ಸಂಘಟನೆಗಳಿಗೆ ಪ್ರಚಾರವೇ ಮುಖ್ಯವಾಗಬಾರದು

KannadaprabhaNewsNetwork |  
Published : Nov 02, 2026, 02:30 AM IST
1ಎಚ್ಎಸ್ಎನ್10 : 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರವೇ ಸಿಂಹ ಸೇನೆಯ ಪದಾಧಿಕಾರಿಗಳಿಗೆ  ಅವರು ಸಂಘಟನೆಯ ಗುರುತಿನ ಟಿ-ಶರ್ಟ್‌ಗಳನ್ನು ವಿತರಿಸಿ ಶುಭಾಶಯ ಕೋರಿದರು.   | Kannada Prabha

ಸಾರಾಂಶ

ತಾಲೂಕಿನಲ್ಲಿ ಕುಡಿಯುವ ನೀರು, ರಸ್ತೆ ಮತ್ತು ಚರಂಡಿ ಅವ್ಯವಸ್ಥೆ, ಕಳಪೆ ಕಾಮಗಾರಿಗಳು ಸೇರಿದಂತೆ ಹಲವಾರು ಜ್ವಲಂತ ಸಮಸ್ಯೆಗಳಿದ್ದು, ಇವುಗಳ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನ ಸೆಳೆಯುವ ಕೆಲಸವನ್ನು ಸಂಘಟನೆಯ ಪದಾಧಿಕಾರಿಗಳು ಮಾಡಬೇಕು. ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳನ್ನು ಎಚ್ಚರಿಸುವುದರ ಜೊತೆಗೆ ಅಭಿವೃದ್ಧಿ ಕಾರ್ಯಗಳು ಗುಣಮಟ್ಟದಿಂದ ನಡೆಯುವಂತೆ ನಿಗಾ ವಹಿಸಬೇಕು. ಕರವೇ ಸಿಂಹ ಸೇನೆಯು ಉತ್ತಮ ಮಾರ್ಗದಲ್ಲಿ ಮುನ್ನಡೆಯುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿ ಎಂದು ಹಾರೈಸಿದರು.

ಕನ್ನಡಪ್ರಭ ವಾರ್ತೆ ಬೇಲೂರು

ಸಂಘಟನೆಗಳು ಕೇವಲ ನಾಮಫಲಕಕ್ಕೆ ಸೀಮಿತವಾಗದೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಜನಪರವಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ನಮ್ಮ ನಾಡು, ನುಡಿ ಹಾಗೂ ನೆಲದ ಹಿತ ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ಶಿವರಾಜ್ ಹೇಳಿದರು.

71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರವೇ ಸಿಂಹ ಸೇನೆಯ ಪದಾಧಿಕಾರಿಗಳಿಗೆ ಸಂಘಟನೆಯ ಗುರುತಿನ ಟಿ-ಶರ್ಟ್‌ಗಳನ್ನು ವಿತರಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಕುಡಿಯುವ ನೀರು, ರಸ್ತೆ ಮತ್ತು ಚರಂಡಿ ಅವ್ಯವಸ್ಥೆ, ಕಳಪೆ ಕಾಮಗಾರಿಗಳು ಸೇರಿದಂತೆ ಹಲವಾರು ಜ್ವಲಂತ ಸಮಸ್ಯೆಗಳಿದ್ದು, ಇವುಗಳ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನ ಸೆಳೆಯುವ ಕೆಲಸವನ್ನು ಸಂಘಟನೆಯ ಪದಾಧಿಕಾರಿಗಳು ಮಾಡಬೇಕು. ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳನ್ನು ಎಚ್ಚರಿಸುವುದರ ಜೊತೆಗೆ ಅಭಿವೃದ್ಧಿ ಕಾರ್ಯಗಳು ಗುಣಮಟ್ಟದಿಂದ ನಡೆಯುವಂತೆ ನಿಗಾ ವಹಿಸಬೇಕು. ಕರವೇ ಸಿಂಹ ಸೇನೆಯು ಉತ್ತಮ ಮಾರ್ಗದಲ್ಲಿ ಮುನ್ನಡೆಯುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿ ಎಂದು ಹಾರೈಸಿದರು.ಕರವೇ ಸಿಂಹ ಸೇನೆಯ ತಾಲೂಕು ಅಧ್ಯಕ್ಷ ಚೇತನ್ ಗೌಡ ಮಾತನಾಡಿ, ತಾಲೂಕಿನಲ್ಲಿ ಭ್ರಷ್ಟಾಚಾರ, ಅನ್ಯಾಯವಾಗುತ್ತದೆಯೋ ಅಲ್ಲಿ ನಮ್ಮ ಸಂಘಟನೆಯ ಪದಾಧಿಕಾರಿಗಳು ಧ್ವನಿ ಎತ್ತಲಿದ್ದಾರೆ. ಕುಡಿಯುವ ನೀರಿನ ಸಮಸ್ಯೆ, ಕಳಪೆ ರಸ್ತೆ ನಿರ್ಮಾಣ ಹಾಗೂ ಕಳಪೆ ಕಾಮಗಾರಿಗಳನ್ನು ತಡೆಗಟ್ಟಲು ಹೋರಾಟ ಮತ್ತು ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವ ಮೂಲಕ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಕರವೇ ಸಿಂಹ ಸೇನೆಯ ಉದ್ಯಮಿ ಘಟಕದ ಅಧ್ಯಕ್ಷ ಸುದೀಪ್, ರೈತ ಘಟಕದ ಅಧ್ಯಕ್ಷ ಹಿತೇಶ್, ಶಿವಕುಮಾರ್‌, ಸುಜಯ್, ತಾಲೂಕು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥ ಬಿಟ್ಟು ಸಾರ್ಥಕ ಜೀವನ ನಡೆಸಲು ಕರೆ
ಸರ್ಕಾರಿ ಶಾಲೆಗಳ ಉಳಿವಿಗೆ ಬದ್ಧರಾಗಿರಬೇಕು