಿಸಿ ಉದ್ಘಾಟಿಸುತ್ತಿರುವುದು ಪ್ರಶಂಸನೀಯ ಎಂದು ಗುತ್ತಿಗೆದಾರ ಗೋಪಾಲಗೌಡರಿಗೆ ಅಭಿನಂದನೆ ಸಲ್ಲಿಸಿದರು.

ಈ ವೇಳೆ ಲೋಕೋಪಯೋಗಿ ಇಲಾಖೆಯ ಇಇ ಚಂದ್ರಶೇಖರ್, ಎಇಇ ಪ್ರಕಾಶ್, ಟೌನ್ ಕಾಂಗ್ರೆಸ್ ಅಧ್ಯಕ್ಷ ಬಿವಿ ಬೈರೇಗೌಡ, ಬಿಎಂಆರ್‌ಡಿಎ ಅಧ್ಯಕ್ಷ ಕೇಶವಮೂರ್ತಿ, ಸದಸ್ಯ ಡಾ.ಎಚ್.ಎಂ.ಸುಬ್ಬರಾಜು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಬಚ್ಚೇಗೌಡ, ಗುತ್ತಿಗೆದಾರ ಗೋಪಾಲಗೌಡ, ಯುವ ಮುಖಂಡ ಬಿಜಿ ನಾರಾಯಣಗೌಡ, ದೊಡ್ಮನೆ ಅರುಣ್ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.

10 ಹೆಚ್‌ಎಸ್‌ಕೆ 1

ಹೊಸಕೋಟೆಯ ಕೆಆರ್ ಬಡಾವಣೆಯಲ್ಲಿ ಲೋಕೋಪಯೋಗಿ ಇಲಾಖೆಯ ನೂತನ ಕಟ್ಟಡವನ್ನು ಶಾಸಕ ಶರತ್ ಬಚ್ಚೇಗೌಡ ಉದ್ಘಾಟಿಸಿದರು. ಇಲಾಖೆಯ ಇಇ ಚಂದ್ರಶೇಖರ್, ಎಇಇ ಪ್ರಕಾಶ್, ಟೌನ್ ಕಾಂಗ್ರೆಸ್ ಅಧ್ಯಕ್ಷ ಬಿವಿ ಬೈರೇಗೌಡ, ಬಿಎಂಆರ್‌ಡಿಎ ಅಧ್ಯಕ್ಷ ಕೇಶವಮೂರ್ತಿ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಏಕತಾ ಮಹಲ್‌’ ಬಗ್ಗೆ ಯದುವೀರ್‌, ಪ್ರಮೋದಾದೇವಿ ವೈರುಧ್ಯದ ನಡೆ
ವಿಷ್ಣು ಆಚಾರಿ ಸೇರಿ ಹಲವರಿಗೆ ಯಕ್ಷಗಾನ ಅಕಾಡೆಮಿ ಪ್ರಶಸ್ತಿ